ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಾಲಾ ಬಸ್ ಮೇಲೆ ಉರುಳಿದ ಮರ, ಎಲ್ಲಾ ವಿದ್ಯಾರ್ಥಿಗಳು ಸುರಕ್ಷಿತ

|
Google Oneindia Kannada News

ಮಂಗಳೂರು, ಆಗಸ್ಟ್ 14: ದಕ್ಷಿಣ ಕನ್ನಡ ಸೇರಿದಂತೆ ಉಡುಪಿ ಜಿಲ್ಲೆಯಲ್ಲಿ ಮಳೆ ಅಬ್ಬರ ಮತ್ತೆ ಆರಂಭವಾಗಿದೆ. ಒಂದು ದಿನ ಬಿಡುವು ಪಡೆದಿದ್ದ ವರುಣ ಮತ್ತೆ ಅಬ್ಬರಿಸಲು ಆರಂಭಿಸಿದ್ದಾನೆ. ಕಳೆದ ರಾತ್ರಿಯಿಂದ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಇತರ ಭಾಗಗಳಲ್ಲಿ ಒಂದೇ ಸಮನೆ ಮಳೆ ಸುರಿಯುತ್ತಿದೆ.

 ಪುತ್ತೂರು ಬಳಿ ಖಾಸಗಿ ಬಸ್- ಕಾರ್ ಮುಖಾಮುಖಿ ಡಿಕ್ಕಿ, ಚಾಲಕ ಸಾವು ಪುತ್ತೂರು ಬಳಿ ಖಾಸಗಿ ಬಸ್- ಕಾರ್ ಮುಖಾಮುಖಿ ಡಿಕ್ಕಿ, ಚಾಲಕ ಸಾವು

ಈ ನಡುವೆ ಮಂಗಳೂರಿನ ನಂತೂರು ಎಂಬಲ್ಲಿ ಶಾಲಾ ಬಸ್‌ ಮೇಲೆ ಮರ ಉರುಳಿ ಬಿದ್ದ ಘಟನೆ ಬೆಳಕಿಗೆ ಬಂದಿದೆ. ಶಾಲಾ ಬಸ್ ನಲ್ಲಿ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ. ಬಸ್ ನಲ್ಲಿ ಸುಮಾರು 17 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಎಲ್ಲಾ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ.

Tree Fell On School Bus At Nanthur

ಘಟನೆ ನಡೆದ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿ ಶಾಲೆಯ ಪ್ರಾಂಶುಪಾಲರು ಮಾತನಾಡಿದ್ದು, ಎಲ್ಲಾ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಕಳೆದ ರಾತ್ರಿಯಿಂದ ಆರಂಭವಾಗಿರುವ ಮಳೆ ಮುಂದುವರೆಯಲಿದ್ದು, ಮುಂದಿನ 48 ಗಂಟೆಗಳಲ್ಲಿ ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

English summary
A tree fell on school bus at Nanthur circle near Mangaluru. However all 17 children in the bus are safe
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X