• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಮ ಮಂದಿರ ನಿರ್ಮಾಣಕ್ಕೆ ಒತ್ತಾಯಿಸಿ ನ.25 ರಂದು ಬೃಹತ್ ಜನಾಗ್ರಹ ಸಮಾವೇಶ

|

ಮಂಗಳೂರು, ನವೆಂಬರ್ 13:ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಾಸನ ರಚಿಸುವಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ಹೆಚ್ಚುತ್ತಿದ್ದು, ಮಂದಿರ ನಿರ್ಮಾಣಕ್ಕೆ ಒತ್ತಾಯಿಸಿ 'ಬೃಹತ್ ಜನಾಗ್ರಹ' ಸಭೆ ನಡೆಸಲು ವಿಶ್ವ ಹಿಂದೂ ಪರಿಷತ್‌ ಹಾಗೂ ಬಜರಂಗದಳ ನಿರ್ಧರಿಸಿದೆ.

ರಾಮಮಂದಿರ ನಿರ್ಮಿಸದಿದ್ದರೆ ಬಿಜೆಪಿ ವಿರುದ್ಧ ಮತ: ಪ್ರಮೋದ್ ಮುತಾಲಿಕ್ ಎಚ್ಚರಿಕೆ

ಈ ಕುರಿತು ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವಹಿಂದೂ ಪರಿಷತ್ ಮುಖಂಡ ಎಂ.ಬಿ.ಪುರಾಣಿಕ್, ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ 4 ಕಡೆ ಸಮಾವೇಶ ನಡೆಯಲಿದ್ದು, ಮಂಗಳೂರು ವಿಭಾಗದ ನಾಲ್ಕು ಕಡೆ ಬೃಹತ್ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ.

ಅಯೋಧ್ಯೆ ವಿವಾದ: ಅರ್ಜಿಯ ತ್ವರಿತ ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ

ನವೆಂಬರ್ 25 ಮಂಗಳೂರು, 18 ಕಾಸರಗೋಡು, 30 ಕೊಡಗು ಮತ್ತು ಡಿಸೆಂಬರ್ 2 ರಂದು ಉಡುಪಿಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಒತ್ತಾಯಿಸಿ ಸಮಾವೇಶ ನಡೆಯಲಿದೆ ಎಂದು ಅವರು ತಿಳಿಸಿದರು.

ರಾಮಮಂದಿರ ನಿರ್ಮಾಣಕ್ಕೆ ಆಗ್ರಹಿಸಿ ಬೆಂಗಳೂರಲ್ಲಿ ವಿಎಚ್‌ಪಿ ರ‍್ಯಾಲಿ

ರಾಮ ಮಂದಿರ ನಿರ್ಮಾಣಕ್ಕೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಈ ಬೃಹತ್ ಸಮಾವೇಶ ಆಯೋಜಿಸಲಾಗಿದ್ದು, ದೇಶದ ಪ್ರಮುಖ ಸಾಧು-ಸಂತರ ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ ಎಂದು ಅವರು ಪುರಾಣಿಕ್ ಸ್ಪಷ್ಟಪಡಿಸಿದರು.

English summary
Vishwa Hindu Parishad and Bajarangadal planning to hold 4 mega public meeting by religious leaders in Mangaluru vibhaga
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X