ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿರುಸುಗೊಂಡ ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆ ಮತದಾನ ಪ್ರಕ್ರಿಯೆ

|
Google Oneindia Kannada News

ಮಂಗಳೂರು ಜೂನ್ 08: ನೈರುತ್ಯ ಪದವೀಧರ, ಶಿಕ್ಷಕರ ಕ್ಷೇತ್ರ ಪರಿಷತ್ ಚುನಾವಣೆಗೆ ಮತದಾನ ಪ್ರಕ್ರಿಯೆ ಮಂಗಳೂರು ಸೇರದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿರುಸಿನಿಂದ ನಡೆಯುತ್ತಿದೆ. ಮುಂಜಾನೆ 7 ಗಂಟೆಯಿಂದ ಮತದಾನ ಆರಂಭಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದವೀಧರ ಕ್ಷೇತ್ರಕ್ಕೆ 23 ಮತಗಟ್ಟೆಗಳು ಹಾಗು ಶಿಕ್ಷಕರ ಕ್ಷೇತ್ರದಲ್ಲಿ 14 ಮತಗಟ್ಟೆ ಸ್ಥಾಪಿಸಲಾಗಿದೆ.

ಜಿಲ್ಲೆಯಲ್ಲಿ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 37 ಮತದಾನ ಕೇಂದ್ರಗಳ 500 ಮೀಟರ್ ವ್ಯಾಪ್ತಿಯಲ್ಲಿ ಕಲಂ 144 ರನ್ವಯ ನಿಷೇಧಾಜ್ಞೆಯನ್ನು ವಿಧಿಸಲಾಗಿದೆ.

ಈಶಾನ್ಯ ಪದವೀಧರ ಕ್ಷೇತ್ರ: ಪೈಪೋಟಿ ಕೊಡ್ತಾರಾ ಡಾ.ರಝಾಕ್​ ಉಸ್ತಾದ್?ಈಶಾನ್ಯ ಪದವೀಧರ ಕ್ಷೇತ್ರ: ಪೈಪೋಟಿ ಕೊಡ್ತಾರಾ ಡಾ.ರಝಾಕ್​ ಉಸ್ತಾದ್?

ಮತಗಟ್ಟೆ ಕೇಂದ್ರಗಳ 100 ಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್ ಬಳಕೆಯನ್ನು ಹಾಗೂ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Voting begins in Mangaluru for MLC graduate and teachers constituency election

ಇಂದು ಬೆಳ್ಳಂಬೆಳಗ್ಗೆಯಿಂದಲೇ ಪದವೀಧರ ಹಾಗು ಶಿಕ್ಷಕ ನೊಂದಾಯಿತ ಮತದಾರರು ಬಿರುಸಿನಿಂದ ಮತಚಲಾವಣೆ ಮಾಡುತ್ತಿದ್ದಾರೆ. ಈ ನಡುವೆ ವಿಧಾನ ಪರಿಷತ್ ನೈರುತ್ಯ ಶಿಕ್ಷಕ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮಂಗಳೂರಿನ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ತಮ್ಮ ಮತ ಚಲಾಯಿಸಿದರು.

Voting begins in Mangaluru for MLC graduate and teachers constituency election
English summary
Legislative council election polling began in Mangaluru and other polling stations in Dakshina kannada District. Teacher's constituency candidate of BJP Ganesh Karnik cast his vote in University college polling booth in Mangaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X