ಇನ್ಮುಂದೆ ತಾಲೂಕು, ಜಿಲ್ಲಾ ಮಟ್ಟದಲ್ಲಿ ತುಳು ಸಾಹಿತ್ಯ ಸಮ್ಮೇಳನ

ಮಂಗಳೂರು, ಅಕ್ಟೋಬರ್ 07 : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಆಶ್ರಯದಲ್ಲಿ ತಾಲೂಕು ಹಾಗೂ ಜಿಲ್ಲಾ ಮಟ್ಟದ ತುಳು ಸಾಹಿತ್ಯ ಸಮ್ಮೇಳನ ಆಯೋಜಿಸಲು ನಿರ್ಧರಿಸಾಗಿದೆ.

ತಾಲೂಕು ಮಟ್ಟದ ಪ್ರಥಮ ತುಳು ಸಾಹಿತ್ಯ ಸಮ್ಮೇಳನವನ್ನು ಮುಂದಿನ ಡಿಸೆಂಬರ್ ತಿಂಗಳಿನಲ್ಲಿ ಬಂಟ್ವಾಳದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ. ಅಕಾಡೆಮಿ ಅಧ್ಯಕ್ಷರಾದ ಎ. ಸಿ. ಭಂಡಾರಿಯವರ ಅಧ್ಯಕ್ಷತೆಯಲ್ಲಿ ಅಕಾಡೆಮಿ ವತಿಯಿಂದ ರಚಿಸಲಾದ ಉಪಸಮಿತಿಯ ಸಭೆಯಲ್ಲಿ ಈ ಕುರಿತು ನಿರ್ಧರಿಸಲಾಯಿತು.

Tulu Sahitya Academy has decided to organize taluk and district level Tulu Sahitya Sammelan

ಸಮ್ಮೇಳನದ ಸ್ವರೂಪ ಮತ್ತು ರೂಪುರೇಷೆಗಳ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳಲು ನಿರ್ದರಿಸಲಾಗಿದೆ. ತಾಲೂಕಿನಲ್ಲಿರುವ ತುಳುಪರ ಸಂಘಟನೆಗಳು, ತುಳು ಸಾಹಿತಿ, ಸಂಶೋಧಕರು, ಜಾನಪದ ಕಲಾವಿದರು ಒಳಗೊಂಡಂತೆ ಸಮಿತಿ ರಚಿಸಿಕೊಂಡು ತುಳು ಸಮ್ಮೇಳನ ನಡೆಸಲು ಸಭೆಯಲ್ಲಿ ಸೂಚಿಸಲಾಯಿತು.

ಸಮ್ಮೇಳನದ ವ್ಯವಸ್ಥೆಯ ಬಗ್ಗೆ ಆಯಾ ತಾಲೂಕಿನ ತುಳು ಪರ ಸಂಘಟನೆಗಳ ಪ್ರಮುಖರ ಸಲಹೆಗಳನ್ನು ಪಡೆದು ಸಮ್ಮೇಳನದ ಸ್ವರೂಪ ನಿರ್ಧರಿಸುವುದು ಒಳಿತು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+