ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರವೀಣ್‌ ತೊಗಾಡಿಯಾ ಮಂಗಳೂರು ಪ್ರವೇಶಿಸುವಂತಿಲ್ಲ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಜನವರಿ 19 : ವಿಶ್ವ ಹಿಂದೂ ಪರಿಷತ್‌ ಕಾರ್ಯಾಧ್ಯಕ್ಷ ಪ್ರವೀಣ್‌ ತೊಗಾಡಿಯಾ ಅವರು ಮಂಗಳೂರು ನಗರ ಪ್ರವೇಶಿಸದಂತೆ ಪೊಲೀಸರು ನಿಷೇಧ ಹೇರಿದ್ದಾರೆ. ಜನವರಿ 18 ರಿಂದ 24ತನಕ ತೊಗಾಡಿಯಾ ಅವರು ಮಂಗಳೂರಿಗೆ ಆಗಮಿಸುವಂತಿಲ್ಲ.

ಮಂಗಳೂರು ನಗರ ಪೊಲೀಸ್ ಆಯುಕ್ತ ಎಂ.ಚಂದ್ರಶೇಖರ್ ಅವರು ಈ ಕುರಿತು ಸೋಮವಾರ ಸಂಜೆ ಆದೇಶ ಹೊರಡಿಸಿದ್ದಾರೆ. ಜನವರಿ 20ರಂದು ಪ್ರವೀಣ್ ತೊಗಾಡಿಯಾ ಅವರು ಮಂಗಳೂರು ನಗರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕಾಗಿತ್ತು. [ಮಂಗಳೂರಿಗೆ ನೂತನ ಪೊಲೀಸ್ ಆಯುಕ್ತರ ನೇಮಕ]

praveen togadia

ಪ್ರವೀಣ್ ತೊಗಾಡಿಯಾ ಅವರ ವಿರುದ್ಧ ಕಲಂ 144 (3) ಸಿಆರ್‌ಪಿಸಿ ಅನ್ವಯ ಜನವರಿ 18 ರಿಂದ 24ರವರೆಗೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಪ್ರವೇಶ ಮತ್ತು ಸಭೆ, ಸಮಾರಂಭಗಳಲ್ಲಿ ಪಾಲ್ಗೊಳ್ಳದಂತೆ ನಿಷೇಧಾಜ್ಞೆ ಹೊರಡಿಸಲಾಗಿದೆ. [ಕರಾವಳಿ ಭಾಗದಲ್ಲಿ ಒಂದು ವರ್ಷದಲ್ಲಿ 217 ಕೊಲೆ]

ತೊಗಾಡಿಯಾ ಅವರ ಪ್ರವೇಶದಿಂದ ನಗರದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟಾಗಬಹದು ಎಂಬುದನ್ನು ಪರಿಗಣಿಸಿ ಪೊಲೀಸ್‌ ಇಲಾಖೆ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿಷೇಧಾಜ್ಞೆ ಹೊರಡಿಸಿದೆ.

ಇದೇ ಮೊದಲಲ್ಲ : ಪ್ರವೀಣ್ ತೊಗಾಡಿಯಾ ಅವರಿಗೆ ನಿಷೇಧ ಹೇರುತ್ತಿರುವುದು ಇದೇ ಮೊದಲಲ್ಲ. 2015ರಲ್ಲಿ ಬೆಂಗಳೂರು, ಉಡುಪಿ, ಮೈಸೂರಿಗೆ ಪ್ರವೀಣ್ ತೊಗಾಡಿಯಾ ಅವರು ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿತ್ತು.

English summary
Mangaluru Police commissioner M.Chandra Sekhar banned the entry of VHP leader Praveen Togadia, who is scheduled to arrive to city on January 20 for various programmes.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X