2 ತಿಂಗಳು ಚಾರ್ಮಾಡಿ ಘಾಟ್ ಸಂಪರ್ಕ ಕಡಿತ?

ಮಂಗಳೂರು, ಆಗಸ್ಟ್ 12: ಕರಾವಳಿಯಲ್ಲಿ ಕಳೆದ ಒಂದು ವಾರದಿಂದ ಸುರಿದ ಭಾರೀ ಮಳೆಗೆ ದಕ್ಷಿಣ ಕನ್ನಡ ಹಾಗು ಪಶ್ಚಿಮ ಘಟ್ಟದ ತಪ್ಪಲು ಪ್ರದೇಶ ತತ್ತರಿಸಿದೆ. ಭಾರಿ ಮಳೆ ಹಾಗೂ ಪ್ರವಾಹದಿಂದಾಗಿ ಮಂಗಳೂರು- ಬೆಂಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಹಲವು ಕಡೆ ಭೂಕುಸಿತವಾಗಿದ್ದು, ರಸ್ತೆ ಸಂಪರ್ಕ ಕಡಿತವಾಗಿದೆ.

ಘಾಟ್ ನ ರಸ್ತೆಯ ಹಲವು ತಿರುವುಗಳಲ್ಲಿ ಭೂ ಕುಸಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸಂಪೂರ್ಣ ರಸ್ತೆಯೇ ನಾಶವಾಗುವ ಹಂತದಲ್ಲಿದೆ. ಇದರಿಂದಾಗಿ ಬೆಳ್ತಂಗಡಿ ಚಿಕ್ಕಮಗಳೂರು ಸಂಪರ್ಕ ಕಡಿತವಾಗಿದ್ದು, ಮುಂದಿನ 2 ತಿಂಗಳು ಚಾರ್ಮಾಡಿ ಘಾಟಿ ಸಂಪರ್ಕ ಕಡಿತಗೊಳ್ಳುವ ಭೀತಿ ಎದುರಾಗಿದೆ.

ತಿರುವುಗಳಲ್ಲಿ ಭೂಭಾಗ ಬಾಯ್ತೆರೆದಿದ್ದು, ಅಪಾಯಕಾರಿಯಾಗಿ ಪರಿಣಮಿಸಿದೆ. ಬನ್ಕಲ್ ವ್ಯಾಪ್ತಿಯಲ್ಲಿ ಹಲವಾರು ಕಡೆ ರಸ್ತೆ ಅಂಚು ಕುಸಿತಗೊಂಡಿರುವ ಕಾರಣ ತೆರವು ಕಾರ್ಯಾಚರಣೆಗೂ ಅಡ್ಡಿಯಾಗುತ್ತಿದೆ.

Will Charmadi Ghat Close For 2 Months

ಶಿರಾಡಿ ಘಾಟಿ ರಸ್ತೆಯಲ್ಲಿಯೂ ಭೂ ಕುಸಿತದ ಆತಂಕದ ನಡುವೆ ವಾಹನ ಸಂಚಾರ ಪ್ರಾರಂಭವಾಗಿದೆ. ಮಳೆ ಆರ್ಭಟ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಹಗಲು ಹೊತ್ತಿನಲ್ಲಿ ಘನ ವಾಹನಗಳ ಸಂಚಾರಕ್ಕೂ ಅನುಮತಿ ನೀಡಲಾಗಿದೆ. ರಾತ್ರಿ ಗುಡ್ಡ ಕುಸಿತದ ಭೀತಿಯ ಕಾರಣ ನಿನ್ನೆ ರಾತ್ರಿ ನಿರ್ಬಂಧ ಹೇರಲಾಗಿತ್ತು.

ಇದೇ ವೇಳೆ ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿಯಿಂದ ಗುಂಡ್ಯದವರೆಗಿನ ರಸ್ತೆಯಲ್ಲಿ ಅಪಾಯಕಾರಿ ಹೊಂಡಗಳು ಉಂಟಾಗಿದ್ದು ಗುಂಡಿಮುಚ್ಚುವ ಕಾರ್ಯ ಪ್ರಾರಂಭವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+