ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆರ್ ಟಿಐ ಕಾರ್ಯಕರ್ತ ಅವ್ಯವಹಾರ ಬಯಲು ಮಾಡಿದ್ದಕ್ಕೆ ಉಜಿರೆ ಗ್ರಾಪಂ ಉಪಾಧ್ಯಕ್ಷೆ ಮಾಡಿದ್ದೇನು?

|
Google Oneindia Kannada News

ಮಂಗಳೂರು, ಡಿಸೆಂಬರ್ 05: ಅಕ್ರಮ ಬಯಲಿಗೆಳೆದ ಸಿಟ್ಟಿಗೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆಯೊಬ್ಬರು ಆರ್‌ಟಿಐ ಕಾರ್ಯಕರ್ತನ ಮೇಲೆ ಬಿಸಿ ನೀರು ಎರಚಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಉಜಿರೆಯ ಆರ್.ಟಿ.ಐ ಕಾರ್ಯಕರ್ತ ಬಾಲಸುಬ್ರಹ್ಮಣ್ಯ ಭಟ್(41) ಮೇಲೆ ಉಜಿರೆ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷೆ ವಿನುತಾ ರಜತ್ ಗೌಡ ಬಿಸಿನೀರು ಎರಚಿದ್ದಾರೆ.

ಭಾರತದ ಕೊಹಿನೂರ್ ವಜ್ರ -ಬ್ರಿಟಿಷರ ಕೈ ಸೇರಿದ ರಹಸ್ಯ ಬಯಲುಭಾರತದ ಕೊಹಿನೂರ್ ವಜ್ರ -ಬ್ರಿಟಿಷರ ಕೈ ಸೇರಿದ ರಹಸ್ಯ ಬಯಲು

ಉಜಿರೆ ಗ್ರಾಮದ ಮಲೆಬೆಟ್ಟಿನಲ್ಲಿರುವ ವಿನುತಾ ರಜತ್ ಗೌಡ ಅವರ ಮನೆಯ ಅಂಗಳದಲ್ಲಿ ಮಂಗಳವಾರ ಸಂಜೆ ( ಡಿಸೆಂಬರ್ 04) ಈ ಘಟನೆ ನಡೆದಿದೆ. ಬಸವ ವಸತಿ ಯೋಜನೆಯಲ್ಲಿ ಅವ್ಯವಹಾರ ನಡೆದ ಬಗ್ಗೆ ಆರ್ ಟಿ ಐ ಕಾರ್ಯಕರ್ತ ಬಾಲಸುಬ್ರಹ್ಮಣ್ಯ ಭಟ್ ದೂರು ನೀಡಿದ್ದರು.

Ujire Panchayath VP splashed boiling water on RTI activist

ಯೋಜನೆಯಲ್ಲಿ ನಡೆದ ಅವ್ಯವಹಾರದ ಬಗ್ಗೆ ಆರ್.ಟಿ.ಐ ಮೂಲಕ ದಾಖಲೆಗಳನ್ನು ಪಡೆದಿದ್ದ ಬಾಲಸುಬ್ರಹ್ಮಣ್ಯ ಭಟ್‌ ರಾಜೀವ ಗಾಂಧಿ ವಸತಿ ನಿಗಮಕ್ಕೆ ದೂರು ನೀಡಿದ್ದರು. ಈ ಅವ್ಯವಹಾರದ ಬಗ್ಗೆ ತನಿಖೆಗೆ ಆಗಮಿಸಿದ್ದ ಅಧಿಕಾರಿಗಳ ಸಮ್ಮುಖದಲ್ಲೇ ಈ ಘಟನೆ ನಡೆದಿರುವುದು ತಿಳಿದು ಬಂದಿದೆ.

 ದಿಟ್ಟ ಆರ್ ಟಿಐ ಕಾರ್ಯಕರ್ತ ರಾಜಶೇಖರ್ ಸಂದರ್ಶನ ದಿಟ್ಟ ಆರ್ ಟಿಐ ಕಾರ್ಯಕರ್ತ ರಾಜಶೇಖರ್ ಸಂದರ್ಶನ

ಬೆಳ್ತಂಗಡಿ ತಾಲೂಕು ಪಂಚಾಯತ್ ಇ.ಓ ಕುಸುಮಾಧರ್ ಮುಂದೆ ಈ ಘಟನೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡ ಬಾಲಸುಬ್ರಹ್ಮಣ್ಯ ಭಟ್ ಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಲಾಗಿದೆ.

English summary
Ujire Gram Panchayath vice president splashed boiling water on RTI activist who trying to expose misappropriation in government scheme.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X