ಉಲ್ಲಾಳ: ಲಾರಿ, ಕಾರು, ಕೇರಳ ಸಾರಿಗೆ ಬಸ್ ನಡುವೆ ಭೀಕರ ಅಪಘಾತ
ಉಲ್ಲಾಳ, ಸೆಪ್ಟೆಂಬರ್, 09: ಮಿನಿ ಲಾರಿ, ಕಾರು, ಬಸ್ಸಿನ ನಡುವೆ ಸರಣಿ ಅಪಘಾತವಾದ ಸಂಭವಿಸಿದ ಘಟನೆ ಮಂಗಳೂರಿನ ಜೆಪ್ಪಿನ ಮೊಗರಿನಲ್ಲಿ ನಡೆದಿದೆ.
ಮಂಗಳೂರಿನ ಜೆಪ್ಪಿನ ಮೊಗರಿನಲ್ಲಿ ಹಠಾತ್ ಬ್ರೇಕ್ ಹಾಕಿದ ಕಾರಿಗೆ ಕೇರಳ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದು, ಡಿಕ್ಕಿಯಾದ ರಭಸಕ್ಕೆ ಮುಂದೆ ಇದ್ದ ಮಿನಿ ಲಾರಿ ನಡುವೆ ಕಾರು ಅಪ್ಪಚ್ಚಿಯಾಗಿದೆ. ಇನ್ನು ತಲಪಾಡಿ ನಿವಾಸಿ ಮಂಗಳೂರಿನ ಎಂಸಿಎಫ್ ಉದ್ಯೋಗಿ ದಿನೇಶ್ ಕಾರಿನಲ್ಲಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನೆಯಲ್ಲಿ ಲಾರಿ ಹಾಗೂ ಬಸ್ ನಡುವೆ ಸಿಲುಕಿದ ವ್ಯಾಗನಾರ್ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿ ಅಪ್ಪಚ್ಚಿಯಾಗಿದೆ. ಉಳಿದ ವಾಹನಗಳ ಹಿಂಭಾಗಕ್ಕೆ ಹಾನಿಯಾಗಿದೆ. ವ್ಯಾಗನಾರ್ ಕಾರಿನಲ್ಲಿ ಚಾಲಕ ಮಾತ್ರ ಇದ್ದು, ಆತ ಪವಾಡದ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಎಲ್ಲಾ ವಾಹನಗಳಲ್ಲಿದ್ದ ಐದು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಈ ಭೀಕರ ಅಪಘಾತ ರಾಷ್ಟ್ರೀಯ ಹೆದ್ದಾರಿ 66ರ ಜಪ್ಪಿನಮೊಗರು ಎಂಬಲ್ಲಿ ಶನಿವಾರ (ಸೆಪ್ಟೆಂಬರ್ 09) ಮಧ್ಯಾಹ್ನ ನಡೆದಿದೆ ಎನ್ನಲಾಗಿದೆ. ಇನ್ನು ಈ ಅಪಘಾತದ ದೃಶ್ಯ ಸ್ಥಳೀಯ ಮನೆಯೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಳಿಕ ಘಟನಾ ಸ್ಥಳಕ್ಕೆ ಆಗಮಿಸಿದ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಕಂದಕಕ್ಕೆ ಉರುಳಿದ KSRTC ಬಸ್
ಹಾಸನ, ಸೆಪ್ಟೆಂಬರ್, 09: ಸಾರಿಗೆ (KSRTC) ಬಸ್ಸೊಂದು ಬ್ರೇಕ್ ಫೇಲ್ ಆಗಿ ಕಂದಕಕ್ಕೆ ಉರುಳಿದ ಘಟನೆ ಹಾಸನ ಜಿಲ್ಲೆಯ ಹೊಂಗಡಹಳ್ಳ ಸಮೀಪದ ಮಂಕನಹಳ್ಳಿ ಬಳಿ ನಡೆದಿದೆ.
ಮಂಕನಳ್ಳಿ ಬಳಿ ಬ್ರೇಕ್ ಫೇಲ್ ಆಗಿ ಕೆಎಸ್‌ಆರ್‌ಟಿಸಿ ಬಸ್ ಕಂದಕಕ್ಕೆ ಉರುಳಿದ್ದು, ಈ ವೇಳೆ ಬಸ್‌ನಲ್ಲಿದ್ದ 4 ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು,
35 ಜನ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸದ್ಯ ಈ ಘಟನೆ ಯಸಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ. ಇನ್ನು ದುಸ್ಥಿತಿಯಲ್ಲಿರುವ ಬಸ್‌ಗಳ ಚಾಲನೆಯೇ ಇಂತಹ ಅಪಘಾತಗಳಿಗೆ ಕಾರಣ ಎಂದು ಪ್ರಯಾಣಿಕರು ಆರೋಪ ಮಾಡಿದ್ದಾರೆ.











Click it and Unblock the Notifications