ದೆಹಲಿಯ ಯೋಗ ದಿನಾಚರಣೆಗೆ ವೀರೇಂದ್ರ ಹೆಗ್ಗಡೆ ಅತಿಥಿ

ಮಂಗಳೂರು, ಜೂ. 18 : ಜೂನ್ 21ರಂದು ನಡೆಯುವ ವಿಶ್ವ ಯೋಗ ದಿನಾಚರಣೆಗೆ ವಿಶ್ವದಾದ್ಯಂತ ಸಿದ್ಧತೆ ನಡೆಯುತ್ತಿದೆ. ದೆಹಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ನವದೆಹಲಿಯ ರಾಜಪಥ್‌ನಲ್ಲಿ ನಡೆಯುವ ಯೋಗ ದಿನಾಚರಣೆಯಲ್ಲಿ 35 ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳಲಿದ್ದು, ಈ ಸಮಾರಂಭದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಭಾಗವಹಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಯೋಗಗುರು ಬಾಬಾ ರಾಮದೇವ್, ಬೆಂಗಳೂರಿನ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಕೇಂದ್ರದ ಡಾ. ಎಚ್.ಆರ್. ನಾಗೇಂದ್ರ ಅವರು ಪಾಲ್ಗೊಳ್ಳಲಿದ್ದಾರೆ. [ವಿಶ್ವ ಯೋಗ ದಿನಾಚರಣೆಗೆ ಬಿರುಸಿನ ಅಭ್ಯಾಸ]

dharmasthala

ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಶಾಂತ ಶೆಟ್ಟಿ ಅವರು ಈ ಕುರಿತು ಮಾಹಿತಿ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೆಹಲಿಯ ವಿಜ್ಞಾನ ಮಂದಿರದಲ್ಲಿ ನಡೆಯುವ ಅಂತಾರಾಷ್ಟ್ರೀಯ ಯೋಗ ಸಮ್ಮೇಳನದಲ್ಲೂ ಮುಖ್ಯ ಅತಿಥಿಗಳಾಗಿ ವೀರೇಂದ್ರ ಹೆಗ್ಗಡೆ ಪಾಲ್ಗೊಳ್ಳುವರು ಎಂದು ಹೇಳಿದ್ದಾರೆ. [ಕರ್ನಾಟಕದ ಶಾಲೆಗಳಿಗೆ ಯೋಗ ದಿನ ಕಡ್ಡಾಯವಲ್ಲ]

60 ಸಾವಿರ ವಿದ್ಯಾರ್ಥಿಗಳು : ಜೂ.21ರಂದು ಬೆಳಗ್ಗೆ 7ರಿಂದ 8ರವರೆಗೆ ನಡೆಯಲಿರುವ ಯೋಗ ದಿನಾಚರಣೆಯಲ್ಲಿ ಕರ್ನಾಟಕದಲ್ಲಿ 60 ಸಾವಿರಕ್ಕೂ ಹೆಚ್ಚು ಎನ್‌ಸಿಸಿ ಕೆಡೆಟ್‌ಗಳು, ವಿದ್ಯಾರ್ಥಿಗಳು ಜಿಲ್ಲಾ , ತಾಲೂಕು ಮಟ್ಟದಲ್ಲಿ ಯೋಗ ಪ್ರದರ್ಶನ ನಡೆಸಿಕೊಡಲಿದ್ದಾರೆ. [ವಿಶ್ವಯೋಗ ದಿನ : ಕಾತುರರಾಗಿರುವ ಮುಸ್ಲಿಮರು]

ಎನ್‌ಸಿಸಿ ವಿದ್ಯಾರ್ಥಿಗಳಿಗೆ ಅವರ ಕಾಲೇಜು ಕ್ಯಾಂಪಸ್‌ಗಳಲ್ಲಿಯೇ ಜನವರಿಯಿಂದ ಜೂನ್‌ವರೆಗೆ ಯೋಗದ ತರಬೇತಿ ನೀಡಲಾಗಿದೆ. 15ಕ್ಕೂ ಹೆಚ್ಚು ಆಸನಗಳನ್ನು ಅಭ್ಯಾಸ ಮಾಡಿರುವ ವಿದ್ಯಾರ್ಥಿಗಳು ಯೋಗ ದಿನದಂದು ಸಾಮೂಹಿಕವಾಗಿ ಪ್ರದರ್ಶನ ಮಾಡಲಿದ್ದಾರೆ.

ದೈಹಿಕ ಮತ್ತು ಮಾನಸಿಕ ಕ್ಷಮತೆ ಸಾಧಿಸುವ ಯೋಗ ದಿನಾಚರಣೆ ಅಂಗವಾಗಿ 191 ದೇಶಗಳ 251ನಗರಗಳಲ್ಲಿ ಯೋಗ ಕಾರ್ಯಕ್ರಮಗಳು ನಡೆಯಲಿವೆ. 50 ಮುಸ್ಲಿಂ ರಾಷ್ಟ್ರಗಳ ಪೈಕಿ 47 ರಾಷ್ಟ್ರಗಳು ಯೋಗಕ್ಕೆ ಜೈ ಎಂದಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+