ಕಾಂಗ್ರೆಸ್ ಸಮಾವೇಶದಲ್ಲಿ ವಂದೇ ಮಾತರಂ ಗೀತೆ ಅರ್ಧಕ್ಕೆ ಮೊಟಕು
ಮಂಗಳೂರು, ಏಪ್ರಿಲ್ 27: ಬಂಟ್ವಾಳದಲ್ಲಿ ಇಂದು ಹಮ್ಮಿಕೊಂಡಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ವಂದೇ ಮಾತರಂ ಗೀತೆಯನ್ನು ಅರ್ಧಕ್ಕೆ ಮೊಟಕುಗೊಳಿಸಿದ ಘಟನೆ ನಡೆದಿದೆ.
ಆಗಿದ್ದೇನು?
ಬಂಟ್ವಾಳದಲ್ಲಿ ಇಂದು ಕಾಂಗ್ರೆಸ್ ಸಮಾವೇಶ ಆರಂಭವಾಗುವಾಗ ತಡವಾಗಿತ್ತು. ಹೀಗಾಗಿ ಕಾಂಗ್ರೆಸ್ ನಾಯಕರು ಕಾರ್ಯಕ್ರಮ ಮುಗಿಸುವ ತರಾತುರಿಯಲ್ಲಿದ್ದರು. ಇದೇ ಸಂದರ್ಭದಲ್ಲಿ ಕಾರ್ಯಕ್ರಮ ಆರಂಭಕ್ಕೂ ಮುನ್ನ ಇದೀಗ ವಂದೇ ಮಾತರಂ ಗೀತೆ ಎಂದು ಕಾರ್ಯಕ್ರಮ ನಿರೂಪಕರು ಘೋಷಿಸಿದರು.
ಈ ಸಂದರ್ಭ, 'ಸಮಯ ಕಳೆಯುತ್ತಿದೆ ವಂದೇ ಮಾತರಂ ಗೀತೆ ಬೇಕಾ?' ಎಂದು ರಾಹುಲ್ ಗಾಂಧಿ ವಾಚ್ ತೋರಿಸಿ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ರನ್ನು ಪ್ರಶ್ನಿಸಿದ್ದಾರೆ.
ಆಗ ಒಂದೆರಡು ಸಾಲು ಹಾಡಿ ಎಂದು ವೇಣುಗೋಪಾಲ್ ಹಾಡುವವರಿಗೆ ಸೂಚನೆ ನೀಡಿದ್ದಾರೆ. ನಂತರ ವೇಣುಗೋಪಾಲ್ ಸೂಚನೆ ಮೇರೆಗೆ ವಂದೇ ಮಾತರಂ ಗಾಯನವನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿದೆ.












Click it and Unblock the Notifications