ಕಾರು ಅಪಘಾತದಲ್ಲಿ ಯುವ ತುಳು ಚಿತ್ರ ನಿರ್ದೇಶಕ ಸಾವು
ಮಂಗಳೂರು, ಮಾರ್ಚ್ 22: ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವ ತುಳು ಚಿತ್ರ ನಿರ್ದೇಶಕ ಮೃತಪಟ್ಟ ಘಟನೆ ಮೂಡಬಿದ್ರೆ ಸಮೀಪ ಕಳೆದ ತಡರಾತ್ರಿ ನಡೆದಿದೆ. ಹ್ಯಾರಿಸ್ (30) ಮೃತಪಟ್ಟ ನಿರ್ದೇಶಕ.
ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ
ಹ್ಯಾರಿಸ್ ಹೌದಾಲ್ ತಮ್ಮ ಓಮಿನಿ ಕಾರಿನಲ್ಲಿ ಕಳೆದ ತಡರಾತ್ರಿ ಮೂಡುಬಿದ್ರೆಯಿಂದ ಶಿರ್ತಾಡಿ ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ. ನಿದ್ದೆ ಮಂಪರಿನಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹ್ಯಾರಿಸ್ ಹೌದಾಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸದ್ಯ ಹ್ಯಾರಿಸ್ ನಿರ್ದೇಶನದ "ಆಟಿಡೊಂಜಿ ದಿನ ತುಳು" ಸಿನೆಮಾದ ಶೂಟಿಂಗ್ ನಡೆಯುತ್ತಿದ್ದು, ಕಳೆದ ಮೂರು ದಿನಗಳಿಂದ ಸರಿಯಾಗಿ ನಿದ್ದೆ ಇಲ್ಲದ ಹಿನ್ನೆಲೆಯಲ್ಲಿ ತಡರಾತ್ರಿ ಕಾರು ಚಲಾಯಿಸಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಈ ಕುರಿತು ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications