Arvind Bolar: ರಸ್ತೆ ಅಪಘಾತದಲ್ಲಿ ತುಳು ಹಾಸ್ಯ ನಟ ಅರವಿಂದ ಬೋಳಾರ್‌ಗೆ ಗಾಯ
ತುಳು ನಾಟಕ ಹಾಗೂ ಸಿನಿಮಾ ಹಾಸ್ಯ ಕಲಾವಿದ ಅರವಿಂದ ಬೋಳಾರ್ ಅವರು ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದು, ಇದೀಗ ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಂಗಳೂರು, ಜನವರಿ, 30: ತುಳು ನಾಟಕ ಹಾಗೂ ಸಿನಿಮಾ ಹಾಸ್ಯ ಕಲಾವಿದ ಮಾಣಿಕ್ಯ ಅರವಿಂದ ಬೋಳಾರ್ ಅವರು ಬೈಕ್ ಸ್ಕಿಡ್ ಆಗಿ ಬಿದ್ದು ಗಾಯಗೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ನಗರದ ಪಂಪ್ ವೆಲ್ ಬಳಿ ಅರವಿಂದ ಬೋಳಾರ್ ಚಲಾಯಿಸುತ್ತಿದ್ದ ಬೈಕ್‌ನ ಎದುರು ವಾಹನವೊಂದು ಅತೀ ವೇಗವಾಗಿ ಬರುತ್ತಿತ್ತು. ಈ ವೇಳೆ ಬೃಹತ್ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಸಡನ್ ಆಗಿ ತಮ್ಮ ಬೈಕ್‌ನ ಬ್ರೇಕ್ ಹಾಕಿದ್ದು, ಈ ವೇಳೆ ಬೈಕ್ ಸ್ಕಿಡ್ ಆಗಿ ಬಿದ್ದಿದೆ. ಪರಿಣಾಮ ಅವರ ಕೈ- ಕಾಲುಗಳಿಗೆ ಸಣ್ಣಪುಟ್ಟ ಗಾಯವಾಗಿದೆ. ಇದೀಗ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಂಗಳವಾರ ಕಾಲಿನ ಶಸ್ತ್ರಚಿಕಿತ್ಸೆ ನಡೆಯಲಿದೆ ಎಂದು ಅರವಿಂದ ಬೋಳಾರ್ ಅವರ ಸಂಬಂಧಿಕರು ಮಾಹಿತಿ ನೀಡಿದ್ದಾರೆ.
ನಂತರ ಮಾತನಾಡಿದ ಅರವಿಂದ್ ಬೋಳಾರ್, ಇದ್ದಕ್ಕಿದ್ದಂತೆ ಬ್ರೇಕ್ ಹಾಕದಿದ್ದಿದ್ದರೆ ವೇಗವಾಗಿ ಬರುತ್ತಿದ್ದ ವಾಹನ ನನ್ನ ಮೇಲೆಯೇ ಹರಿದು ಪ್ರಾಣಕ್ಕೆ ಸಮಸ್ಯೆ ಆಗುತ್ತಿತ್ತು ಎಂದು ಆತಂಕ ವ್ಯಕ್ತಪಡಿಸಿದರು.

ಶರಣ್ ಪಂಪ್ ವೆಲ್ ಹೇಳಿದ್ದೇನು?
ತುಮಕೂರು ಹಾಗೂ ಉಳ್ಳಾಲದಲ್ಲಿ ಭಜರಂಗದಳದ ನೇತೃತ್ವದಲ್ಲಿ ಶೌರ್ಯ ಯಾತ್ರೆ ನಡೆದಿದ್ದು, ಈ ವೇಳೆ ಸುರತ್ಕಲ್ ಫಾಝಿಲ್ ಹತ್ಯೆಯ ರೂವಾರಿ ತಾವೇ ಎಂದು ಭಜರಂಗದಳದ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಬಹಿರಂಗ ಹೇಳಿಕೆ ನೀಡಿದ್ದರು. ಇದೀಗ ಶರಣ್ ಪಂಪ್ ವೆಲ್ ಅವರನ್ನು ಬಂಧಿಸುವಂತೆ ಆಗ್ರಹಿಸಿ ಫಾಝಿಲ್ ತಂದೆ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ದೂರು ಸ್ವೀಕರಿಸಿದ ಪೊಲೀಸ್ ಆಯುಕ್ತ
ದೂರು ಸ್ವೀಕರಿಸಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು, ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ದೂರು ನೀಡುವಂತೆ ಫಾಝಿಲ್ ತಂದೆಗೆ ಸೂಚನೆ ನೀಡಿದ್ದಾರೆ. ಅಲ್ಲದೆ ಪ್ರಕರಣದ ಬಗ್ಗೆ ಕಾನೂನು ಸಲಹೆ ಪಡೆದು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಫಾಝಿಲ್ ತಂದೆ ಹೇಳಿದ್ದೇನು?
ದೂರು ನೀಡಿದ ಫಾಝಿಲ್ ತಂದೆ ಉಮರ್ ಫಾರೂಕ್ ಮಾತನಾಡಿ, "ಶರಣ್ ಪಂಪ್ ವೆಲ್ ತನ್ನ ಪುತ್ರನ ಹತ್ಯೆಯನ್ನು ಸಂಭ್ರಮಿಸಿದ್ದಾನೆ. ಎಂಟು ಮಂದಿ ಓರ್ವನನ್ನು ಹತ್ಯೆ ಮಾಡಿದ್ದಾರೆ. ಅದು ನಿಜವಾದ ಶೌರ್ಯ ಅಲ್ಲ, ಹೇಡಿತನವಾಗಿದೆ. ಶರಣ್ ಪಂಪ್ ವೆಲ್‌ಗೆ ತಾಕತ್ ಇದ್ದಲ್ಲಿ ನಾನು ಒಬ್ಬನೇ ಬರುತ್ತೇನೆ. ಆಗ ನನ್ನೊಂದಿಗೆ ಕಾದಾಡಲಿ, ನಾನು ನೋಡಿಕೊಳ್ಳುತ್ತೇನೆ. ಹಿಂದೂ ಬೇರೆ, ಹಿಂದುತ್ವ ಬೇರೆ. ಹಿಂದೂಗಳು ಒಳ್ಳೆಯವರು. ಆದರೆ ಹಿಂದುತ್ವದಲ್ಲಿ ಇರುವವರು ಹಣ ತೆಗೆದುಕೊಂಡು ಕೃತ್ಯ ಮಾಡುವವರಾಗಿದ್ದಾರೆ. ಈ ಬಗ್ಗೆ ಎಡಿಜಿಪಿಗೂ ಮನವಿ ಮಾಡಿದ್ದೇನೆ. ಪೊಲೀಸರು ಶರಣ್ ಪಂಪ್ ವೆಲ್ ವಿರುದ್ಧ ಸುಮೋಟೋ ಕೇಸ್ ದಾಖಲಿಸಬಹುದಿತ್ತು," ಎಂದು ಹೇಳಿದರು.
ಇನ್ನು ಫಾಝಿಲ್ ಹತ್ಯೆ ವಿಚಾರದಲ್ಲಿ ಶರಣ್ ಪಂಪ್ ವೆಲ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಯುಟಿ ಖಾದರ್, ಈ ರೀತಿಯ ಹೇಳಿಕೆ ಕೊಡುವವರನ್ನು ಗಡಿಪಾರು ಮಾಡಿ. ಕೊಲೆ ಘಟನೆಗಳಿಗೆ ಪ್ರೇರಣೆ ನೀಡುವಂತಹ ಹೇಳಿಕೆ ಸಮಾಜಕ್ಕೆ ಅತ್ಯಂತ ಅಪಾಯಕಾರಿ. ಈ ಹೇಳಿಕೆ ಕೊಡುವವರು ನಿಜವಾದ ದೇಶದ್ರೋಹಿಗಳು. ಸಮಾಜ ಒಗ್ಗಾಟಾಗಿರಬೇಕೆಂಬುದು ನಮ್ಮ ನಿಲುವಾಗಿದೆ. ಹಿಂದೂ, ಮುಸ್ಲಿಂ, ಕ್ರೈಸ್ತ ಯಾರ ಕೊಲೆಯೂ ಆಗಬಾರದು ಎಂದು ಪ್ರಯತ್ನಪಡಬೇಕು ಎಂದು ಹೇಳಿದರು.












Click it and Unblock the Notifications