ವಿಟ್ಲದಲ್ಲಿ ಅಪ್ರಾಪ್ತ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ
ಮಂಗಳೂರು, ಮಾರ್ಚ್ 19: ತಂದೆಯೇ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಮೂರು ವರ್ಷಗಳಿಂದ ನಿರಂತರವಾಗಿ ಅತ್ಯಾಚಾರ ನಡೆಸುತ್ತಿದ್ದ ಸಂಗತಿ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
ಮಂಗಳೂರಿನ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಪೆರುವಾಯಿಯಲ್ಲಿ ಇಂಥದ್ದೊಂದು ಸಂಗತಿ ಕಂಡುಬಂದಿದೆ. ಮಗಳ ಮೇಲೆ ಅತ್ಯಾಚಾರ ನಡೆಸಿದ್ದ ತಂದೆಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ತಂದೆ ತನ್ನ ಅಪ್ರಾಪ್ತ ಮಗಳ ಮೇಲೆ ಮೂರು ವರ್ಷಗಳಿಂದಲೂ ಅತ್ಯಾಚಾರ ನಡೆಸಿದ್ದಾನೆ. ಮಾರ್ಚ್ 16ರಂದೂ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆತ ಮತ್ತೆ ಅತ್ಯಾಚಾರ ಎಸಗಿದ್ದು, ಬಾಲಕಿ ಅಸ್ವಸ್ಥಗೊಂಡಿದ್ದಾಳೆ.

ಅಸ್ವಸ್ಥಳಾದ ಈಕೆಯನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಮಯದಲ್ಲಿ ಆಕೆ ಎಲ್ಲಾ ವಿಷಯವನ್ನು ತಿಳಿಸಿದ್ದಾಳೆ. ಬಂಟ್ವಾಳ ಸಿಪಿಐ ಹಾಗೂ ಎಸ್ ಐ ಆರೋಪಿಯನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.












Click it and Unblock the Notifications