ಬೆಳ್ತಂಗಡಿಯಲ್ಲಿ ಇಬ್ಬರು ಯುವಕರಿಗೆ ಚೂರಿಯಿಂದ ಇರಿದು ಗಂಭೀರ ಹಲ್ಲೆ
ಮಂಗಳೂರು, ಜೂನ್ 26: ಇಬ್ಬರು ಯುವಕರಿಗೆ ಚೂರಿಯಿಂದ ಇರಿದು ಗಂಭೀರ ಹಲ್ಲೆ ನಡೆಸಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬರಮೇಲು ಎಂಬಲ್ಲಿ ನಡೆದಿದೆ.
ಕೊಲ್ತಮಜಲು ಗ್ರಾಮದ ಪಳ್ಳಿಪಾಡಿ ನಿವಾಸಿಗಳಾದ ಮುಹಮ್ಮದ್ ಇರ್ಫಾನ್(28) ಮತ್ತು ನಿಸಾರ್(25) ಹಲ್ಲೆಗೊಳಗಾದ ಯುವಕರು. ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇಬ್ಬರಿಗೂ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಮತ್ತು ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮರಳು ವ್ಯವಹಾರಕ್ಕೆ ಸಂಬಂಧಿಸಿದಂತೆ ಮಾತುಕತೆಗೆ ಕರೆದು ಯುವಕರ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಇನ್ನು 'ದಾಳಿ ನಡೆಸಿದವರು ಮುಸ್ಲಿಂ ಸಮುದಾಯಕ್ಕೇ ಸೇರಿದವರು' ಎಂದು ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.












Click it and Unblock the Notifications