ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಕ್ಷಿಣ ಕನ್ನಡ ಕಾಂಗ್ರೆಸ್ ಟಿಕೆಟ್ ನಿರ್ಣಾಯಕ ಹಂತಕ್ಕೆ

|
Google Oneindia Kannada News

ಮಂಗಳೂರು, ಮಾರ್ಚ್ 22:ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ. ಹಾಲಿ ಸಂಸದ ನಳಿನ್ ಕುಮಾರ್‌ ಕಟೀಲ್ ಅವರನ್ನೇ 3 ನೇ ಬಾರಿಗೆ ಬಿಜೆಪಿ ಕಣಕ್ಕಿಳಿಸಿದೆ. ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಬಿರುಸಿನ ಪ್ರಚಾರ ಆರಂಭವಾಗಿದೆ.

ಆದರೆ ಕಾಂಗ್ರೆಸ್ ಈವರೆಗೂ ತನ್ನ ಅಭ್ಯರ್ಥಿಯನ್ನು ಘೋಷಿಸಿಲ್ಲ. ಚುನಾವಣಾ ರಣತಂತ್ರ ರೂಪಿಸಲು ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಯ ಘೋಷಣೆಗೆ ಕಾತರದಿಂದ ಕಾಯುತ್ತಿದೆ. ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ ಪಕ್ಷದ ಟಿಕೆಟ್ ಘೋಷಣೆ ನಿರ್ಣಾಯಕ ಹಂತಕ್ಕೆ ತಲುಪಿದೆ. ಕ್ಷೇತ್ರದ ಎಲ್ಲಾ ಟಿಕೆಟ್ ಆಕಾಂಕ್ಷಿಗಳು ದಿಲ್ಲಿಯಲ್ಲಿ ಮೊಕ್ಕಾಂ ಹುಡಿದ್ದಾರೆ.

ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ

ಟಿಕೆಟ್ ಆಕಾಂಕ್ಷಿಗಳಾದ ಮಾಜಿ ಸಚಿವರಾದ ಬಿ.ರಮಾನಾಥ ರೈ, ವಿನಯ ಕುಮಾರ್‌ ಸೊರಕೆ, ರಾಜ್ಯಸಭಾ ಸದಸ್ಯ ಬಿ.ಕೆ. ಹರಿಪ್ರಸಾದ್‌, ಎಸ್ ಸಿ ಡಿ ಸಿ ಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್‌.ರಾಜೇಂದ್ರ ಕುಮಾರ್‌, ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ, ಕಣಚೂರು ಮೋನು ದೆಹಲಿಯಲ್ಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಕೂಡ ದೆಹಲಿ ತಲುಪಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿ ಇಂದು ಸಂಜೆ ಮಹತ್ವದ ಸಭೆಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿ ಇಂದು ಸಂಜೆ ಮಹತ್ವದ ಸಭೆ

ರಾಜ್ಯದ ಕಾಂಗ್ರೆಸ್‌ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಅವರ ದಿಲ್ಲಿಯ ಮನೆಯಲ್ಲಿ ನಿನ್ನೆ ಸಂಜೆ ಮಹತ್ವದ ಸಭೆ ನಡೆದಿದೆ. ಮುಂದೆ ಓದಿ...

 ಸಭೆಯಲ್ಲಿ ಭಾಗವಹಿಸಿದ್ದ ಪ್ರಮುಖರು

ಸಭೆಯಲ್ಲಿ ಭಾಗವಹಿಸಿದ್ದ ಪ್ರಮುಖರು

ಅಂದಹಾಗೆ ಕೆ.ಸಿ.ವೇಣುಗೋಪಾಲ್‌ ಅವರ ದಿಲ್ಲಿಯ ಮನೆಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಎಐಸಿಸಿ ಹಾಗೂ ಕೆಪಿಸಿಸಿ ಪ್ರಮುಖ ನಾಯಕರು ಹಾಗೂ ಎಲ್ಲಾ ಆಕಾಂಕ್ಷಿಗಳು ಭಾಗವಹಿಸಿದ್ದರು ಎಂದು ಹೇಳಲಾಗಿದೆ.

 ಜೆಡಿಎಸ್ ಜೊತೆ ಮೈತ್ರಿ;ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗೆಲುವು ಸುಲಭವೇ? ಜೆಡಿಎಸ್ ಜೊತೆ ಮೈತ್ರಿ;ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗೆಲುವು ಸುಲಭವೇ?

 ಬಹಿರಂಗಪಡಿಸಲು ಮುಂದಾಗಿಲ್ಲ

ಬಹಿರಂಗಪಡಿಸಲು ಮುಂದಾಗಿಲ್ಲ

ವೇಣುಗೋಪಾಲ್‌ ಅವರ ನಿವಾಸದಲ್ಲಿ ನಡೆಯುವ ಸಭೆಯಲ್ಲೇ ಬಹುತೇಕ ಅಭ್ಯರ್ಥಿ ಆಯ್ಕೆ ಅಂತಿಮಗೊಂಡಿದ್ದು, ಘೋಷಣೆ ಮಾತ್ರ ಬಾಕಿ ಎಂದು ಹೇಳಲಾಗಿದೆ. ಆದರೆ ಅಭ್ಯರ್ಥಿಯ ಹೆಸರನ್ನು ಯಾರು ಈವರೆಗೆ ಬಹಿರಂಗಪಡಿಸಲು ಮುಂದಾಗಿಲ್ಲ.

 ರಫೇಲ್ ಹಗರಣದ ಮಾಹಿತಿ ಕೈಪಿಡಿ ಮನೆ ಮನೆಗೆ ತಲುಪಿಸಲು ಕಾಂಗ್ರೆಸ್ ತಯಾರಿ ರಫೇಲ್ ಹಗರಣದ ಮಾಹಿತಿ ಕೈಪಿಡಿ ಮನೆ ಮನೆಗೆ ತಲುಪಿಸಲು ಕಾಂಗ್ರೆಸ್ ತಯಾರಿ

 ಅಭ್ಯರ್ಥಿಗಳ ಪಟ್ಟಿ ಪ್ರಕಟ ಸಾಧ್ಯತೆ

ಅಭ್ಯರ್ಥಿಗಳ ಪಟ್ಟಿ ಪ್ರಕಟ ಸಾಧ್ಯತೆ

ಇಂದು ಇಡೀ ದಿನ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ, ಪಕ್ಷದ ನಾಯಕಿ ಸೋನಿಯಾ ಗಾಂಧಿ, ವಿವಿಧ ರಾಜ್ಯದ ಪ್ರಮುಖರ ಸಮ್ಮುಖದಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಆ ಬಳಿಕ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುವ ಸಾಧ್ಯತೆಗಳಿವೆ.

ಕರ್ನಾಟಕ ಲೋಕಸಭಾ ಕ್ಷೇತ್ರಗಳ 'ಎ ಟು ಜೆಡ್' ಮಾಹಿತಿ

 ಇವರಲ್ಲಿ ಯಾರಿಗೆ ಟಿಕೆಟ್ ?

ಇವರಲ್ಲಿ ಯಾರಿಗೆ ಟಿಕೆಟ್ ?

ಒಂದು ಮಾಹಿತಿಯ ಪ್ರಕಾರ ಮಾಜಿ ಸಚಿವ ರಮಾನಾಥ್ ರೈ ಅಥವಾ ಯುವ ಮುಖಂಡ ಮಿಥುನ್ ರೈ ಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

English summary
BJP announced Nalin Kumar Kateel as candidate for Dakshina Kannada Loksabha Constituency.But congress not yet announced its candidate.There is fierce competition for the congress candidate for the Dakshian Kannada constituency. All aspirants and district congress leaders are in Delhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X