ಪೋಕ್ಸೋ ಪ್ರಕರಣದಲ್ಲಿ ನಿರಪರಾಧಿಯ ಬಂಧನ: ಇಬ್ಬರು ಮಹಿಳಾ ಪೊಲೀಸರಿಗೆ ದಂಡ
ಮಂಗಳೂರು, ಡಿ.2: ಪೋಕ್ಸೊ ಪ್ರಕರಣವೊಂದರಲ್ಲಿ ನಿರಪರಾಧಿಯನ್ನು ಬಂಧಿಸಿ ಒಂದು ವರ್ಷ ನ್ಯಾಯಾಂಗ ಬಂಧನದಲ್ಲಿಟ್ಟಿದ್ದ ಇಬ್ಬರು ಮಹಿಳಾ ಪೊಲೀಸರಿಗೆ 5 ಲಕ್ಷ ದಂಡ ವಿಧಿಸಲಾಗಿದೆ. ಮಂಗಳೂರಿನ ಎರಡನೇ ಹೆಚ್ಚುವರಿ ತ್ವರಿತಗತಿ ವಿಶೇಷ ನ್ಯಾಯಾಲಯ (ಪೋಕ್ಸೊ ನ್ಯಾಯಾಲಯ) ದಂಡ ವಿಧಿಸಿ ಆದೇಶಿಸಿದೆ.
ಪ್ರಕರಣದಲ್ಲಿ ನ್ಯಾಯಾಲಯದಿಂದ ಖುಲಾಸೆಗೊಂಡಿರುವ ನವೀನ್ ಸಿಕ್ವೇರಾ ಅವರಿಗೆ ದಂಡದ ಮೊತ್ತವನ್ನು ಪರಿಹಾರವಾಗಿ ಪಾವತಿಸುವಂತೆ ನ್ಯಾಯಾಧೀಶ ಕೆ.ಯು.ರಾಧಾಕೃಷ್ಣ ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಚಿತ್ರದುರ್ಗ: ಮುರುಘಾ ಶ್ರೀಗಳ ಎರಡನೇ ಪೋಕ್ಸೋ ಪ್ರಕರಣದ ಜಾಮೀನು ಅರ್ಜಿ ವಜಾ
ನಗರದ ಮಹಿಳಾ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಪಿ.ಪಿ.ರೋಸಮ್ಮ ಮತ್ತು ಇನ್ಸ್ ಪೆಕ್ಟರ್ ರೇವತಿ ಅವರಿಗೆ ದಂಡ ವಿಧಿಸ ಆದೇಶ ನೀಡಲಾಗಿದೆ. ತಪ್ಪಿತಸ್ಥ ಮಹಿಳಾ ಪೊಲೀಸ್ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿಗೆ ನ್ಯಾಯಾಧೀಶರು ಸೂಚಿಸಿದ್ದಾರೆ.
ಪ್ರಕರಣದಲ್ಲಿ ಸಂತ್ರಸ್ತೆಯ ಹೇಳಿಕೆಯ ಆಧಾರದ ಮೇಲೆ ಆರೋಪಿ ನವೀನ್ ಎಂದು ತಪ್ಪಾದ ಗುರುತಿನ ಮೇಲೆ ನವೀನ್ ಸಿಕ್ವೇರಾ ಅವರನ್ನು ಬಂಧಿಸಲಾಗಿತ್ತು. ಈ ಪ್ರಕರಣವನ್ನು ಸಬ್ ಇನ್ಸ್ ಪೆಕ್ಟರ್ ಪಿ.ಪಿ.ರೋಸಮ್ಮ, ನವೀನ್ ಸಿಕ್ವೇರಾ ಅವರ ಮೇಲೆ ಪ್ರಕರಣ ದಾಖಲಿಸಿದ್ದು, ತನಿಖೆಗಾಗಿ ಇನ್ಸ್ ಪೆಕ್ಟರ್ ರೇವತಿ ಅವರಿಗೆ ಹಸ್ತಾಂತರಿಸಲಾಗಿತ್ತು. ಅಲ್ಲೂ ತಪ್ಪಾಗಿ ನವೀನ್ ಸಿಕ್ವೇರಾ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು.
ವಿಚಾರಣೆಯ ಸಮಯದಲ್ಲಿ ನಿರಪರಾಧಿಯಾಗಿದ್ದ ನವೀನ್ ಸಿಕ್ವೇರಾ ಪರ ವಕೀಲರ ವಾದಗಳನ್ನು ಗಣನೆಗೆ ತೆಗೆದುಕೊಂಡ ನ್ಯಾಯಾಲಯವು ಆರೋಪಿ ಸ್ಥಾನದಲ್ಲಿದ್ದ ನವೀನ್ ಸಿಕ್ವೇರಾ ನಿರಪರಾಧಿ ಎಂಬ ತೀರ್ಮಾನಕ್ಕೆ ಬಂದಿತು. ಬಳಿಕ ಇಬ್ಬರು ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳಿಗೆ ದಂಡವನ್ನು ವಿಧಿಸಿದೆ.
ಒಟ್ಟಾರೆ ನಿರಪರಾಧಿಯಾಗಿದ್ದು, ಇಬ್ಬರು ಮಹಿಳಾ ಅಧಿಕಾರಿಗಳ ತಪ್ಪಿನಿಂದಾಗಿ ನವೀನ್ ಸಿಕ್ವೇರಾ ಪೋಕ್ಸೋ ಪ್ರಕರಣದಲ್ಲಿ ಒಂದು ವರ್ಷಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದರು.