ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿದ್ಯುತ್ ಬಿಲ್ ಕೇಳಿದ್ದಕ್ಕೆ ಮೆಸ್ಕಾಂ ಸಿಬ್ಬಂದಿ ಮೇಲೆ ಯು.ಟಿ.ಖಾದರ್ ಆಪ್ತ ಹಲ್ಲೆ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಜನವರಿ 29: ವಿದ್ಯುತ್ ಬಿಲ್ ಪಾವತಿ ಮಾಡದೇ ಇದ್ದುದ್ದನ್ನು ಕೇಳಲು ಹೋದ ಮೆಸ್ಕಾಂ ಸಿಬ್ಬಂದಿಗೆ ಮಾಜಿ ಸಚಿವ ಯು.ಟಿ ಖಾದರ್ ಆಪ್ತ, ಕಾಂಗ್ರೆಸ್ ಮುಖಂಡ ಅಮೀರ್ ಹಸನ್ ತುಂಬೆ ಎಂಬಾತನು ಹಲ್ಲೆ ನಡೆಸಿದ್ದಾನೆ.

ಮಂಗಳೂರು ಹೊರವಲಯದ ದೇರಳಕಟ್ಟೆ ಬಳಿ ಅಮೀರ್ ತುಂಬೆ ಮನೆಯಿದ್ದು, ಬಿಲ್ ಪಾವತಿ ಮಾಡದೇ ಇದ್ದ ವಿಚಾರಕ್ಕೆ ಲೈನ್ ಮ್ಯಾನ್ ಫ್ಯೂಸ್ ತೆಗೆಯಲು ಮುಂದಾಗಿದ್ದರು. ಇದರಿಂದ ಸಿಟ್ಟಿಗೆದ್ದ ಅಮೀರ್, ಅವಾಚ್ಯ ಶಬ್ಧಗಳಿಂದ ನಿಂದಿಸಿ ಮೆಸ್ಕಾಂ ಸಿಬ್ಬಂದಿಗಳಾದ ರಂಗನಾಥ್, ಸಂದೇಶ್ ಕುಮಾರ್ ಹಾಗೂ ಮಧುನಾಯ್ಕ್ ಎಂಬವವರಿಗೆ ಹಲ್ಲೆ ಮಾಡಿದ್ದಾನೆ.

ಮಂಗಳೂರು ಬಾಂಬ್ ಪ್ರಕರಣ ಮತ್ತು ಕುಮಾರಸ್ವಾಮಿಯ 'ಮಿಣಿಮಿಣಿ' ಪದ ಟ್ರೋಲ್ ಆದ ಕಥೆಮಂಗಳೂರು ಬಾಂಬ್ ಪ್ರಕರಣ ಮತ್ತು ಕುಮಾರಸ್ವಾಮಿಯ 'ಮಿಣಿಮಿಣಿ' ಪದ ಟ್ರೋಲ್ ಆದ ಕಥೆ

ಮನೆಗೆ ವಿದ್ಯುತ್ ಕೇಳಲು ಬಂದಿದ್ದ ಮೂರೂ ಸಿಬ್ಬಂದಿಗೂ ಹಲ್ಲೆ ಮಾಡಿದ್ದಲ್ಲದೇ, ಕುತ್ತಿಗೆ ಪಟ್ಟಿ ಹಿಡಿದು ಹೊರಕ್ಕೆ ದೂಡಿದ್ದಾನೆ. ಕಾಂಗ್ರೆಸ್ ಮುಖಂಡನ ರೌಡಿಸಂ ಬಗ್ಗೆ ಹಲ್ಲೆಗೊಳಗಾದ ಸಿಬ್ಬಂದಿ ಮಧು, ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಜಾಮೀನು ರಹಿತ ಎಫ್ಐಆರ್ ದಾಖಲಾಗಿದೆ.

 UT Khaders Close Attack On Mescom Staff In Mangaluru

ತಾನು ಮಾಜಿ ಸಚಿವರ ಆಪ್ತನೆಂಬ ಕಾರಣಕ್ಕೆ ರೌಡಿಸಂ ತೋರಿದ್ದಾನೆ ಎನ್ನಲಾಗುತ್ತಿದ್ದು, ಅಮೀರ್ ತುಂಬೆ ಹಲ್ಲೆ ಮಾಡಿದ ದೃಶ್ಯವನ್ನು ಹಲ್ಲೆಗೊಳಗಾಗ ಮೆಸ್ಕಾಂ ಸಿಬ್ಬಂದಿಗಳು ಮೊಬೈಲಿನಲ್ಲಿ ಸೆರೆ ಹಿಡಿದಿದ್ದಾರೆ.

 UT Khaders Close Attack On Mescom Staff In Mangaluru

ಬೀದಿಯಲ್ಲಿ ಕಿತ್ತಳೆ ಹಣ್ಣು ಮಾರಿ ಶಾಲೆ ಕಟ್ಟಿದವಗೆ ಪದ್ಮಶ್ರೀ ಗೌರವಬೀದಿಯಲ್ಲಿ ಕಿತ್ತಳೆ ಹಣ್ಣು ಮಾರಿ ಶಾಲೆ ಕಟ್ಟಿದವಗೆ ಪದ್ಮಶ್ರೀ ಗೌರವ

ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಿದ ಗುಂಪಿನಲ್ಲಿ ಮುಂಚೂಣಿಯಲ್ಲಿದ್ದ ಅಮೀರ್, ಅದೇ ಗುಂಗಿನಲ್ಲಿದ್ದು ಮುಸ್ಲಿಂ ಅನ್ನುವ ಕಾರಣಕ್ಕೆ ಮೆಸ್ಕಾಂ ಲೈನ್ ಮ್ಯಾನ್ ತನ್ನನ್ನು ಟಾರ್ಗೆಟ್ ಮಾಡಿದ್ದಾರೆಂದು ಹೇಳಿಕೊಂಡು ಹಲ್ಲೆ ನಡೆಸಿದ್ದಾನೆ.

English summary
UT Khaders close attack on Mescom staff for asking for electricity bill This happened in Mangaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X