• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಲ್ಲಡ್ಕ ಶಾಲೆಯಲ್ಲಿ ಬಿಸಿಯೂಟ, ಚರ್ಚೆಗೆ ಗ್ರಾಸವಾದ ಪ್ರಭಾಕರ ಭಟ್ ನಡೆ

|

ಮಂಗಳೂರು, ಜೂನ್ 1: ಕಲ್ಲಡ್ಕ ಶಾಲೆಯ ಬಿಸಿಯೂಟ ಪ್ರಕರಣ ಈಗ ಮತ್ತೇ ಸುದ್ದಿಯಲ್ಲಿದೆ. ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಮುಂದಾಳತ್ವದ ಎರಡು ಶಾಲೆಗಳ ಅನ್ನ ಕಸಿದ ವಿಚಾರ ಈ ಹಿಂದೆ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಆದರೆ, ಈಗ ಅದೇ ಶಾಲೆಗಳ ಆಡಳಿತ ಮಂಡಳಿ ಮಧ್ಯಾಹ್ನದ ಬಿಸಿಯೂಟ 'ಅಕ್ಷರ ದಾಸೋಹ' ನೀಡುವಂತೆ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

ಶ್ರೀ ಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಿಂದ ಬರುತ್ತಿದ್ದ ಹಣದ ರೂಪದ ಅನುದಾನಕ್ಕೆ ಈ ಹಿಂದಿನ ಸರಕಾರದಲ್ಲಿ ಸಚಿವರಾಗಿದ್ದ ಬಿ. ರಮಾನಾಥ ರೈ ತಡೆ ಒಡ್ಡಿದ್ದರು. ಬದಲಿಗೆ ಬಿಸಿಯೂಟ ನೀಡುವ ಪ್ರಸ್ತಾಪ ಇಟ್ಟಿದ್ದರು. ಆದರೆ, ಶಾಲೆಯ ಆಡಳಿತ ಮಂಡಳಿ ಬಿಸಿಯೂಟದ ಪ್ರಸ್ತಾಪ ತಿರಸ್ಕರಿಸಿ ಸಾವಿರಾರು ಶಾಲಾ ಮಕ್ಕಳು ರಸ್ತೆಗಿಳಿದು ಸಚಿವ ರಮಾನಾಥ ರೈ ವಿರುದ್ಧ ಭಾರೀ ಪ್ರತಿಭಟನೆ ನಡೆಸಿದ್ದರು.

'ಕಲ್ಲಡ್ಕ ಶಾಲೆಗೆ ಅನುದಾನ ನಿಲ್ಲಿಸಿದ್ದಕ್ಕೆ ಮೂಕಾಂಬಿಕೆ ಕೃಪೆಯಿದೆ'

ಇದಲ್ಲದೆ ಶಾಲೆಯ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಭಿಕ್ಷಾಂದೇಹಿ ಅಭಿಯಾನವನ್ನೂ ಆರಂಭಿಸಲಾಗಿತ್ತು. ಇದಕ್ಕೆ ಸಾವಿರಾರು ಜನರು ಸ್ಪಂದಿಸುವ ಮೂಲಕ ಲಕ್ಷಾಂತರ ರೂಪಾಯಿ ಸಂಗ್ರಹಿಸಲಾಗಿತ್ತು. ಸಂಸದೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಅಕ್ಕಿ ಭಿಕ್ಷೆಯ ಮೂಲಕವೂ ಭಾರೀ ಪ್ರಮಾಣದಲ್ಲಿ ಅಕ್ಕಿ ಸಂಗ್ರಹಗೊಂಡಿತ್ತು.

ಗಣಿಧಣಿ ಜನಾರ್ದನ ರೆಡ್ಡಿ 25 ಲಕ್ಷ ರೂಪಾಯಿ ದೇಣಿಗೆ ನೀಡಿ ಸುದ್ದಿಯಾಗಿದ್ದರು. ಚುನಾವಣೆ ಸಂದರ್ಭದಲ್ಲಿ ಮಕ್ಕಳ ಊಟ ಕಸಿದ ವಿಚಾರವನ್ನು ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಕಾಂಗ್ರೆಸ್ ವಿರುದ್ಧ ಪ್ರಮುಖ ಅಸ್ತ್ರವಾಗಿಸಿ ಬಳಸಿತ್ತು. ಚುನಾವಣೆಯಲ್ಲಿ ಸಚಿವ ರಮಾನಾಥ್ ರೈ ಸೋಲಿಗೆ ಇದೂ ಪ್ರಮುಖ ಕಾರಣ ಎಂದು ಹೇಳಲಾಗುತ್ತದೆ.

ಬಿಸಿ ಊಟ ನಿಲ್ಲಿಸಿ ಬಳಿಕ ನಡೆದ ಪ್ರತಿಭಟನೆ, ಆರೋಪ ಪ್ರತ್ಯಾರೋಪ , ವಾಗ್ದಾಳಿಗಳ ನಂತರ ಈಗ ರಾಜ್ಯ ಸರಕಾರ ಬದಲಾಗುತ್ತಿದ್ದಂತೆ ಅದೇ ಶಾಲಾಡಳಿತ ಮಂಡಳಿ ಬಿಸಿಯೂಟಕ್ಕಾಗಿ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಿದೆ. ಈ ಮನವಿಗೆ ರಾಜ್ಯ ಸರಕಾರ ಒಪ್ಪಿಗೆಯನ್ನೂ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಎರಡೂ ಶಾಲೆಗಳಿಗೆ ಬಿಸಿಯೂಟದ ಅಕ್ಕಿಯೂ ಪೂರೈಕೆಯಾಗಿದೆ.

ಬಿಸಿಯೂಟದ ಅನುದಾನ ನಿಲ್ಲಿಸಿದ್ದ ಅಂದಿನ ರಾಜ್ಯ ಸರಕಾರದ ವಿರುದ್ಧ ತೊಡೆ ತಟ್ಟಿದ್ದ ಶಾಲೆಯ ಆಡಳಿತ ಮಂಡಳಿ ಹಾಗೂ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಈಗ ಬಿಸಿಯೂಟಕ್ಕಾಗಿ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

ಬಿಸಿಯೂಟಕ್ಕಾಗಿ ಸಂಗ್ರಹಿಸಲಾಗಿದ್ದ ಲಕ್ಷಾಂತರ ರೂಪಾಯಿ ಏನಾಯಿತು? ಸಂಗ್ರಹಿಸಲಾದ ಅಕ್ಕಿ ಏನಾಯಿತು? ಎಂಬ ಪ್ರಶ್ನೆ ಮೂಡಲಾರಂಭಿಸಿದೆ.

ಈ ನಡುವೆ ಅಂದಿನ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಬಿ. ರಮಾನಾಥ್ ರೈ, ಬಿಸಿಯೂಟದ ಅನುದಾನದ ಹಣದ ಬದಲಿಗೆ ಸರಕಾರದಿಂದಲೇ ಬಿಸಿಯೂಟ ನೀಡುವ ಪ್ರಸ್ತಾಪ ಇಟ್ಟಿದ್ದರು. ಆದರೆ ಈ ಪ್ರಸ್ಥಾಪವನ್ನು ಶಾಲಾ ಆಡಳಿತ ಮಂಡಳಿ ಹಾಗು ಡಾ.ಕಲ್ಲಡ್ಕ ಪ್ರಭಾಕರ ಭಟ್ ತಿರಸ್ಕರಿಸಿದ್ದೇಕೆ? ಆದರೆ ಈಗ ಏಕಾಏಕಿ ಸರಕಾರದ ಬಿಸಿಯೂಟದ ಬಗ್ಗೆ ಒಲವು ಮೂಡಿದ್ದಾದರೂ ಏಕೆ? ಎಂಬ ಪ್ರಶ್ನೆ ಜನರನ್ನು ಕಾಡುತ್ತಿದೆ.

English summary
Kalladka school is now again in news. A year back when state government ordered to stop grant for hot meals in Kalladaka school, there is huge protest staged against state government and minister Ramanath Rai. But now school management requested government to cover schools under ‘Akshara Dasoha’ scheme
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more