ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬತ್ತಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳದ ಸ್ನಾನಘಟ್ಟದಲ್ಲಿ ಹರಿದಿದೆ ನೀರು

|
Google Oneindia Kannada News

ಮಂಗಳೂರು, ಜೂನ್ 13: ಮಳೆಯಿಲ್ಲದೇ ಬತ್ತಿ ಹೋಗಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳದ ಸ್ನಾನಘಟ್ಟದಲ್ಲಿ ಈಗ ನೀರಿನ ಹರಿವು ಶುರುವಾಗಿದೆ. ಕಳೆದೆರಡು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ಈ ಹಿನ್ನೆಲೆ ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಆರಂಭವಾಗಿದೆ.

ಮಳೆಗಾಗಿ ನೇತ್ರಾವತಿ ನದಿ ದಡದಲ್ಲಿ ವರುಣ ಹೋಮಮಳೆಗಾಗಿ ನೇತ್ರಾವತಿ ನದಿ ದಡದಲ್ಲಿ ವರುಣ ಹೋಮ

ಶೀಘ್ರದಲ್ಲಿ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲದ ಪರಿಸ್ಥಿತಿ ಧರ್ಮಸ್ಥಳದಲ್ಲಿ ನಿರ್ಮಾಣವಾಗಿತ್ತು. ನೇತ್ರಾವತಿ ಕಿಂಡಿ ಅಣೆಕಟ್ಟಿನಲ್ಲಿ ತಾತ್ಕಾಲಿಕ ನೀರು ಹಾಗೂ ತೀರ್ಥದ ಗುಂಡಿಯಲ್ಲಿ ಸ್ವಲ್ಪ ನೀರಿತ್ತು.

Water flow in Nethravathi dharmastala

ಈಗ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸ್ನಾನಘಟ್ಟದಲ್ಲಿ ನೀರು ಹರಿಯುತ್ತಿರುವುದು ಭಕ್ತರ ಸಂತಸಕ್ಕೆ ಕಾರಣವಾಗಿದೆ. ನೀರಿನ ಕೊರತೆ ಹಿನ್ನೆಲೆಯಲ್ಲಿ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾನಘಟ್ಟದಲ್ಲಿ ಭಕ್ತರಿಗೆ ಸ್ನಾನಕ್ಕೂ ನೀರಿರಲಿಲ್ಲ. ಈ ಕಾರಣಕ್ಕಾಗಿ ಕ್ಷೇತ್ರದ ವತಿಯಿಂದ, ಭಕ್ತಾಧಿಗಳು ನೀರಿನ ಸಮಸ್ಯೆ ನೀಗುವ ತನಕ ಕ್ಷೇತ್ರಕ್ಕೆ ಭೇಟಿ ನೀಡದಂತೆ ವಿನಂತಿಸಲಾಗಿತ್ತು.

 ಧರ್ಮಸ್ಥಳದಲ್ಲಿ ನೀರಿನ ಅಭಾವ:ದರ್ಶನ ಮುಂದೂಡುವಂತೆ ವೀರೇಂದ್ರ ಹೆಗ್ಗಡೆ ಮನವಿ ಧರ್ಮಸ್ಥಳದಲ್ಲಿ ನೀರಿನ ಅಭಾವ:ದರ್ಶನ ಮುಂದೂಡುವಂತೆ ವೀರೇಂದ್ರ ಹೆಗ್ಗಡೆ ಮನವಿ

ಕರಾವಳಿಯಲ್ಲಿ ಮುಂಗಾರು ಇನ್ನೂ ಬಿರುಸುಗೊಂಡಿದೆ. ಜಿಲ್ಲೆಯ ನದಿ ತೊರೆಗಳಲ್ಲಿ ನೀರು ತುಂಬುತ್ತಿದೆ. ಕಡಲು ಇನ್ನಿಲ್ಲದಂತೆ ಅಬ್ಬರಿಸುತ್ತಿದೆ.

English summary
Heavy rain fall reported in almost all the area of Dakshina Kannada district. Now water flow increased in Nethravathi river.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X