'ಈ ಬಾರಿಯೂ ನರೇಂದ್ರ ಮೋದಿಯನ್ನು ಪ್ರಧಾನಿ ಮಾಡುವುದೇ ವಧುವರರಿಗೆ ನೀಡುವ ಉಡುಗೊರೆ' ಎಂದ ವರನ ವಿರುದ್ಧ ಪ್ರಕರಣ
ದಕ್ಷಿಣ ಕನ್ನಡ, ಏಪ್ರಿಲ್. 30: ಲೋಕಸಭಾ ಚುನಾವಣೆ ನಡೆಯುತ್ತಿದ್ದು, ರಾಜ್ಯದಲ್ಲಿ ಈಗಾಗಲೇ ಮೊದಲ ಹಂತದ ಮತದಾನ ನಡೆದಿದೆ. ಎರಡನೇ ಹಂತದ ಮತದಾನಕ್ಕೆ ರಾಜ್ಯ ಸಿದ್ಧವಾಗುತ್ತಿದ್ದು, ರಾಜಕೀಯ ಪಕ್ಷಗಳು ಭರ್ಜರಿಯಾಗಿ ಪ್ರಚಾರ ನಡೆಸುತ್ತಿದ್ದಾರೆ. ಈ ವೇಳೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಎಂದು ವರನ ಮೇಲೆ ಪ್ರಕರಣ ದಾಖಲಾಗಿರುವ ಘಟನೆ ವರದಿಯಾಗಿದೆ.
ಹೌದು... ದಕ್ಷಿಣ ಕನ್ನಡದ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ವರನೊಬ್ಬ ತನ್ನ ಮದುವೆಯ ಆಮಂತ್ರಣ ಪತ್ರದಿಂದ ಸಾಕಷ್ಟು ಸುದ್ದಿಯಾಗಿದ್ದರು. ಇದು ರಾಜಕೀಯ ಸಂಬಂಧದ ಬಗ್ಗೆ ಚರ್ಚೆಯನ್ನು ಹುಟ್ಟುಹಾಕಿದ ನಂತರ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ವಿವಾದದ ಕೇಂದ್ರ ಬಿಂದು ಮದುವೆಯ ಆಮಂತ್ರಣದಲ್ಲಿ ಅಡಿಬರಹವಾಗಿತ್ತು. ಅಂದರೆ ವರ ತನ್ನ ವಿವಾಹ ಆಮಂತ್ರಣ ಪತ್ರದಲ್ಲಿ 'ಈ ಬಾರಿಯೂ ನರೇಂದ್ರ ಮೋದಿಯನ್ನು ಪ್ರಧಾನಿ ಮಾಡುವುದೇ ವಧುವರರಿಗೆ ನೀಡುವ ಉಡುಗೊರೆ. ಯಾಕೆಂದರೆ ನಮ್ಮ ಭವಿಷ್ಯದ ಭಾರತ ಸುಭದ್ರವಾಗಿರಬೇಕು' ಎಂದು ಅಚ್ಚು ಹಾಕಿಸಿದ್ದರು.
ಪೊಲೀಸರ ಪ್ರಕಾರ, ವರನ ಸಂಬಂಧಿಯೊಬ್ಬರು ಚುನಾವಣಾ ಆಯೋಗಕ್ಕೆ ಈ ಅಡಿಬರಹಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಚುನಾವಣಾ ಆಯೋಗದ ಅಧಿಕಾರಿಗಳು ಅ.14ರಂದು ಪುತ್ತೂರು ತಾಲೂಕಿನ ವರನ ಮನೆಗೆ ಭೇಟಿ ನೀಡಿದ್ದರು. ಚುನಾವಣಾ ದಿನಾಂಕ ಘೋಷಣೆಯಾಗುವ ಮುನ್ನವೇ ಮಾರ್ಚ್ 1ರಂದು ಆಹ್ವಾನ ಪತ್ರಿಕೆಗಳನ್ನು ಮುದ್ರಿಸಲಾಗಿತ್ತು ಎಂದು ವರ ವಿವರಿಸಿದ್ದಾರೆ.

ತ್ಮ ಮದುವೆ ಆಹ್ವಾನ ಪತ್ರದ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅಭಿಮಾನ ಮತ್ತು ರಾಷ್ಟ್ರದ ಕಾಳಜಿಯನ್ನು ವ್ಯಕ್ತಪಡಿಸಲಾಗಿದೆ ಎಂದು ವರ ಸ್ಪಷ್ಟಪಡಿಸಿದ್ದಾರೆ. ಏಪ್ರಿಲ್ 18 ರಂದು ಮದುವೆ ನಡೆದಿತ್ತು. ವರನ ವಿವರಣೆಯ ಹೊರತಾಗಿಯೂ, ಚುನಾವಣಾ ಆಯೋಗ ಏಪ್ರಿಲ್ 26 ರಂದು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದು, ಉಪ್ಪಿನಂಗಡಿ ಪೊಲೀಸರು ನಂತರ ಎಫ್‌ಐಆರ್ ದಾಖಲಿಸಿದ್ದಾರೆ.












Click it and Unblock the Notifications