ವಿನಾಯಕ್ ಬಾಳಿಗ ಕೊಲೆ ಆರೋಪಿ ನರೇಶ್ ಶೆಣೈ ಶರಣು
ಮಂಗಳೂರು, ಜೂನ್ 24 : ಆರ್ಟಿಐ ಕಾರ್ಯಕರ್ತ ವಿನಾಯಕ್ ಬಾಳಿಗ ಕೊಲೆ ಪ್ರಕರಣದ ಆರೋಪಿ ನಮೋ ಬ್ರಿಗೇಡ್ ಸಂಸ್ಥಾಪಕ ನರೇಶ್ ಶೆಣೈ ಶರಣಾಗಿದ್ದಾರೆ. 2016ರ ಮಾರ್ಚ್ 21ರಂದು ವಿನಾಯಕ್ ಬಾಳಿಗ ಹತ್ಯೆ ನಡೆದಿತ್ತು.
ಮಂಗಳೂರಿನ ಸಿಸಿಬಿ ಪೊಲೀಸರ ಮುಂದೆ ಶುಕ್ರವಾರ ನರೇಶ್ ಶೆಣೈ ಶರಣಾಗಿದ್ದಾರೆ. ಸಿಸಿಬಿ ಕಚೇರಿಯಲ್ಲಿ ಅವರ ವಿಚಾರಣೆ ನಡೆಯುತ್ತಿದೆ. ವಿನಾಯಕ್ ಬಾಳಿಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬರ್ಕೆ ಪೊಲೀಸರು ಮಂಗಳೂರಿನ 3ನೇ ಜೆಎಂಎಫ್ಸಿ ಕೋರ್ಟ್ಗೆ ಗುರುವಾರ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದರು. [RTI ಬಾಳಿಗಾ ಕೊಲೆ ಪ್ರಕರಣ: ಜಿ ಎಸ್ ಬಿ ಸಮಾಜದ ಸ್ಪಷ್ಟನೆ]

ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ನರೇಶ್ ಶೆಣೈ ಅವರು ಪ್ರಮುಖ ಆರೋಪಿಯಾಗಿದ್ದು, ಅವರಿಗಾಗಿ ಕಳೆದ ಮೂರು ತಿಂಗಳಿನಿಂದ ಹುಡುಕಾಟ ನಡೆಯುತ್ತಿತ್ತು. [ನರೇಶ್ ಶೆಣೈ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ]
ಜಾಮೀನಿಗೆ ಪ್ರಯತ್ನ ನಡೆಸಿದ್ದರು : ನರೇಶ್ ಶೆಣೈ ಅವರು ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆಯಲು ಪ್ರಯತ್ನ ನಡೆಸಿದ್ದರು. ಆದರೆ, ಅವರು ಕೋರ್ಟ್ಗೆ ಬರುವ ಸುಳಿವು ಸಿಕ್ಕ ಪೊಲೀಸರು ಬಂಧಿಸಲು ಅಗತ್ಯ ತಯಾರಿ ಮಾಡಿಕೊಂಡಿದ್ದರು. ಆದ್ದರಿಂದ, ಅವರು ಪೊಲೀಸರ ಮುಂದೆ ಶರಣಾಗಿದ್ದಾರೆ.
ಪ್ರತಿಭಟನೆ ನಡೆದಿತ್ತು : ನರೇಶ್ ಶೆಣೈ ಬಂಧಿಸಬೇಕು ಎಂದು ಒತ್ತಾಯಿಸಿ ದೇಶಪ್ರೇಮಿಗಳ ಸಂಘಟನೆ ಜೂನ್ 7ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿತ್ತು. ಹತ್ಯೆ ನಡೆದು ಎರಡೂವರೆ ತಿಂಗಳಾದರೂ ಪೊಲೀಸರು ಆರೋಪಿ ನರೇಶ್ ಶೆಣೈಯನ್ನು ಬಂಧಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications