ಮಂಗಳೂರಿನಲ್ಲಿ ನಕಲಿ ನೋಟು ಹೊಂದಿದ್ದ ಇಬ್ಬರ ಬಂಧನ
ಮಂಗಳೂರು, ಜನವರಿ 4: 4.5 ಲಕ್ಷ ಮೌಲ್ಯದ ನಕಲಿ ನೋಟುಗಳನ್ನು ಹೊಂದಿದ್ದ ಇಬ್ಬರನ್ನು ಕರ್ನಾಟಕ ಪೊಲೀಸರು ಮಂಗಳವಾರ ಮಂಗಳೂರಿನಲ್ಲಿ ಬಂಧಿಸಿದ್ದಾರೆ.
ನಕಲಿ ನೋಟು ಹೊಂದಿದ್ದ ಈ ಇಬ್ಬರು ಆರೋಪಿಗಳನ್ನು ನಿಜಾಮುದ್ದೀನ್ ಮತ್ತು ರಜೀಮ್ ಎಂದು ಗುರುತಿಸಲಾಗಿದೆ. 500 ಮುಖಬೆಲೆಯ 4.5 ಲಕ್ಷ ರೂಪಾಯಿ ಮೌಲ್ಯದ ನಕಲಿ ನೋಟುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇವರಿಂದ ಕಳವು ಮಾಡಿದ ವಾಹನವನ್ನೂ ವಶಪಡಿಸಿಕೊಳ್ಳಲಾಗಿದೆ. ಇಬ್ಬರೂ ಆರೋಪಿಗಳ ವಿರುದ್ಧ ಈ ಹಿಂದೆ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿಜಾಮುದ್ದೀನ್ ವಿರುದ್ಧ ಎರಡು ಕೊಲೆ ಪ್ರಕರಣಗಳು ಸೇರಿದಂತೆ ಐದು ಪ್ರಕರಣಗಳಿವೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಿಂದ ನೋಟುಗಳನ್ನು ತಂದಿರುವುದಾಗಿಯೂ, ನಕಲಿ ನೋಟುಗಳನ್ನು ಖರೀದಿಸಲು 1.10 ಲಕ್ಷ ರೂ. ಪಾವತಿಸಿರುವುದಾಗಿಯೂ ಆರೋಪಿಗಳು ತಿಳಿಸಿದ್ದಾರೆ. ನಕಲಿ ನೋಟುಗಳನ್ನು ಪಡೆದ ವ್ಯಕ್ತಿಯೇ ಕೊಯಮತ್ತೂರಿನಲ್ಲಿ ಹಣ ಮುದ್ರಿಸಿರುವುದಾಗಿ ತಿಳಿಸಿದ್ದಾಗಿಯೂ ಅವರು ತಿಳಿಸಿದ್ದಾರೆ. ಅದನ್ನು ತನಿಖೆ ಮಾಡುತ್ತಿದ್ದೇವೆ ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ.

ಬೆಂಗಳೂರಿನ ಡ್ಯಾನಿಯಲ್ ಎಂಬಾತನಿಂದ ಈ ಇಬ್ಬರು ಬಂಧಿತ ಆರೋಪಿಗಳು ನಕಲಿ ನೋಟುಗಳನ್ನು ಪಡೆದುಕೊಂಡು ಮಂಗಳೂರಿನಲ್ಲಿ ಓಡಾಡುತ್ತಿದ್ದರು. ಜ. 2 ರಂದು ನಗರದ ನಂತೂರು ಎಂಬಲ್ಲಿ ವಾಹನ ತಪಾಸಣೆಯನ್ನು ಪೊಲೀಸರು ನಡೆಸುತ್ತಿದ್ದ ಸಂದರ್ಭದಲ್ಲಿ ಸ್ಕೂಟರ್ ವೊಂದು ಅತಿವೇಗದಿಂದ ಹೋಯಿತು. ಇದನ್ನು ಹಿಡಿದು ತಪಾಸಣೆ ನಡೆಸಿದಾಗ ಖೋಟಾ ನೋಟು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ನಕಲಿ ನೋಟಗಳನ್ನು ಡ್ಯಾನಿಯಲ್ನಿಂದ ಪಡೆದುಕೊಂಡಿದ್ದು, ಇದಕ್ಕೂ ಮುಂಚೆ ಡ್ಯಾನಿಯಲ್ ಖೋಟಾ ನೋಟು ಪ್ರಕರಣದಲ್ಲಿ ಬೆಂಗಳೂರಿನಲ್ಲಿ ಬಂಧಿಸಲ್ಪಟ್ಟಿದ್ದಾನೆ. ಈ ಖೋಟಾ ನೋಟನ್ನು ಡ್ಯಾನಿಯಲ್ ತಮಿಳುನಾಡಿನ ಕೊಯಮುತ್ತೂರಿನಲ್ಲಿ ಮುದ್ರಿಸಿ ವಿತರಿಸಿದ್ದ ಎಂದು ಬಂಧಿತರು ತಿಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ನಿಜಾಂನ ವಿರುದ್ದ 2015ರಲ್ಲಿ ವಿಟ್ಲದಲ್ಲಿ ಕೊಲೆ ಪ್ರಕರಣ, 2015 ರಲ್ಲಿ ಮಂಗಳೂರು ಕಾರಗೃಹದಲ್ಲಿ ಕೊಲೆ ಪ್ರಕರಣ, 2017 ರಲ್ಲಿ ಕೊಡಗಿನ ಕುಶಾಲನಗರ ಠಾಣೆಯಲ್ಲಿ ದರೋಡೆ ಪ್ರಕರಣ, 2018 ರಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ಮತ್ತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ನಡೆದ ಸುಲಿಗೆ ಪ್ರಕರಣ ದಾಖಲಾಗಿದೆ. ಆರೋಪಿ ರಾಫೀ ವಿರುದ್ದ ಉರ್ವ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಪತ್ತೆ ಹಚ್ಚಿದ ಪೊಲೀಸ್ ತಂಡಕ್ಕೆ 10 ಸಾವಿರ ರೂ. ನಗದು ಬಹುಮಾನ ನೀಡಲಾಗುವುದು ಎಂದು ತಿಳಿಸಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications