ದ.ಕ.ದಲ್ಲಿ ಮತದಾರರೇ ಮೋದಿ ಪರ ಕೆಲಸ ಮಾಡುತ್ತಿದ್ದಾರೆ:ನಳಿನ್ ಕುಮಾರ್ ಕಟೀಲ್
ಮಂಗಳೂರು, ಏಪ್ರಿಲ್ 16: ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಮೋದಿ ಅಲೆ ಇಲ್ಲ. ಆದರೆ ಮೋದಿ ಸುನಾಮಿ ಎದ್ದಿದೆ. ಈ ಬಾರಿಯ ಚುನಾವಣೆ ಇತಿಹಾಸ ನಿರ್ಮಿಸಲಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ. ಜಿಲ್ಲೆಯಲ್ಲಿ ಮತದಾರರೇ ಮೋದಿ ಪರ ಕೆಲಸ ಮಾಡುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ತಿಳಿಸಿದರು.
ಬಿಜೆಪಿ, ಕಾಂಗ್ರೆಸ್, ಸಿಪಿಎಂ ಪ್ರಣಾಳಿಕೆಯ ತುಲನೆ. ಯಾವ ಪಕ್ಷದ ಪ್ರಣಾಳಿಕೆ ಉತ್ತಮವಾಗಿದೆ?
ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಂಗಳೂರಿನಲ್ಲಿ ಏಪ್ರಿಲ್ 13 ರಂದು ನಡೆದ ಬೃಹತ್ ಸಮಾವೇಶದಲ್ಲಿ ನಿರೀಕ್ಷೆಗೂ ಮೀರಿ ಜನ ಸ್ಪಂದಿಸಿದ್ದಾರೆ. ನಿನ್ನೆ ದೂರದರ್ಶನ ಸಂದರ್ಶನದಲ್ಲೂ ಪ್ರಧಾನಿ ಮಂಗಳೂರಿನ ಸಮಾವೇಶದಲ್ಲಿ ಜನರ ಸ್ಪಂದನೆ ಬಗ್ಗೆ ಉಲ್ಲೇಖ ಮಾಡಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.
ಮೋದಿ ಅವರು ಮಂಗಳೂರಿಗೆ ಭೇಟಿ ನೀಡಿದ ಬಳಿಕ ಜನರಲ್ಲಿ ಉತ್ಸಾಹ ಹೆಚ್ಚಿದೆ.ಈ ಬಾರಿಯ ಮತದಾನದ ವೇಳೆ ಪ್ರಜಾಪ್ರಭುತ್ವದ ಉತ್ಸವ ನಡೆಯಲಿದೆ. ಜಾತ್ರೆಗೆ ಹೋಗುವಂತೆ ಜನ ಮತಗಟ್ಟೆಗೆ ಬರಲಿದ್ದಾರೆ ಎಂದರು.

ಚುನಾವಣಾ ಬಹಿರಂಗ ಪ್ರಚಾರಕ್ಕೆ ಇಂದು ಅಂತಿಮ ದಿನ. ಕ್ಷೇತ್ರದಲ್ಲಿ ನಾಲ್ಕು ಸಲ ಸುತ್ತಿದ್ದೇನೆ. ಕಾರ್ಯಕರ್ತರು 3 ಬಾರಿ ಮನೆ ಮನೆ ಭೇಟಿ ನೀಡಿದ್ದಾರೆ. ಈ ಬಾರಿ ಶತಮಾನದ ಮತದಾನವಾಗಲಿದೆ ಎಂದು ನಳಿನ್ ವಿಶ್ವಾಸ ವ್ಯಕ್ತಪಡಿಸಿದರು.












Click it and Unblock the Notifications