ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತುಳು ಸಾಹಿತ್ಯ ಅಕಾಡೆಮಿಯ 2017ನೇ ಸಾಲಿನ ಗೌರವ ಪ್ರಶಸ್ತಿ ಪ್ರಕಟ

|
Google Oneindia Kannada News

ಮಂಗಳೂರು, ಮಾರ್ಚ್ 24: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 2017ನೇ ಸಾಲಿನ ಗೌರವ ಪ್ರಶಸ್ತಿ ಪ್ರಕಟಗೊಂಡಿದೆ. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 3 ಮಂದಿ ಹಿರಿಯರನ್ನು 2017ನೇ ಸಾಲಿನ ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ತುಳು ಯಕ್ಷಗಾನ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಡಾ. ಎನ್. ನಾರಾಯಣ ಶೆಟ್ಟಿ, ಜಾನಪದ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಂಜನಾಡಿಯ ಸೇಸಪ್ಪ ಪಂಬದ ಹಾಗೂ ತುಳು ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ ಎಚ್. ಶಕುಂತಳಾ ಭಟ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

'ಮಿತ್ತಬೈಲು ಯಮುನಕ್ಕ' ಕಾದಂಬರಿ ಕುವೈತ್ ನಲ್ಲಿ ಲೋಕಾರ್ಪಣೆ'ಮಿತ್ತಬೈಲು ಯಮುನಕ್ಕ' ಕಾದಂಬರಿ ಕುವೈತ್ ನಲ್ಲಿ ಲೋಕಾರ್ಪಣೆ

Tulu Sahitya Academy announces annual awards

2017ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿಗಾಗಿ 3 ವಿಭಾಗಗಳಲ್ಲಿ ತಲಾ ಒಂದು ಪುಸ್ತಕವನ್ನು ತೀರ್ಪುಗಾರರ ಮೂಲಕ ಆಯ್ಕೆ ಮಾಡಲಾಗಿದೆ. ಅಧ್ಯಯನ ವಿಭಾಗದಲ್ಲಿ ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್‍ ಅವರ 'ತುಳುನಾಡಿನ ಜನಪದ ಪ್ರದರ್ಶನ ಕಲೆಗಳು', ಕವನ ಸಂಕಲನ ವಿಭಾಗದಲ್ಲಿ ರೂಪಕಲಾ ಆಳ್ವರವರ 'ಪಡೆಪ್ಪಿರೆ', ಹಾಗೂ ಕಥಾ ಸಂಕಲನ ವಿಭಾಗದಲ್ಲಿ ಶಿಮಂತೂರು ಚಂದ್ರಹಾಸ ಸುವರ್ಣರ 'ಗಗ್ಗರ' ಕೃತಿಯನ್ನು ಪುಸ್ತಕ ಬಹುಮಾನಕ್ಕೆ ಆಯ್ಕೆ ಮಾಡಲಾಗಿದೆ.

ಪ್ರಶಸ್ತಿ ಪ್ರದಾನ ಸಮಾರಂಭ ಇದೇ ಬರುವ ಏಪ್ರಿಲ್ 7 ರಂದು ತುಳು ಭವನದ 'ಸಿರಿಚಾವಡಿ'ಯಲ್ಲಿ ಜರಗಲಿದೆ.

English summary
Tulu Sahitya Academy announced honorary and book awards for the year 2017 to six eminent personalities for their contribution to the Tulu literature.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X