ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಜಯಾ ಬ್ಯಾಂಕ್ ವಿಲೀನ ವಿರೋಧಿಸಿ ಮಂಗಳೂರಿನಲ್ಲಿ ಕರಾಳ ದಿನ ಆಚರಣೆ

|
Google Oneindia Kannada News

ಮಂಗಳೂರು, ಏಪ್ರಿಲ್ 01: ಕರಾವಳಿಯ ಪ್ರತಿಷ್ಠಿತ ವಿಜಯಾ ಬ್ಯಾಂಕ್ ಇಂದು ಬ್ಯಾಂಕ್ ಆಫ್ ಬರೋಡಾ ಆಗಿ ಪರಿವರ್ತನೆಗೊಂಡಿದೆ. ವಿಜಯಾ ಬ್ಯಾಂಕ್ ಮತ್ತು ದೇನಾ ಬ್ಯಾಂಕ್ ಅನ್ನು ಬ್ಯಾಂಕ್ ಆಫ್ ಬರೋಡಾದೊಂದಿಗೆ ವಿಲೀನ ಮಾಡಿರುವ ಕೇಂದ್ರ ಸರಕಾರದ ಕ್ರಮವನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಟನೆಗಳು ನಡೆದಿವೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಈ ವಿಲೀನ ಪ್ರಕ್ರಿಯೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವಿರೋಧಿಸಿದೆ. ನಗದ ಮಲ್ಲಿಕಟ್ಟೆಯಲ್ಲಿರುವ ವಿಜಯಾ ಬ್ಯಾಂಕ್ ಶಾಖೆಯ ಆವರಣದಲ್ಲಿ ಸೇರಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಸುವ ಮೂಲಕ ಕರಾಳ ದಿನ ಆಚರಿಸಿದರು.

ಕರಾವಳಿಯ ಹೆಮ್ಮೆ ವಿಜಯ ಬ್ಯಾಂಕ್ ಇಂದು ಬ್ಯಾಂಕ್ ಆಫ್ ಬರೋಡ ಜೊತೆ ವಿಲೀನ:ಪ್ರತಿಭಟನೆಕರಾವಳಿಯ ಹೆಮ್ಮೆ ವಿಜಯ ಬ್ಯಾಂಕ್ ಇಂದು ಬ್ಯಾಂಕ್ ಆಫ್ ಬರೋಡ ಜೊತೆ ವಿಲೀನ:ಪ್ರತಿಭಟನೆ

ಈ ಸಂದರ್ಭದಲ್ಲಿಮಾಜಿ ಸಚಿವ ರಮಾನಾಥ ರೈ, ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ, ಮಾಜಿ ರಾಜ್ಯಸಭಾ ಸದಸ್ಯ ಬಿ.ಇಬ್ರಾಹೀಂ, ಮಾಜಿ ಶಾಸಕರಾದ ಜೆ.ಆರ್.ಲೋಬೊ, ಮೊಯ್ದಿನ್ ಬಾವಾ ಮತ್ತಿತರರು ಉಪಸ್ಥಿತರಿದ್ದರು.

Vijaya Bank mergers:Black day observes in Mangaluru

ಬ್ಯಾಂಕ್ ಆಫ್ ಬರೋಡಾದೊಂದಿಗೆ ವಿಜಯಾ ಬ್ಯಾಂಕ್ ಅನ್ನು ವಿಲೀನ ಮಾಡಿರುವ ಕೇಂದ್ರ ಸರಕಾರದ ಕ್ರಮವನ್ನು ಖಂಡಿಸಿ ವಿವಿಧ ಸಮಾನ ಮನಸ್ಕ ಸಂಘಟನೆಗಳು ನಗರದ ಅಂಬೇಡ್ಕರ್ ವೃತ್ತದ ಬಳಿಯಿರುವ ವಿಜಯ ಬ್ಯಾಂಕ್‌ನ ಪ್ರಧಾನ ಕಚೇರಿಯೆದುರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.

English summary
Dakshina Kannada District Congress and other organisation observed Black day against Vijaya bank merged with Bank of Baroda.They staged protest in Mallikatta.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X