ಉಕ್ರೇನ್‌ನಲ್ಲಿ ಸಿಲುಕಿರುವ ಮಂಗಳೂರು ಮೂಲದ ಇಬ್ಬರು ವಿದ್ಯಾರ್ಥಿಗಳು
ನವದೆಹಲಿ ಫೆಬ್ರವರಿ 24: ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಸಂಘರ್ಷವು ಕೇವಲ ಎರಡು ದೇಶಗಳ ಮೇಲೆ ಮಾತ್ರ ಪರಿಣಾಮ ಬೀರುತ್ತಿಲ್ಲ. ಬೇರೆ ಬೇರೆ ದೇಶಗಳ ಮೇಲೂ ಪರಿಣಾಮ ಬೀರಿದೆ. ಭಾರತದ ಹಲವಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಉಕ್ರೇನ್‌ನಲ್ಲಿರುವುದು ತಿಳಿದು ಬಂದಿದೆ. ಉಕ್ರೇನ್‌ನಲ್ಲಿ ಮಂಗಳೂರು ಮೂಲದ ವೈದ್ಯಕೀಯ ವಿದ್ಯಾರ್ಥಿ ಸಿಲುಕಿರೋದಾಗಿ ತಿಳಿದು ಬಂದಿದೆ.
ಮಂಗಳೂರಿನ ದೇರೇಬೈಲ್ ನಿವಾಸಿ ಅನೈನಾ ಅನ್ನ ಅವರು ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದಾರೆ. ಉಕ್ರೇನ್‌ನ ಖಾರ್ಕಿವ್ ನಗರದ ಗಡಿ ಭಾಗದಲ್ಲಿ ನೆಲೆಸಿರೋ ಅನೈನಾ ಮಂಗಳೂರಿನಲ್ಲಿರೋ ತಾಯಿ ಸಂಧ್ಯಾ ಜೊತೆ ಫೋನ್ ಕರೆಯಲ್ಲಿ ಮಾತನಾಡಿದ್ದಾರೆ. ಸದ್ಯ ಉಕ್ರೇನ್‌ನಲ್ಲಿ ಸುರಕ್ಷಿತ ಸ್ಥಳದಲ್ಲಿರೋ ಬಗ್ಗೆ ಹೆತ್ತವರಿಗೆ ಮಾಹಿತಿ ನೀಡಿದ್ದಾರೆನ್ನುವ ಮಾಹಿತಿ ಲಭ್ಯವಾಗಿದೆ.
ಉಕ್ರೇನ್ ಏರ್‌ಪೋರ್ಟ್‌ನಲ್ಲಿ ಸಿಲುಕಿದ ಕರ್ನಾಟಕದ 10 ವಿದ್ಯಾರ್ಥಿಗಳು: ಸಿಎಂ ಬೊಮ್ಮಾಯಿ
ಇನ್ನೂ ಉಕ್ರೇನ್ ನಲ್ಲಿ ಸಿಲುಕಿರುವ ಮತ್ತೋರ್ವ ಮಂಗಳೂರು ಪಡೀಲು ನಿವಾಸಿ ಕ್ಲಾಟನ್ ಅವರು ಸದ್ಯಕ್ಕೆ ಯಾವುದೇ ರೀತಿ ತೊಂದರೆ ಇಲ್ಲ ಎಂಬ ಸಂದೇಶ ರವಾನೆ ಮಾಡಿದ್ದಾರೆ. ಜೊತೆಗೆ ಉಕ್ರೇನ್ ವಿದ್ಯಾರ್ಥಿ ಪೋಷಕರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರನ್ನು ಸಂಪರ್ಕಿಸಿದ್ದಾರೆ. ಕ್ಲಾಟನ್ ಇರುವ ಕಡೆಯಿಂದ ನೂರಾರು ಕಿಲೋಮೀಟರ್ ದೂರದಲ್ಲಿ ಏರ್ ಬಾಂಬುಗಳು ಅಟ್ಯಾಕ್ ಆಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸದ್ಯಕ್ಕೆ ವಿದ್ಯಾರ್ಥಿ ಮತ್ತು ಮತ್ತೋರ್ವ ವಿದ್ಯಾರ್ಥಿನಿ ಇರುವ ಕಡೆ ಯಾವುದೇ ತೊಂದರೆ ಇಲ್ಲ ಎಂದು ಮಂಗಳೂರು ಮೂಲದ ವಿದ್ಯಾರ್ಥಿಗಳು ಮಾಹಿತಿ ನೀಡಿದ್ದಾರೆ. ಉಕ್ರೆನ್ ನಲ್ಲಿ ವೈದ್ಯಕೀಯ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿ ಕ್ಲಾಟನ್ ಪೋಷಕರಿಗೆ ಕರೆ ಮಾಡಿದ್ದಾರೆ.

ರಷ್ಯಾ ಸೇನೆ ನಡೆಸುತ್ತಿರುವ ದಾಳಿಗೆ ಉಕ್ರೇನ್ ಕೂಡ ಪ್ರತಿದಾಳಿ ನಡೆಸುತ್ತಿದೆ. ಎರಡು ರಾಷ್ಟ್ರಗಳ ನಡುವಿನ ಸಮರ ಜಾಗತಿಕ ಮಟ್ಟದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದ್ದು, ಜಗತ್ತು ಮೂರನೇ ಮಹಾಯುದ್ಧಕ್ಕೆ ಸಾಕ್ಷಿ ಆಗುತ್ತದೆಯೇ ಎಂಬ ಆತಂಕ ಸೃಷ್ಟಿಯಾಗುತ್ತಿದೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಪೂರ್ವ ಉಕ್ರೇನ್ ಮತ್ತು ಯುನೈಟೆಡ್ ಸ್ಟೇಟ್ಸ್‌ನಲ್ಲಿನ ಬಂಡುಕೋರರ ಹಿಡಿತದಲ್ಲಿರುವ ಪ್ರದೇಶಗಳಿಗೆ ಸೈನ್ಯವನ್ನು ಕಳುಹಿಸುವುದರೊಂದಿಗೆ ಬಿಕ್ಕಟ್ಟು ಶುರುವಾಗಿದ್ದು, ಮಿತ್ರರಾಷ್ಟ್ರಗಳು ರಷ್ಯಾದ ಮೇಲೆ ನಿರ್ಬಂಧಗಳನ್ನು ಹೇರುವುದರೊಂದಿಗೆ, ಪರಿಸ್ಥಿತಿಯು ಕಠೋರವಾಗಿದೆ.

ರಷ್ಯಾದಿಂದ ಸಂಭಾವ್ಯ ವಾಯುದಾಳಿಯ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ. ದೇಶದ ಪೂರ್ವಭಾಗದಲ್ಲಿರುವ ವಾಯುವಲಯವನ್ನು 'ಅಪಾಯ ಪ್ರದೇಶ' ಎಂದು ಅಧಿಕಾರಿಗಳು ಘೋಷಿಸಿದ್ದಾರೆ. ರಷ್ಯಾ ವಿಮಾನಯಾನ ಇಲಾಖೆ ಈ ವಾಯುಪ್ರದೇಶವನ್ನು ತನ್ನ ಸುಪರ್ದಿಗೆ ಪಡೆಯುವ ಸಾಧ್ಯತೆ ದಟ್ಟವಾಗಿದ್ದು ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಲಾಗಿದೆ.
ರಷ್ಯಾ-ಉಕ್ರೇನ್ ಯುದ್ಧದಿಂದ ಭಾರತದಲ್ಲಿ ಈ ಅಗತ್ಯ ವಸ್ತುಗಳು ಬಲುದುಬಾರಿ!
ಈಗಾಗಲೇ ರಷ್ಯಾ ತನ್ನ ಆಕ್ರಮಣ ನೀತಿಯಿಂದ ಹಿಂದೆ ಸರಿಯುವಂತೆ ವಿಶ್ವಸಂಸ್ಥೆ ಪದೇ ಪದೇ ಮನವಿ ಮಾಡುತ್ತಿದೆ. ಇನ್ನೊಂದೆಡೆ, ಅಮೆರಿಕ ಸೇರಿದಂತೆ ಕೆಲವು ದೇಶಗಳು ರಷ್ಯಾಗೆ ಹಲವು ರೀತಿಯಲ್ಲಿ ಆರ್ಥಿಕ ನಿರ್ಬಂಧಗಳನ್ನು ವಿಧಿಸಿದ್ದು ಕಠಿಣ ಕ್ರಮದ ಎಚ್ಚರಿಕೆಯನ್ನೂ ನೀಡಿದೆ.
ಉಕ್ರೇನ್ ಬಿಕ್ಕಟ್ಟಿನ ವಿಚಾರದ ಕುರಿತಂತೆ ಭಾರತದ ಸ್ವತಂತ್ರ ನಿಲುವನ್ನು ನಾವು ಸ್ವಾಗತಿಸುತ್ತೇವೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಉಭಯ ದೇಶಗಳ ನಡುವಿನ ವಿಶೇಷವಾದ ಪಾಲುದಾರಿಕೆಯನ್ನು ಭಾರತದ ಈ ನಡೆ ಪ್ರತಿಬಿಂಬಿಸುತ್ತದೆ ರಷ್ಯಾ ಶ್ಲಾಫಿಸಿದೆ.
ಸಹಾಯವಾಣಿ: Contact details of helpline in Indian Embassy in Ukraine: +380 997300428, +380 997300483
Toll free: 1800118797, Phones: +91 11 23012113, +91 11 23014104, +91 11 23017905 , Email: [email protected]












Click it and Unblock the Notifications