ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳ್ತಂಗಡಿಯಲ್ಲಿ ಯುವಕರಿಬ್ಬರಿಗೆ ಥಳಿತ, ಮರುಕಳಿಸಿದ ನೈತಿಕ ಪೊಲೀಸ್ ಗಿರಿ

By Sachhidananda Acharya
|
Google Oneindia Kannada News

ಮಂಗಳೂರು, ಸೆಪ್ಟೆಂಬರ್ 3: ಹಿಂದೂ ಕಾಲೇಜು ವಿದ್ಯಾರ್ಥಿನಿ ಜತೆ ಮಾತನಾಡುತ್ತಿದ್ದ ಇಬ್ಬರು ಮುಸ್ಲಿಂ ಸಮುದಾಯದ ಯುವಕರಿಗೆ ಥಳಿಸಿದ ಘಟನೆ ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನಲ್ಲಿ ಶನಿವಾರ ನಡೆದಿದೆ.

ಚಿಕ್ಕಮಗಳೂರಿನಿಂದ ಬಂದಿದ್ದ ಮುಸ್ಲಿಂ ಯುವಕರಿಬ್ಬರುಪರಿಚಿತ ಕಾಲೇಜು ವಿದ್ಯಾರ್ಥಿನಿಯರ ಜತೆ ಮಾತನಾಡುತ್ತಿದ್ದರು. ಇವರಲ್ಲಿ ಒಬ್ಬ ವಿದ್ಯಾರ್ಥಿನಿ ಮುಸ್ಲಿಂ ಹಾಗೂ ಇನ್ನೊಬ್ಬಳು ಹಿಂದೂ ಧರ್ಮಕ್ಕೆ ಸೇರಿದವರಾಗಿದ್ದರು.

Two youth were attacked by a group in Belthangady, Once again its a ‘Moral Policing’

ಭೇಟಿ ವೇಳೆ ಯುವಕರು ಹಾಗೂ ಯುವತಿಯರು ಫೋಟೋ ತೆಗೆದುಕೊಳ್ಳುತ್ತಿದ್ದರು. ಇದನ್ನು ನೋಡಿದ ಗುಂಪೊಂದು ಈ ಸಂದರ್ಭ ಯುವಕರ ಮೇಲೆ ದಾಳಿ ನಡೆಸಿದೆ. ಚಿಕ್ಕಮಗಳೂರಿನ ಮಹಮ್ಮದ್ ಉನೈಸ್ ಮತ್ತು ಯೂಸುಫ್ ಹಲ್ಲೆಗೊಳಗಾದ ಯುವಕರಾಗಿದ್ದಾರೆ.

ಹಲ್ಲೆ ನಡೆದ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ‌ ಹರಿದಾಡಿತ್ತು. ಇದೀಗ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.

ದಕ್ಷಿಣ ಕನ್ನಡದಲ್ಲಿ ಇತ್ತೀಚೆಗೆ ನೈತಿಕ ಪೊಲೀಸ್ ಗಿರಿಗಳ ಸಂಖ್ಯೆ ಕಡಿಮೆಯಾಗಿತ್ತು. ಇದೀಗ ಮತ್ತೆ ನೈತಿಕ ಪೊಲೀಸ್ ಗಿರಿಯ ಸದ್ದು ಕೇಳಿಸಿದೆ.

English summary
A group attacked on two Muslim youth who were talking to a Hindu college student on Saturday at Belthangady taluk in Dakshina Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X