Water metro: ರಾಜ್ಯದ ಮೊಟ್ಟ ಮೊದಲ ವಾಟರ್‌ ಮೆಟ್ರೋ ಆರಂಭಕ್ಕೆ ನಿರ್ಧಾರ, ಎಲ್ಲಿ?-ಇಲ್ಲಿದೆ ಮಾಹಿತಿ

ಬೆಂಗಳೂರು, ಫೆಬ್ರವರಿ, 16: ಇಂದು (ಫೆಬ್ರವರಿ 16) ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ಬಜೆಟ್‌ ಮಂಡನೆ ಮಾಡಿದ್ದು, ಈ ವೇಳೆ ರಾಜ್ಯದ ಮೊಟ್ಟ ಮೊದಲ ವಾಟರ್‌ ಮೆಟ್ರೋವನ್ನು ಘೋಷಣೆ ಮಾಡಿದ್ದಾರೆ. ಹಾಗಾದರೆ ಈ ಮೆಟ್ರೋ ಸೇವೆ ಯಾವ ಜಿಲ್ಲೆಯಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಎಲ್ಲವೂ ಅಂದುಕೊಂಡಂತೆಯೇ ಆದರೆ ದಕ್ಷಿಣ ಕನ್ನಡದಲ್ಲಿ ರಾಜ್ಯದ ಮೊದಲ ವಾಟರ್‌ ಮೆಟ್ರೋ ಬರಲಿದೆ. ಈ ಮೂಲಕ ಮಂಗಳೂರಿಗೂ ವಾಟರ್‌ ಮೆಟ್ರೋ ಪ್ರಯಾಣ ಸಾಧ್ಯವಾಗುವ ಲಕ್ಷಣಗಳು ಇವೆ ಎನ್ನಲಾಗುತ್ತಿದೆ. ವಿಧಾನಸಭೆಯಲ್ಲಿ ಇಂದು ದಾಖಲೆಯ 15ನೇ ಬಾರಿಗೆ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು ಜಲ ಮೆಟ್ರೋ ಸೇವೆ ಘೋಷಣೆ ಮಾಡಿದ್ದಾರೆ.

Water metro: Decision to first water metro start in this district of state, know details

ಕಡಲ ನಗರಿ ಮಂಗಳೂರಿನ ಗುರುಪುರ ಹಾಗೂ ನೇತ್ರಾವತಿ ನದಿಗಳಲ್ಲಿ ವಾಟರ್‌ ಮೆಟ್ರೋ ಸೇವೆಯನ್ನು ಪರಿಚಯಿಸಲು ಕಾರ್ಯಸಾಧ್ಯತಾ ವರದಿ ತಯಾರಿಸುವುದಾಗಿ ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ. ಇನ್ನು ದೇಶದ ಮೊದಲ ಜಲ ಮೆಟ್ರೋ ಸೇವೆ ಕೇರಳದಲ್ಲಿ ಕಳೆದ ವರ್ಷ ಆರಂಭವಾಗಿತ್ತು. ಪ್ರಧಾನಿ ಮೋದಿ ಅವರು ಈ ವಾಟರ್‌ ಮೆಟ್ರೋವನ್ನು 2023ರ ಏಪ್ರಿಲ್‌ 25ರಂದು ಉದ್ಘಾಟಣೆ ಮಾಡಿದ್ದರು.

ಕೊಚ್ಚಿಯ ಪೋರ್ಟ್ ಸಿಟಿಯ ಸುತ್ತಲಿನ 10 ದ್ವೀಪಗಳಲ್ಲಿ ಈ ಮೆಟ್ರೋ ಸಂಚಾರ ಮಾಡುತ್ತಿದ್ದು, 8 ಎಲೆಕ್ಟ್ರಿಕ್ ಬೋಟ್‌ಗಳು, 38 ಟರ್ಮಿನಲ್‌ಗಳ ಮೂಲಕ ವಾಟರ್‌ ಮೆಟ್ರೋ ಸೇವೆಯನ್ನು ಒದಗಿಸುತ್ತಿದೆ.

ಈ ಜಿಲ್ಲೆಗೂ ಮೆಟ್ರೋ: ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಕಂಪನಿಗಳಿಗೆ ಹೋಗುವ ಉದ್ಯೋಗಿಗಳಿಗೆ ಹಾಗೂ ಸಾರ್ವಜನಿಕರಿಗೆ ಪ್ರಮುಖ ಸಾರಿಗೆಯಾಗಿದೆ. ಇದೀಗ ಮೈಸೂರಿನಲ್ಲೂ ಕೂಡ ಮೆಟ್ರೋ ರೈಲು ಬರಲಿದೆ ಪ್ರತಾಪ್‌ ಸಿಂಹ ಅವರು ಭರವಸೆ ನೀಡಿದ್ದಾರೆ. ಹಾಗಾದರೆ ಇದೆ ಯಾವಾಗ ಮೆಟ್ರೋ ಸಂಚಾರ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

2014ಕ್ಕೂ ಮೊದಲು ಒಂದು ರೈಲು ಬಂದಿಲ್ಲ. ನಾನು 11 ರೈಲುಗಳನ್ನು ತಂದಿದ್ದೇನೆ. ಶೀಘ್ರದಲ್ಲೇ 12ನೇ ರೈಲು ಬರಲಿದೆ. ಮೈಸೂರು-ರಾಮೇಶ್ವರಂ ರೈಲು ಬರಲಿದೆ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಭರವಸೆ ನೀಡಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬಿಎಸ್​ ಯಡಿಯೂರಪ್ಪ ಸಾಕಷ್ಟು ಅನುದಾನ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಬೆಂಗಳೂರು-ಮೈಸೂರಿಗೂ ಮೆಟ್ರೋ ಬರಲಿದೆ ಎಂದು ಹೇಳಿದ್ದಾರೆ.

ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಮೈಸೂರು ಕೊಡಗು ಲೋಕಸಭಾ ಚುನಾವಣಾ ಕಾರ್ಯಾಲಯ ಉದ್ಘಾಟನೆ ಮಾಡಿ ಮಾತನಾದ ಪ್ರತಾಪ್ ಸಿಂಹ, ಈ ವೇಳೆ ಮುಂದೆ ಬೆಂಗಳೂರು-ಮೈಸೂರು ಮೆಟ್ರೋ ಬರಲಿದೆ ಎಂದು ಭರವಸೆ ನೀಡಿದರು. ಚುನಾವಣೆಗೆ ಹೋಗಬೇಕಾದರೆ ಏನು ಮಾಡುತ್ತೇವೆ? ಅಧಿಕಾರದಲ್ಲಿ ಇದ್ದಾಗ ಏನು ಮಾಡಿದ್ದೇವೆ? 10 ವರ್ಷದಲ್ಲಿ ನಾನು ಕೆಲಸ ಮಾಡಿದ ರಿಪೋರ್ಟ್ ಕಾರ್ಡ್ ನೀಡಿದ್ದೇನೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+