'ಖಾದರ್ ಪ್ರವೇಶಿಸಿದ ದೇವಾಲಯಕ್ಕೆ ಮತ್ತೊಮ್ಮೆ ಬ್ರಹ್ಮ ಕಲಶ ಆಗಲೇಬೇಕು'
ಮಂಗಳೂರು, ಏಪ್ರಿಲ್ 05 : 'ಸಚಿವ ಯು.ಟಿ. ಖಾದರ್ ಎಂಬ ಕೊಳಕು ಮನುಷ್ಯ, ಗೋಮಾಂಸ ಭಕ್ಷಣೆ ಮಾಡುವಂತಹ ವ್ಯಕ್ತಿಯನ್ನು ಪವಿತ್ರ ದೇವಾಲಯಕ್ಕೆ ಕರೆಸಿ ಪ್ರಸಾದ ನೀಡುತ್ತಿರುವುದು ಎಷ್ಟು ಸರಿ?' ಎಂದು ಆರ್‌ಎಸ್‌ಎಸ್ ಮುಖಂದ ಡಾ.ಕಲ್ಲಡ್ಕ ಪ್ರಭಾಕರ ಭಟ್ ಕಿಡಿಕಾರಿದ್ದಾರೆ.
ಬಂಟ್ವಾಳದ ಕೈರಂಗಳದಲ್ಲಿರುವ ಅಮೃತ ಧಾರಾ ಗೋಶಾಲೆಯಲ್ಲಿ ನಡೆದ ದನಗಳ್ಳತನವನ್ನು ಖಂಡಿಸಿ, ಗೋವು ಕಳ್ಳರನ್ನು ಬಂಧಿಸುವಂತೆ ಒತ್ತಾಯತಿಸಿ ಬುಧವಾರ ಕೈಗೊಳ್ಳಲಾಗಿದ್ದ ಅಮರಣಾಂತ ಉಪವಾಸ ಸತ್ಯಾಗ್ರಹದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಡಾ. ಕಲ್ಲಡ್ಕ ಪ್ರಭಾಕರ ಭಟ್, ಸಚಿವ ಖಾದರ್ ವಿರುದ್ಧ ಹೇಳಿಕೆ ನೀಡಿದ್ದರು. 'ಖಾದರ್ ಪ್ರವೇಶಿಸಿದ ದೇವಾಲಯದಲ್ಲಿ ಇನ್ನೊಮ್ಮೆ ಬ್ರಹ್ಮ ಕಲಶಾಭಿಷೇಕ ನಡೆಸಬೇಕು' ಎಂದು ಹೇಳಿದ್ದರು. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಹೇಳಿಕೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಡಾ. ಪ್ರಭಾಕರ ಭಟ್ ಅವರು, 'ಗೋಭಕ್ಷಣೆ ಮಾಡುವ ಖಾದರ್‌ಗೆ ಇಲ್ಲಿದ್ದ ಭೂತ ನೇಮದ ಬೂಳ್ಯ ಕೊಡ್ತಾರೆ. ಮಂಡೆ ಶುದ್ಧವಿಲ್ಲದ ದೈವ ಕಟ್ಟುವ ವ್ಯಕ್ತಿ ಕೊಳಕು ಖಾದರ್‌ಗೆ ಪ್ರಸಾದ ಕೊಡ್ತಾರೆ. ಯಾವ ದೇವಸ್ಥಾನಕ್ಕೆ ಈ ಖಾದರ್ ಬಂದಿದ್ದಾನೋ ಅದಕ್ಕೆ ಮತ್ತೊಂದು ಬ್ರಹ್ಮಕಲಶ ವಿಧಿವಿಧಾನ ನೆರವೇರಲೇ ಬೇಕು' ಎಂದು ಹೇಳಿಕೆ ನೀಡಿದ್ದರು.
'ದೇವಸ್ಥಾನಕ್ಕೆ ರಸ್ತೆ ಮಾಡಿದ್ದಾರೆ ಎಂದು ಯು.ಟಿ.ಖಾದರ್ ಅವರನ್ನು ದೇಗುಲದೊಳಗೆ ಕರೆದೊಯ್ಯುತ್ತೀರಿ. ನಾಚಿಗೆಯಾಗುವುದಿಲ್ಲವೇ?. ಅವನೇನು ಅವನ ಅಪ್ಪನ ಹಣದಿಂದ ರಸ್ತೆ ಮಾಡಿಸಿಲ್ಲ. ಜನರ ತೆರಿಗೆಯ ಹಣದಿಂದ ರಸ್ತೆ ನಿರ್ಮಾಣ ಮಾಡಿಸಿದ್ದಾನೆ' ಎಂದು ಭಟ್ ಆಕ್ರೋಶ ವ್ಯಕ್ತಪಡಿಸಿದ್ದರು.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications