ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸುಮಲತಾ ಅಂಬರೀಶ್‌ಗೆ ಮಂಡ್ಯ ಟಿಕೆಟ್: ಸಿದ್ದರಾಮಯ್ಯ ಪ್ರತಿಕ್ರಿಯೆ

|
Google Oneindia Kannada News

Recommended Video

Lok Sabha Election 2019 : ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಗ್ಗೆ ಸಿದ್ದರಾಮಯ್ಯ ಹೇಳಿದ್ದು ಹೀಗೆ

ಮಂಗಳೂರು, ಫೆಬ್ರವರಿ 02: ಸುಮಲತಾ ಅವರಿಗೆ ಮಂಡ್ಯದಿಂದ ಟಿಕೆಟ್ ನೀಡುವ ವಿಚಾರದ ಬಗ್ಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಲೋಕಸಭೆ ಸೀಟು ಹಂಚಿಕೆ ಇನ್ನೂ ಅಂತಿಮವಾಗಿಲ್ಲ, ಈಗಲೇ ಏನು ಹೇಳಲು ಸಾಧ್ಯವಿಲ್ಲ ಎಂದರು.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಬರೀಶ್ ಕಾಂಗ್ರೆಸ್‌ನಲ್ಲಿದ್ದವರು, ಸುಮಲತಾ ಸಹ ಕಾಂಗ್ರೆಸ್‌ನವರೇ ಟಿಕೆಟ್ ಹಂಚಿಕೆ ಬಗ್ಗೆ ಮುಂದೆ ನಿರ್ಣಯ ತೆಗೆದುಕೊಳ್ಳುತ್ತೇವೆ ಎಂದರು.

ಮಂಡ್ಯದಿಂದ ಸುಮಲತಾ ಅಂಬರೀಶ್ ಪಕ್ಷೇತರರಾಗಿ ಸ್ಪರ್ಧೆ?ಮಂಡ್ಯದಿಂದ ಸುಮಲತಾ ಅಂಬರೀಶ್ ಪಕ್ಷೇತರರಾಗಿ ಸ್ಪರ್ಧೆ?

ಮಂಡ್ಯ ಕಾರ್ಯಕರ್ತರು ಒತ್ತಾಯ ಮಾಡುತ್ತಿರುವ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ , ಕಾರ್ಯಕರ್ತರು ಒತ್ತಾಯ ಮಾಡುತ್ತಿರುವುದು ನಿಜ ಆದರೆ, ನಾವು ಮತ್ತು ಜೆಡಿಎಸ್‌ ನವರು ಕೂತು ಚರ್ಚೆ ಮಾಡಿ ಯಾರಿಗೆ ಎಲ್ಲಿ ಟಿಕೆಟ್ ಕೊಡಬೇಕು ಎಂದು ತೀರ್ಮಾನ ಮಾಡುತ್ತೇವೆ ಎಂದರು.

we will sit with JDS and decide the parliment election seats: Siddaramaiah

ಡಿ.ಕೆ.ಶಿವಕುಮಾರ್ ಅವರ ಮೇಲೆ ಇಡಿ ದಾಳಿಯ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಹೊಸ ದಾಳಿಯ ಬಗ್ಗೆ ನನಗೆ ಗೊತ್ತಿಲ್ಲ. ಆದರೆ ಡಿ.ಕೆ.ಶಿ ಅವರು ಎಲ್ಲವನ್ನೂ ಕಾನೂನಾತ್ಮಕವಾಗಿ ಎದುರಿಸುತ್ತಾರೆ. ಬಿಜೆಪಿಯು ಇಡಿ, ಸಿಬಿಐ, ಐಟಿ ಬಳಸಿ ದ್ವೇಷ ರಾಜಕಾರಣ ನಡೆಸುತ್ತಿದೆ ಎಂದರು.

we will sit with JDS and decide the parliment election seats: Siddaramaiah

ಲೋಕಸಭೆಗೆ ಸ್ಪರ್ಧೆ: ಕುಮಾರಸ್ವಾಮಿ ಪುತ್ರ ನಿಖಿಲ್ ಹೇಳಿದ್ದೇನು? ಲೋಕಸಭೆಗೆ ಸ್ಪರ್ಧೆ: ಕುಮಾರಸ್ವಾಮಿ ಪುತ್ರ ನಿಖಿಲ್ ಹೇಳಿದ್ದೇನು?

ಮೈತ್ರಿ ಸರ್ಕಾರದಲ್ಲಿ ಇಬ್ಬರು ಸಿಎಂ ಇದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಬಿಜೆಪಿ ಅವಧಿಯಲ್ಲಿ ಮೂರು ಜನ ಸಿಎಂ ಆದರೂ ಐದು ವರ್ಷ ಪೂರೈಸಲಿಲ್ಲ. ಹಲವರ ಮೇಲೆ ಕ್ರಿಮಿನಲ್ ಕೇಸ್ ಆಯ್ತು , 8 ಮಂದಿ ಜೈಲಿಗೆ ಹೋದ್ರು , ಅವರು ಏನ್ರೀ ನಮ್ಮ ಬಗ್ಗೆ ಮಾತನಾಡುತ್ತಾರೆ ಎಂದು ಸಿದ್ದರಾಮಯ್ಯ ಸಿಟ್ಟಾದರು.

English summary
Siddaramaiah said congress leaders and JDS leaders will sit and decide about parliment seat distrubution. He also said Ambareesh was in congress his wife Sumalatha is also from congress.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X