ಮುತಾಲಿಕ್ ಗೆ ಹಿಂದೂ ಧರ್ಮದ ಪಾರುಪತ್ಯ ಕೊಟ್ಟಿಲ್ಲ: ಸಚಿವ ರೈ

ಮಂಗಳೂರು, ಅಕ್ಟೋಬರ್ 9: ಪ್ರಮೋದ್ ಮುತಾಲಿಕ್ ಒಬ್ಬ ದಾರಿಹೋಕ. ಆತನ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಕಿಡಿ ಕಾರಿದರು.

ಪ್ರತಿ ಹಿಂದೂ ಕುಟುಂಬ ರಕ್ಷಣೆಗೆ ತಲವಾರ್ ಹೊಂದಿರಬೇಕು ಎಂಬ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ವಿರುದ್ಧ ಇಲ್ಲಿ ಸೋಮವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಮೋದ್ ಮುತಾಲಿಕ್ ಗೆ ಯಾರು ಹಿಂದೂ ಧರ್ಮದ ಪಾರುಪತ್ಯ ಕೊಟ್ಟಿಲ್ಲ. ಹಿಂದೂ ಧರ್ಮದ ಬಗ್ಗೆ ಪ್ರಮೋದ್ ಮುತಾಲಿಕ್ ಅಂಥವರಿಂದ ಉಪದೇಶ ಅವಶ್ಯಕತೆ ಇಲ್ಲ ಎಂದು ಅವರು ಹೇಳಿದರು.

Who gives leadership of Hindus to Muthalik?: Minister Rai

ಚಕ್ರವರ್ತಿ ಸೂಲಿಬೆಲೆ ಬಗ್ಗೆ ಹೀಯಾಳಿಸಿ ನಾನು ಮಾತನಾಡಿಲ್ಲ ಎಂದು ಸಮಜಾಯಿಷಿ ನೀಡಿದ ರೈ, ಹೀಯಾಳಿಸಿ ಮಾತನಾಡಿದ್ದರೆ ಸಾಕ್ಷ್ಯ ಕೊಡಿ. ಜನರು ಏನು ತಪ್ಪು ಮಾಡಿದರೂ ಅದಕ್ಕೆ ನಾನು ಜವಾಬ್ದಾರನಲ್ಲ. ಚಕ್ರವರ್ತಿ ಸೂಲಿಬೆಲೆ ಬಗೆಗಿನ ನನ್ನ ಹೇಳಿಕೆಗೆ ಪಶ್ಚಾತ್ತಾಪ ಇಲ್ಲ ಎಂದು ಸ್ಪಷ್ಟಪಡಿಸಿದರು.

ಬಿಜೆಪಿಯು ರಾಡಿಕಲ್ಸ್ ಗಳ ಕೂಟ. ಅದರಲ್ಲಿ ಯಾರೂ ಸಂಭಾವಿತರಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಧೈರ್ಯ ಕಳೆದುಕೊಂಡಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜನ ಬೆಂಬಲ ದೊರೆಯುತ್ತದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಕಂಗೆಟ್ಟಿದ್ದಾರೆ. ಜಿಲ್ಲೆಯಲ್ಲಿ ಆರೆಸ್ಸೆಸ್ ಹಾಗೂ ಎಸ್ ಡಿಪಿಐ ನಡುವೆ ಘರ್ಷಣೆ ನಡೆಯುತ್ತಿದೆ. ಈ ಪರಿಣಾಮ ಜಿಲ್ಲೆಯಲ್ಲಿ ದುಷ್ಕೃತ್ಯಗಳು ನಡೆಯುತ್ತಿವೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+