ಫಲಿತಾಂಶ ವಿಳಂಬ: ಮಂಗಳೂರು ವಿವಿ ಸಿಂಡಿಕೇಟ್ ಸಭೆಗೆ ಎಬಿವಿಪಿ ಮುತ್ತಿಗೆ

ಮಂಗಳೂರು, ಡಿಸೆಂಬರ್‌, 20: ಮಂಗಳೂರು ವಿಶ್ವವಿದ್ಯಾಲಯ ಫಲಿತಾಂಶ ವಿಳಂಬವಾದ ಕಾರಣ, ವಿಶ್ವ ವಿದ್ಯಾಲಯದ ವಿರುದ್ಧ ಎಬಿವಿಪಿ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರು ವಿಶ್ವ ವಿದ್ಯಾಲಯದ ಸಿಂಡಿಕೇಟ್ ಸಭೆಗೆ ಎಬಿವಿಪಿ ಕಾರ್ಯಕರ್ತರು ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು-ಕಾರ್ಯಕರ್ತರ ನಡುವೆ ನೂಕಾಟ-ತಳ್ಳಾಟ ನಡೆದಿದೆ. ಈ ವೇಳೆ ಕುಲಸಚಿವ ಪ್ರೊ.ಪಿ.ಎಲ್. ಧರ್ಮ ಮಾತನಾಡಿ, ನಮ್ಮ ಸಿಬ್ಬಂದಿ ರಜೆ ಹಾಕದೆ ಕೆಲಸ ಮಾಡಿದ್ದಾರೆ. ತಾಂತ್ರಿಕ ಸಮಸ್ಯೆ ಇರುವ ಕಾರಣ ಪದವಿ ವಿದ್ಯಾರ್ಥಿಗಳ ಫಲಿತಾಂಶ ವಿಳಂಬವಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ವಾಸ್ತವವನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಮಂಗಳೂರು ವಿಶ್ವ ವಿದ್ಯಾಲಯದಿಂದ ಆದ ಫಲಿತಾಂಶ ವಿಳಂಬದ ಬಗ್ಗೆ ಪ್ರಶ್ನಿಸಿ ಎಬಿವಿಪಿ ಕಾರ್ಯಕರ್ತರ ಪ್ರತಿಭಟನೆ ಮಾಡಿದ್ದಾರೆ. ಮಂಗಳೂರಿನ ಕೊಣಾಜೆಯ ಮಂಗಳೂರು ವಿ.ವಿ ಯ ಆಡಳಿತ ಸೌಧಕ್ಕೆ ಮುತ್ತಿಗೆ ಹಾಕಿದ್ದಾರೆ. ಸುಮಾರು 500 ಜನ ಎಬಿವಿಪಿ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ ಮಾಡಲಾಗಿದ್ದು, ಮಂಗಳೂರು ವಿಶ್ವ ವಿಶ್ವವಿದ್ಯಾಲಯ ಆಡಳಿತ ಸೌಧದ ಆವರಣಕ್ಕೆ ಬಂದಾಗ ಪ್ರತಿಭಟನಾಕಾರರನ್ನು ಪೊಲೀಸರು ತಡೆ ಹಾಕಿದ್ದಾರೆ. ಈ ವೇಳೆ ಎಬಿವಿಪಿ ಕಾರ್ಯಕರ್ತರು ಬ್ಯಾರಿಕೇಡ್‌ಗಳನ್ನು ತಳ್ಳಿ ವಿ.ವಿ ಒಳಗಡೆ ನುಗ್ಗಲು ಯತ್ನಿಸಿದ್ದಾರೆ.

ಅಂಕಪಟ್ಟಿ ನೀಡದೆ ಸತಾಯಿಸುತ್ತಿದ್ದಾರೆ

ಪ್ರತಿಭಟನಾ ಸಭೆಯ ವೇಳೆ ಎಬಿವಿಪಿ ಮಂಗಳೂರು ವಿಭಾಗ ಸಂಚಾಲಕ ಹರ್ಷಿತ್ ಮಾತನಾಡಿ, ಮಂಗಳೂರು ವಿಶ್ವವಿದ್ಯಾನಿಲಯ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡದೆ ಸತಾಯಿಸುತ್ತಿದೆ. ಇದರಿಂದ ಅಂಕಪಟ್ಟಿ ಬಾರದೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕಲು ಅವಕಾಶ ಇಲ್ಲದಂತಾಗುತ್ತದೆ. ಮೌಲ್ಯ ಮಾಪನವನ್ನು ಸೂಕ್ತ ಸಮಯದಲ್ಲಿ ನಡೆಸಿಲ್ಲ. ಮತ್ತೊಂದೆಡೆ ಎನ್‌ಇಪಿ ಜಾರಿಯಾದ ನಂತರ ಮೊದಲನೇ ವರ್ಷಕ್ಕೆ ಸೇರ್ಪಡೆಯಾದ ವಿದ್ಯಾರ್ಥಿಗಳು ಪ್ರಸ್ತುತ ದ್ವಿತೀಯ ವರ್ಷದಲ್ಲಿ ಇದ್ದರೂ ಸಹ ಪ್ರಥಮ ಹಾಗೂ ದ್ವಿತೀಯ ಸೆಮಿಸ್ಟರ್‌ನ ಫಲಿತಾಂಶವನ್ನು ನೀಡಿಲ್ಲ. ಮೌಲ್ಯ ಮಾಪನವನ್ನು ನಡೆಸಿ ಫಲಿತಾಂಶವನ್ನು ಈವರೆಗೂ ನೀಡದೆ ಚೆಲ್ಲಾಟವಾಡುತ್ತಿದೆ. ಎಲ್ಲಾ ಸಮಸ್ಯೆಗಳಿಗೆ ಮಂಗಳೂರು ವಿಶ್ವ ವಿದ್ಯಾಲಯದ ಕುಲಪತಿ ಹಾಗೂ ಪರೀಕ್ಷಾಂಗ ಕುಲಸಚಿವರೇ ಕಾರಣ ಎಂದು ಆರೋಪಿಸಿದ್ದಾರೆ.

University result delay issue: Protest by ABVP Activists

ಫಲಿತಾಂಶದ ಬಗ್ಗೆ ಕುಲಸಚಿವರು ಹೇಳಿದ್ದೇನು?

ವಿದ್ಯಾರ್ಥಿಗಳ ಆಗ್ರಹಕ್ಕೆ ಉತ್ತರಿಸಿದ ಪರೀಕ್ಷಾಂಗ ಕುಲಸಚಿವ ಪ್ರೊ.ಪಿ.ಎಲ್. ಧರ್ಮ, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಾ ಫಲಿತಾಂಶ ವಿಳಂಬದಿಂದ ಪರೀಕ್ಷಾಂಗ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ನನ್ನಿಂದ ಸಮಸ್ಯೆ ಆಗಿದ್ದು, ಪರಿಹಾರ ದೊರಕುವುದಾದರೆ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಲು ಸಿದ್ಧನಿದ್ದೇನೆ. ಅದಕ್ಕಾಗಿ ರಾಜಿನಾಮೆ ಪತ್ರವನ್ನು ರೆಡಿ ಮಾಡಿಕೊಂಡು ಬಂದಿದ್ದೇನೆ ಎಂದು ಹೇಳಿದರು.

University result delay issue: Protest by ABVP Activists

ವಾಸ್ತವ ಅರ್ಥ ಮಾಡಿಕೊಳ್ಳದ ವಿದ್ಯಾರ್ಥಿಗಳು

ವಿದ್ಯಾರ್ಥಿಗಳು ವಾಸ್ತವವನ್ನು ಅರ್ಥ ಮಾಡಿಕೊಂಡಿಲ್ಲ. ಒಂದು ದಿವವೂ ಸಿಎಲ್ ಹಾಕದೆ ನಮ್ಮ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಯುಸಿಎಂಎಸ್‌ನದ್ದೇ ನಮಗೆ ಸಮಸ್ಯೆ ಆಗಿದೆ. ಸರ್ವರ್ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸರ್ಕಾರದ ವಿರುದ್ಧ ನಾನು ಮಾತನಾಡುತ್ತಿಲ್ಲ. ವ್ಯವಸ್ಥೆ ವಿರುದ್ಧ ಮಾತನಾಡುತ್ತಿದ್ದೇನೆ. ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಸಹಾಯವೇ ಮಾಡಿದೆ. ಜನವರಿ 25ರ ಒಳಗಡೆ ಫಲಿತಾಂಶ ಪ್ರಕಟಣೆಗೆ ಎಲ್ಲ ವ್ಯವಸ್ಥೆಯನ್ನು ಮಾಡುತ್ತೇವೆ ಎನ್ನುವ ಭರವಸೆಯನ್ನು ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+