ವಿಜಯಾ ಬ್ಯಾಂಕ್ ವಿಲೀನ ವಿರೋಧಿಸಿ ಮಂಗಳೂರಿನಲ್ಲಿ ಕರಾಳ ದಿನ ಆಚರಣೆ
ಮಂಗಳೂರು, ಏಪ್ರಿಲ್ 01: ಕರಾವಳಿಯ ಪ್ರತಿಷ್ಠಿತ ವಿಜಯಾ ಬ್ಯಾಂಕ್ ಇಂದು ಬ್ಯಾಂಕ್ ಆಫ್ ಬರೋಡಾ ಆಗಿ ಪರಿವರ್ತನೆಗೊಂಡಿದೆ. ವಿಜಯಾ ಬ್ಯಾಂಕ್ ಮತ್ತು ದೇನಾ ಬ್ಯಾಂಕ್ ಅನ್ನು ಬ್ಯಾಂಕ್ ಆಫ್ ಬರೋಡಾದೊಂದಿಗೆ ವಿಲೀನ ಮಾಡಿರುವ ಕೇಂದ್ರ ಸರಕಾರದ ಕ್ರಮವನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಟನೆಗಳು ನಡೆದಿವೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಈ ವಿಲೀನ ಪ್ರಕ್ರಿಯೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವಿರೋಧಿಸಿದೆ. ನಗದ ಮಲ್ಲಿಕಟ್ಟೆಯಲ್ಲಿರುವ ವಿಜಯಾ ಬ್ಯಾಂಕ್ ಶಾಖೆಯ ಆವರಣದಲ್ಲಿ ಸೇರಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಸುವ ಮೂಲಕ ಕರಾಳ ದಿನ ಆಚರಿಸಿದರು.
ಈ ಸಂದರ್ಭದಲ್ಲಿಮಾಜಿ ಸಚಿವ ರಮಾನಾಥ ರೈ, ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ, ಮಾಜಿ ರಾಜ್ಯಸಭಾ ಸದಸ್ಯ ಬಿ.ಇಬ್ರಾಹೀಂ, ಮಾಜಿ ಶಾಸಕರಾದ ಜೆ.ಆರ್.ಲೋಬೊ, ಮೊಯ್ದಿನ್ ಬಾವಾ ಮತ್ತಿತರರು ಉಪಸ್ಥಿತರಿದ್ದರು.

ಬ್ಯಾಂಕ್ ಆಫ್ ಬರೋಡಾದೊಂದಿಗೆ ವಿಜಯಾ ಬ್ಯಾಂಕ್ ಅನ್ನು ವಿಲೀನ ಮಾಡಿರುವ ಕೇಂದ್ರ ಸರಕಾರದ ಕ್ರಮವನ್ನು ಖಂಡಿಸಿ ವಿವಿಧ ಸಮಾನ ಮನಸ್ಕ ಸಂಘಟನೆಗಳು ನಗರದ ಅಂಬೇಡ್ಕರ್ ವೃತ್ತದ ಬಳಿಯಿರುವ ವಿಜಯ ಬ್ಯಾಂಕ್‌ನ ಪ್ರಧಾನ ಕಚೇರಿಯೆದುರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.












Click it and Unblock the Notifications