Vande Bharat Express: ಮಂಗಳೂರು-ಬೆಂಗಳೂರು ನಡುವೆ ವಂದೇ ಭಾರತ್‌ ಸೇವೆ ಜೂನ್‌ನಲ್ಲಿ ಆರಂಭ-ಸಮಯ, ದರಗಳ ಮಾಹಿತಿ

ಮಂಗಳೂರು, ಮಾರ್ಚ್‌, 16: ದೇಶದ ಬಹುತೇಕ ಭಾಗಗಳಲ್ಲಿ ವಂದೇ ಭಾರತ್‌ ರೈಲು ಸಂಚರಿಸುತ್ತಿದೆ. ಇದೀಗ ಈ ರೈಲು ಭಾರೀ ಜನಮನ್ನಣೆ ಪಡೆಯುತ್ತಿದ್ದು, ಬೇರೆ ಕಡೆಗೂ ವಿಸ್ತರಿಸುವಂತೆ ಬೇಡಿಕೆಗಳು ಬರುತ್ತಿವೆ. ಇನ್ನು ಬೆಂಗಳೂರು-ಮಂಗಳೂರು ಮಾರ್ಗದಲ್ಲೂ ವಂದೇ ಭಾರತ್‌ ರೈಲು ಸೇವೆಯ ದಿನಾಂಕದ ಬಗ್ಗೆ ನಳಿನ್‌ ಕುಮಾರ್‌ ಕಟೀಲ್‌ ಅವರು ಮಹತ್ವದ ಸುಳಿವು ನೀಡಿದ್ದಾರೆ. ಹಾಗಾದರೆ ಈ ಮಾರ್ಗದಲ್ಲಿ ಯಾವಾಗ ಆರಂಭವಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಬಹು ನಿರೀಕ್ಷಿತ ಮಂಗಳೂರು-ಬೆಂಗಳೂರು ನಡುವೆ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಜೂನ್‌ನಲ್ಲಿ ಆರಂಭವಾಗುವ ನಿರೀಕ್ಷೆ ಇದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಮಹತ್ವದ ಮಾಹಿತಿಯನ್ನು ನೀಡಿದ್ದಾರೆ. ಮಂಗಳೂರು ಸೆಂಟ್ರಲ್‌ ಮತ್ತು ತಿರುವನಂತಪುರಂ ಮಾರ್ಗದ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಅವರು ಈ ವಿಷಯವನ್ನು ಪ್ರಸ್ತಾಪ ಮಾಡಿದರು.

Vande Bharat service will start between Manguluru-Bengaluru in June Know timings and price details

ಮಂಗಳೂರು-ಬೆಂಗಳೂರು ಮಾರ್ಗದಲ್ಲಿ ವಂದೇ ಭಾರತ್‌ ರೈಲಿಗೆ ಬೇಡಿಕೆಗೆ ಕೇಂದ್ರ ಸರ್ಕಾರದಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಈ ಬೇಡಿಕೆ ಕೊನೆಗೂ ಈಡೇರಿದಂತಾಗಿದೆ. ಪ್ರಸ್ತುತ ಈ ಮಾರ್ಗದ ವಿದ್ಯುದ್ದೀಕರಣ ಕಾಮಗಾರಿ ನಡೆಯುತ್ತಿದ್ದು, ಮೇ ಅಂತ್ಯದೊಳಗೆ ವಿಶೇಷವಾಗಿ 22 ಕಿಲೋ ಮೀಟರ್‌ ಶಿರಾಡಿ ವ್ಯಾಪ್ತಿಯಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ತಿಳಿಸಿದರು. ಇನ್ನು ಎಲ್ಲವೂ ಅಂದುಕೊಂಡಂತೆ ನಡೆದರೆ ಜೂನ್‌ನಲ್ಲಿ ರೈಲು ಸಂಚಾರ ಆರಂಭ ಆಗಬಹುದು ಎಂದು ಕಟೀಲ್‌ ಅವರು ತಿಳಿಸಿದರು.

10 ಹೊಸ ವಂದೇ ಭಾರತ್‌ ರೈಲುಗಳಿಗೆ ಚಾಲನೆ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ (ಮಾರ್ಚ್‌ 12) ದೇಶದ ವಿವಿಧ ಮಾರ್ಗಗಳಲ್ಲಿ 10 ಹೊಸ ವಂದೇ ಭಾರತ್ ರೈಲುಗಳನ್ನು ಉದ್ಘಾಟಿಸಿದ್ದಾರೆ. ಹಾಗಾದರೆ ಯಾವ್ಯಾವ ಮಾರ್ಗಗಳಲ್ಲಿ ಹಾಗೂ ಈ ರೈಲುಗಳ ಸಮಯಗಳ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಮೈಸೂರು-ಡಾ ಎಂಜಿಆರ್ ಸೆಂಟ್ರಲ್ (ಚೆನ್ನೈ), ಸಿಕಂದರಾಬಾದ್-ವಿಶಾಖಪಟ್ಟಣಂ, ಅಹಮದಾಬಾದ್-ಮುಂಬೈ ಸೆಂಟ್ರಲ್, ಪಾಟ್ನಾ-ಲಕ್ನೋ, ನ್ಯೂ ಜಲ್ಪೈಗುರಿ-ಪಾಟ್ನಾ, ಲಕ್ನೋ-ಡೆಹ್ರಾಡೂನ್, ಪುರಿ-ವಿಶಾಖಪಟ್ಟಣಂ, ರಾಂಚಿ-ವಾರಣಾಸಿ, ಖಜುರಾಹೊ-ದೆಹಲಿ (ನಿಜಾಮುದ್ದೀನ್), ಕಲಬುರಗಿ-ಸರ್‌.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಡುವೆ ಹತ್ತು ಹೊಸ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ.

ವಂದೇ ಭಾರತ್‌ ವಿಸ್ತರಣೆ: ಡಿಸೆಂಬರ್ 2023ರಲ್ಲಿ ಆರು ಹೊಸ ವಂದೇ ಭಾರತ್ ರೈಲುಗಳ ಉದ್ಘಾಟನೆಯನ್ನು ಮಾಡಲಾಯಿತು. ಕತ್ರಾ-ನವದೆಹಲಿ, ಅಮೃತಸರ-ದೆಹಲಿ, ಕೊಯಮತ್ತೂರು-ಬೆಂಗಳೂರು, ಮಂಗಳೂರು-ಮಡ್ಗಾಂವ್, ಜಲ್ನಾ-ಮುಂಬೈ, ಮತ್ತು ಅಯೋಧ್ಯೆ-ದೆಹಲಿಯಂತಹ ಮಾರ್ಗಗಳಿಗೆ ವಂದೇ ಭಾರತ್‌ ರೈಲು ಸೇವೆಗಳನ್ನು ವಿಸ್ತರಿಸಲಾಯಿತು. ಹೆಚ್ಚುವರಿಯಾಗಿ, ಆ ವೇಳೆ ನವದೆಹಲಿ ಮತ್ತು ವಾರಣಾಸಿ ನಡುವೆ ಎರಡನೇ ರೈಲನ್ನು ಪ್ರಾರಂಭಿಸಲಾಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+