ಆಗಸ್ಟ್ 10 ರಂದು ಮತ್ತೊಮ್ಮೆ ತುಳು ಭಾಷೆ ಮಾನ್ಯತೆಗಾಗಿ ಟ್ವೀಟ್ ಅಭಿಯಾನ
ಮಂಗಳೂರು, ಜುಲೈ.30: ತುಳುವನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆ ಹೋರಾಟಗಳು ಮುಂದುವರಿಯುತ್ತಲೇ ಇದೆ. ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವಂತೆ 2001ರಲ್ಲಿ ಒತ್ತಾಯಿಸಲಾಗಿತ್ತು.
ನಂತರ 2002ರಲ್ಲಿ ಮತ್ತೆ 14 ಭಾಷೆಗಳು ಇದೇ ಬೇಡಿಕೆ ಇಟ್ಟಿದ್ದರಿಂದ ಕೇಂದ್ರ ಸರ್ಕಾರ ಸಮಿತಿ ರಚಿಸಿ ಸಂವಿಧಾನದ ಎಂಟನೇ ಪರಿಚ್ಛೇದ ಸೇರ್ಪಡೆಯ ಕೆಲವು ನಿಯಮಾವಳಿಗಳಿಗೆ ಬದಲಾವಣೆ ತರಲಾಗಿತ್ತು. ಈ ಹಿನ್ನಲೆಯಲ್ಲಿ ಈಗ ತುಳು ಭಾಷೆ ಸಂವಿಧಾನದ ಎಂಟನೇ ಪರಿಚ್ಛೇದ ಸೇರ್ಪಡೆಗೆ ಮೊದಲು ರಾಜ್ಯದ ಅಧಿಕೃತ ಭಾಷೆ ಎಂಬ ಮಾನ್ಯತೆಯನ್ನು ತುಳು ಭಾಷೆ ಪಡೆಯಬೇಕಾಗಿದೆ.
ತುಳು ಭಾಷೆಯ ಉಳಿವಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಸೇರ್ಪಡೆಯಾಗುವವರು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈ ನಡುವೆ ಮತ್ತೊಮ್ಮೆ ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಲು ಆಗ್ರಹಿಸಿ ತುಳು ಸಂಘಟನೆಗಳು ಮತ್ತೊಮ್ಮೆ ಟ್ವೀಟ್ ಅಭಿಯಾನ ಕೈಗೊಳ್ಳಲಿದ್ದಾರೆ.

ಇದೇ ಆಗಸ್ಟ್ ತಿಂಗಳ 10 ರಂದು ಮತ್ತೊಮ್ಮೆ ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಲು ಟ್ವೀಟರ್ ಅಭಿಯಾನ ನಡೆಯಲಿದೆ. ಆದರೆ ಈ ಬಾರಿಯ ಅಭಿಯಾನ ಸ್ವಲ್ಪಮಟ್ಟಿಗೆ ವಿಭಿನ್ನವಾಗಿ ನಡೆಯಲಿದೆ.
ಕರ್ನಾಟಕ ಹಾಗೂ ಕೇರಳ ಎರಡು ಸರಕಾರಗಳು ಕೂಡ ತುಳು ಭಾಷೆಗೆ ರಾಜ್ಯ ಮಾನ್ಯತೆ ನೀಡಬೇಕೆಂದು ಅಭಿಯಾನದ ಮೂಲಕ ಆಗ್ರಹಿಸುತ್ತಿದ್ದಾರೆ. ತುಳು ಭಾಷೆಗೆ ಸರಕಾರದಿಂದ ಸಿಗಬೇಕಾದ ಮಾನ್ಯತೆ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳು ಪರಿಣಾಮಕಾರಿಯಾಗಿ ಕೆಲಸ ಮಾಡಬಲ್ಲದು ಎಂಬ ನೆಲೆಯಲ್ಲಿ ಟ್ವೀಟ್ ಅಭಿಯಾನವನ್ನು ಮತ್ತೊಮ್ಮೆ ಕೈಗೆತ್ತಿಕೊಳ್ಳಲಾಗಿದೆ.

ಸರಕಾರಕ್ಕೆ ಸಂಬಂಧಿಸಿದ ಹೆಚ್ಚಿನ ಅಧಿಕಾರಿಗಳು, ಜನಪ್ರತಿನಿಧಿಗಳು, ಅಧಿಕಾರಿಗಳು ಟ್ವಿಟ್ಟರ್‌ನಲ್ಲಿ ಖಾತೆ ಹೊಂದಿದ್ದಾರೆ. ಇಂದಿನ ಯುವ ಪೀಳಿಗೆ ಕೂಡ ಟ್ವಿಟ್ಟರ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿದೆ. ಇವೆರಡರ ಕೊಂಡಿಯಾಗಿ ಈ ಅಭಿಯಾನ ಕೆಲಸ ಮಾಡಲಿದೆ.

ಟ್ವೀಟ್ ಅಭಿಯಾನ ಆಗಸ್ಟ್ 10ರಂದು ಬೆಳಗ್ಗೆ 6 ಗಂಟೆಯಿಂದ ರಾತ್ರಿ 11.59ರ ವರೆಗೆ ನಡೆಯಲಿದೆ. "#TuluOfficialinKA_KL" ಎಂಬ ಹ್ಯಾಶ್‌ಟ್ಯಾಗ್ ಮೂಲಕ ಟ್ವೀಟ್ ಅಭಿಯಾನ ನಡೆಯಲಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ತುಳುವರು ಮಾತ್ರವಲ್ಲದೆ ದೇಶ-ವಿದೇಶಗಳಲ್ಲಿ ನೆಲೆಸಿರುವ ತುಳು ಭಾಷಿಗರು ಕೂಡ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications