ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಧರ್ಮಸ್ಥಳದಲ್ಲಿ ನೀರಿನ ಬವಣೆ: ಸರ್ಕಾರದೊಂದಿಗೆ ವೀರೇಂದ್ರ ಹೆಗ್ಗಡೆ ಚರ್ಚೆ

|
Google Oneindia Kannada News

ಬೆಂಗಳೂರು, ಮೇ 20: ತೀವ್ರ ನೀರಿನ ಅಭಾವ ಎದುರಿಸುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಬವಣೆಗೆ ಪರಿಹಾರ ಒದಗಿಸುವ ಸಂಬಂಧ ಸರ್ಕಾರ ಮುಂದಾಗಿದೆ.

ಧರ್ಮಸ್ಥಳದಲ್ಲಿ ಉದ್ಭವಿಸಿರುವ ನೀರಿನ ಕೊರತೆಯ ವಿಚಾರವನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಗಂಭೀರವಾಗಿ ಪರಿಗಣಿಸಿದ್ದಾರೆ. ಮುಖ್ಯಮಂತ್ರಿ ಅವರ ಸಲಹೆಯಂತೆ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರೊಂದಿಗೆ ಸೋಮವಾರ ಚರ್ಚಿಸಿದರು.

ಧರ್ಮಸ್ಥಳದಲ್ಲಿ ನೀರಿನ ಅಭಾವ:ದರ್ಶನ ಮುಂದೂಡುವಂತೆ ವೀರೇಂದ್ರ ಹೆಗ್ಗಡೆ ಮನವಿಧರ್ಮಸ್ಥಳದಲ್ಲಿ ನೀರಿನ ಅಭಾವ:ದರ್ಶನ ಮುಂದೂಡುವಂತೆ ವೀರೇಂದ್ರ ಹೆಗ್ಗಡೆ ಮನವಿ

ಧರ್ಮಸ್ಥಳದಲ್ಲಿ ನೀರಿನ ಹರಿವನ್ನು ಹಿಡಿದಿಡಲು ಇನ್ನೊಂದು ಚೆಕ್‍ಡ್ಯಾಂ ನಿರ್ಮಾಣದ ಅಗತ್ಯವಿದೆ ಎಂದು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ತಿಳಿಸಿದರು. ಈ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿಗಳ ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆಗಾಗಿ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

water scarcity in Dharmasthala veerendra heggade discussed with state chief secratary

ಜಿಲ್ಲೆಯಲ್ಲಿ ಜಿಲ್ಲಾಡಳಿತ ರೇಷನಿಂಗ್ ಮುಖಾಂತರ ನೀರು ಪೂರೈಸುತ್ತಿದ್ದು, ಕ್ಷೇತ್ರಕ್ಕೂ ನೀರಿನ ಸಮಸ್ಯೆ ಎದುರಾಗಿದೆ. ಧರ್ಮಸ್ಥಳಕ್ಕೆ ಬರುವ ಯಾತ್ರಾರ್ಥಿಗಳ ಉಪಯೋಗಕ್ಕೆ ಅಧಿಕ ಪ್ರಮಾಣದ ನೀರು ಬೇಕಾಗುತ್ತಿದ್ದು, ಈ ಕಾರಣಕ್ಕಾಗಿ ಭಕ್ತಾಧಿಗಳು ಹಾಗೂ ಪ್ರವಾಸಿಗರು ತಮ್ಮ ಪ್ರವಾಸವನ್ನು ಕೆಲವು ದಿನಗಳ ಕಾಲ ಮುಂದೂಡುವಂತೆ ಮನವಿ ಮಾಡಲಾಗಿತ್ತು.

ಮಂಗಳೂರಿನಲ್ಲಿ ನೀರಿಗೆ ಬರ, ಸಣ್ಣ ಕೈಗಾರಿಕೆಗಳು ಸ್ಥಗಿತಗೊಳ್ಳುವ ಭೀತಿ ಮಂಗಳೂರಿನಲ್ಲಿ ನೀರಿಗೆ ಬರ, ಸಣ್ಣ ಕೈಗಾರಿಕೆಗಳು ಸ್ಥಗಿತಗೊಳ್ಳುವ ಭೀತಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಭಕ್ತರಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮನವಿ ಮಾಡಿಕೊಂಡಿದ್ದು, ಶ್ರೀ ಕ್ಷೇತ್ರದಲ್ಲಿ ನೀರಿನ ಅಭಾವ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ನೇತ್ರಾವತಿ ನದಿಯಲ್ಲಿ ನೀರಿನ ಹರಿವು ತೀವ್ರ ತರದಲ್ಲಿ ಕಡಿಮೆಯಾಗಿದೆ.ನೀರಿನ ಅಭಾವ ಇರುವುದರಿಂದ ಭಕ್ತಾದಿಗಳು ಹಾಗು ಪ್ರವಾಸಿಗರು ಕೆಲ ದಿನಗಳ ಕಾಲ ಕ್ಷೇತ್ರದ ಭೇಟಿಯನ್ನು ಮುಂದೂಡುವಂತೆ ಕೋರಿದ್ದರು.

English summary
Dharmasthala Temple administrator Veerendra Heggade on Monday disccssed with State Chief Secratary T.M. Vijayabhaskar regarding water scarcity.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X