ಪುತ್ತೂರಿನಲ್ಲಿ ತಾತ, ಮೊಮ್ಮಗಳ ಬರ್ಬರ ಹತ್ಯೆ
ಮಂಗಳೂರು, ನವೆಂಬರ್ 19: ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಇಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕುರಿಯದ ಹೊಸಮಾರು ಎಂಬಲ್ಲಿ ನಡೆದಿದೆ.
ದುಷ್ಕರ್ಮಿಗಳು ಮೂವರ ಮೇಲೆ ಹಲ್ಲೆ ನಡೆಸಿದ್ದು, ಇಬ್ಬರು ಸಾವನ್ನಪ್ಪಿ ಒಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಕುರಿಯ ನಿವಾಸಿ ಕೊಗ್ಗು ಸಾಹೇಬ್ (65) ಮತ್ತು ಅವರ ಮೊಮ್ಮಗಳು 9ನೇ ತರಗತಿ ವಿದ್ಯಾರ್ಥಿನಿ ಸಮೀಹ ಬಾನು ಕೊಲೆಯಾದವರು. ಖತೀಜಾ ಅವರು ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊಲೆಯಾದ ಕೊಗ್ಗು ಸಾಹೇಬರವರ ಪುತ್ರ ರಝಾಕ್ ಪುತ್ತೂರಿನಲ್ಲಿ ವಾಸವಾಗಿದ್ದಾರೆ. ಮಂಗಳವಾರ ಬೆಳಗ್ಗೆ ಹೊಸಮಾರು ಮನೆಗೆ ಬಂದಾಗ ಮೂವರು ರಕ್ತಸಿಕ್ತವಾಗಿ ಬಿದ್ದಿರುವುದು ಕಂಡುಬಂದಿದೆ. ಕೊಲೆಯ ಹಿಂದಿನ ಹಂತಕರು ಯಾರೆಂಬುದು ತಿಳಿದುಬಂದಿಲ್ಲ. ಕೊಲೆಯ ಉದ್ದೇಶವೂ ತಿಳಿದುಬಂದಿಲ್ಲ. ಸಂಪ್ಯ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.











Click it and Unblock the Notifications