ಪತ್ನಿ, ಸಹೋದರನ ಜೊತೆ ಬಂದು ಮತ ಹಾಕಿದ ವೀರೇಂದ್ರ ಹೆಗ್ಗಡೆ
ಮಂಗಳೂರು, ಏಪ್ರಿಲ್ 18:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಜೆಯಾಗುತ್ತಿದ್ದಂತೆ ಮತದಾನ ಬಿರುಸುಗೊಂಡಿದೆ. 5 ಗಂಟೆಯವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 72.02% ಮತದಾನ ದಾಖಲಾಗಿದೆ. ಮತದಾನ ಪ್ರಕ್ರಿಯೆ ಅಂತ್ಯಗೊಳ್ಳುವ ಹೊತ್ತಿಗೆ ಶೇಕಡ 80 ಕ್ಕಿಂತಲೂ ಹೆಚ್ಚು ಮತದಾನ ದಾಖಲಾಗುವ ಸಂಭವವಿದೆ ಎಂದು ಅಂದಾಜಿಸಲಾಗುತ್ತಿದೆ.
ಇಂದು ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದರು. ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಶಾಲೆಯಲ್ಲಿ ಡಾ ಡಿ ವೀರೇಂದ್ರ ಹೆಗ್ಗಡೆ ಪತ್ನಿ ಹೇಮಾವತಿ ಹೆಗ್ಗಡೆ, ಸಹೋದರ ಹರ್ಷೇಂದ್ರ ಹೆಗ್ಗಡೆ ತಮ್ಮ ಹಕ್ಕನ್ನು ಚಲಾಯಿಸಿದರು.

ಮಂಗಳೂರಿಗೆ ಪ್ರದಾನಿ ಮೋದಿ ಭೇಟಿ ಸಂದರ್ಭದಲ್ಲಿ ಚೌಕಿದಾರ್ ಸಮವಸ್ತ್ರ ಧರಿಸಿ ಮಿಂಚಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇಂದು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು. ಎರ್ಡಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಸಕ ಹರೀಶ್ ಪೂಂಜಾ ಮತ ಚಲಾಯಿಸಿದರು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಪುತ್ತೂರು ಶಾಸಕ ಸಂಜೀವ ಮಠಂದೂರು ಉಪ್ಪಿನಂಗಡಿಯ ಹಿರೇಬಂಡಾಡಿ ಸರಕಾರಿ ಶಾಲೆಯಲ್ಲಿ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.












Click it and Unblock the Notifications