ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ
ಮಂಗಳೂರಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಿಲ್ಲಾ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ ಕಚೇರಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಅಧಿಕಾರಿಯನ್ನು ಶುಕ್ರವಾರ ಬಂಧಿಸಲಾಗಿದೆ
ಮಂಗಳೂರು, ಏಪ್ರಿಲ್ 1: ಜಿಲ್ಲಾ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ ಕಚೇರಿಯಲ್ಲಿ ಅಪ್ರಾಪ್ತೆಯನ್ನು ಪುಸಲಾಯಿಸಿ, ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ರಾತ್ರಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಡಾ.ನಾಗರಾಜಪ್ಪ ಬಂಧಿತ ಆರೋಪಿ. ವಿಷಯ ತಿಳಿದ ಮಹಿಳಾ ಪೊಲೀಸರು ಬಾಲಕಿಯಿಂದ ಮಾಹಿತಿ ಪಡೆದು, ಅಧಿಕಾರಿಯನ್ನು ಬಂಧಿಸಿದ್ದಾರೆ. ಬಾಲಕಿ ಮೇಲೆ ಅತ್ಯಾಚಾರ ಎಸಗಿರುವುದು ವೈದ್ಯಕೀಯ ಪರೀಕ್ಷೆಯಲ್ಲೂ ಸಾಬೀತಾಗಿದೆ ಎಂದು ತಿಳಿದುಬಂದಿದೆ.[13ರ ಬಾಲಕಿ ಮೇಲೆ ಅತ್ಯಾಚಾರ, ಗರ್ಭಪಾತ ಮಾತ್ರೆಗಳಿಂದ ಕ್ಯಾನ್ಸರ್]

ಹಾಸ್ಟೆಲ್ ತಪಾಸಣೆಯ ನೆಪದಲ್ಲಿ ಪದೇಪದೇ ಅಶೋಕನಗರ ಹಾಸ್ಟೆಲ್‌ಗೆ ಹೋಗುತ್ತಿದ್ದ ಈ ಅಧಿಕಾರಿ ಭೇಟಿ ನೀಡಿದಾಗಲೆಲ್ಲಾ ಅಪ್ರಾಪ್ತೆಯನ್ನು ವಿದ್ಯಾರ್ಥಿ ನಿಲಯದ ಕಚೇರಿಗೆ ಕರೆಸಿಕೊಳ್ಳುತ್ತಿದ್ದ ಎನ್ನಲಾಗಿದೆ. ಇದರಿಂದ ಸಂಶಯಗೊಂಡ ಇತರ ವಿದ್ಯಾರ್ಥಿನಿಯರು ಬಾಲಕಿಯಲ್ಲಿ ವಿಚಾರಿಸಿದಾಗ ಸತ್ಯಾಂಶ ಬೆಳಕಿಗೆ ಬಂದಿದೆ.[ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಕಟ್ಟಡದಿಂದ ಜಿಗಿದು ಗಂಭೀರ ಗಾಯ]
ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಪೊಲೀಸರು, ಅಧಿಕಾರಿಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.












Click it and Unblock the Notifications