ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರಿನಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ; ಇಬ್ಬರ ಬಂಧನ

|
Google Oneindia Kannada News

ಮಂಗಳೂರು, ಜೂನ್ 06: ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರನ್ನು ಮಟ್ಟಹಾಕಲು ಮಂಗಳೂರು ಪೊಲೀಸರು ಪಣ ತೊಟ್ಟಿದ್ದಾರೆ. ಕ್ರಿಕೆಟ್ ಬೆಟ್ಟಿಂಗ್ ವ್ಯವಹಾರಗಳ ಬಗ್ಗೆ ಹದ್ದಿನ ಕಣ್ಣಿಟ್ಟಿರುವ ಪೊಲೀಸರು ನಗರದಲ್ಲಿ ವಿಶ್ವಕಪ್‌ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತರನ್ನು ತಲಪಾಡಿ ನಿವಾಸಿ ದೇವಿಕಿರಣ್ (24) ಮತ್ತು ಜಪ್ಪಿನಮೊಗರು ನಿವಾಸಿ ಕೀರ್ತಿರಾಜ್‌ (24) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 7.20 ಲಕ್ಷ ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿದೆ.

Two arrested for Cricket betting in Mangaluru

ವಿಶ್ವಕಪ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಬುಕ್ಕಿ ಬಂಧನವಿಶ್ವಕಪ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಬುಕ್ಕಿ ಬಂಧನ

ಬಂಧಿತ ಆರೋಪಿಗಳು ಲೋಟಸ್‌ ಮತ್ತು ಆರೆಂಜ್‌ ಆಪ್‌ ಬಳಸಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು. ಐಪಿಎಲ್ ಮತ್ತು ವಿಶ್ವಕಪ್‌ ಕ್ರಿಕೆಟ್‌ ಸಂದರ್ಭ ನಗರದಲ್ಲಿ ದೊಡ್ಡ ಮಟ್ಟದಲ್ಲಿ ಬೆಟ್ಟಿಂಗ್ ಜಾಲವಿರುವ ಬಗ್ಗೆ ಮನಗಂಡ ಕಮಿಷನರ್‌ ಸಂದೀಪ್‌ ಪಾಟೀಲ್ ಈ ಕೃತ್ಯದ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ನಗರ ಪೊಲೀಸರು ಕಾರ್ಯಚರಣೆ ಆರಂಭಿಸಿದ್ದಾರೆ.

English summary
Mangaluru CCB police arrested two person for accepting bets for world cup cricket. Arrested bookies identified as Devikiran and Kirthiraj
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X