ಮಂಗಳೂರಿನಲ್ಲಿ ಮಕ್ಕಳ ಜೊತೆ ಕ್ರಿಕೆಟ್ ಆಡಿ ಗಮನ ಸೆಳೆದ ಯು.ಟಿ.ಖಾದರ್
ಮಂಗಳೂರು, ಮೇ, 13: ರಾಜ್ಯ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಎಲ್ಲಾ ಆರಂಭವಾಗಿದ್ದು, ಎಲ್ಲಾ ಪಕ್ಷಗಳ ನಾಯಕರ ಚಿತ್ತ ಮತ ಎಣಿಕೆಯ ಕಡೆ ನೆಟ್ಟಿದೆ. ಆದರೆ ಮಂಗಳೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್‌ನ ಯು.ಟಿ.ಖಾದರ್ ಮಾತ್ರ ಯಾವುದೇ ಚಿಂತೆ ಇಲ್ಲದೆ ಮಕ್ಕಳ ಜೊತೆ ಕ್ರಿಕೆಟ್ ಆಡಿಕೊಂಡು ಎಂಜಾಯ್ ಮಾಡುತ್ತಿದ್ದಾರೆ. ಇದೀಗ ಈ ವಿಡಿಯೋ ಎಲ್ಲಡೆ ವೈರಲ್ ಆಗಿದೆ.
ಯು.ಟಿ.ಖಾದರ್ ಮಂಗಳೂರು ಕ್ಷೇತ್ರದಿಂದ ಸತತ ಗೆಲುವು ಕಂಡಿದ್ದು, ಈ ಬಾರಿಯೂ ಬಹುಮತದ ಗೆಲುವಿನ ಭರವಸೆಯಲಿದ್ದಾರೆ. ಆದ್ದರಿಂದ ಅವರು ಇಂದು ಬೆಳ್ಳಂಬೆಳಗ್ಗೆ ಯುಟಿ ಖಾದರ್ ಅವರು ಉಲ್ಲಾಳದ ಭಾರತ್ ಗ್ರೌಂಡ್‌ನಲ್ಲಿ ರಿಲ್ಯಾಕ್ಸ್ ಆಗಿ ಮಕ್ಕಳ ಜೊತೆ ಕ್ರಿಕೆಟ್ ಆಡುವ ಮೂಲಕ ಎಂಜಾಯ್ ಮಾಡಿದ್ದಾರೆ.

ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಯಾವ ಪಕ್ಷ ಈ ಬಾರಿ ಅಧಿಕಾರ ಗಿಟ್ಟಿಸಿಕೊಳ್ಳುತ್ತದೆ ಎಂಬ ಕುತೂಹಲ ಮೂಡಿದೆ. ಈ ನಡುವೆ ಮಂಗಳೂರು ಕಾಂಗ್ರೆಸ್ ಅಭ್ಯರ್ಥಿ ಯು.ಟಿ.ಖಾದರ್ ಬಹುಮತದ ನಿರೀಕ್ಷೆಯಲ್ಲಿ ಮಕ್ಕಳೊಂದಿಗೆ ಕ್ರಿಕೆಟ್ ಆಡುವ ಮೂಲಕ ಗಮನ ಸೆಳೆದಿದ್ದಾರೆ.












Click it and Unblock the Notifications