ಮಂಗಳೂರಿನ ರಾಮಕೃಷ್ಣ ಮಠದಲ್ಲಿ ಜ.27 ರಂದು 'ವಿವೇಕ ಸ್ಮೃತಿ' ಕಾರ್ಯಕ್ರಮ
ಮಂಗಳೂರು, ಜನವರಿ 25: ಕಲಾಸಾಧನ ಮ್ಯೂಸಿಕ್ ಸ್ಕೂಲ್ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ರಾಮಕೃಷ್ಣ ಮಠದ ಸಹಯೋಗದಲ್ಲಿ ವಿವೇಕ ಸ್ಮೃತಿ ಕಾರ್ಯಕ್ರಮ ಜನವರಿ 27 ರಂದು ಸಂಜೆ 5 ಗಂಟೆಗೆ ನಗರದ ರಾಮಕೃಷ್ಣ ಮಠದಲ್ಲಿ ನಡೆಯಲಿದೆ.
ವಿಭಾ ಶ್ರೀನಿವಾಸ್ ನಾಯಕ್ ಇವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಹಾಗೂ ಭಕ್ತಿ ಸಂಗೀತ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ ನೆರವೇರಿಸಲಿದ್ದಾರೆ.

ಮಂಗಳೂರು ಪೊಲೀಸ್ ಆಯುಕ್ತ ಟಿ ಆರ್ ಸುರೇಶ್ ಅವರು ಸಂಗೀತ ಕಲಾವಿದರಿಗೆ ಸನ್ಮಾನ ಮಾಡಲಿದ್ದಾರೆ .ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಮಹಮ್ಮದ್ ನಝೀರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್.ಜಿ ಹಾಗೂ ರೋಹನ್ ಕಾರ್ಪೋರೇಶನ್ ಆಡಳಿತ ನಿರ್ದೇಶಕ ರೋಹನ್ ಮೊಂತೆರೋ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಕಲಾಸಾಧನ ಮ್ಯೂಸಿಕ್ ಸ್ಕೂಲ್ ನ ನಿರ್ದೇಶಕಿ ವಿಭಾ ಶ್ರೀನಿವಾಸ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












Click it and Unblock the Notifications