ಮಂಗಳೂರಿನಲ್ಲಿ ಒಂಟಿ ಮಹಿಳೆಯ ಮೇಲೆ ದಾಳಿ ನಡೆಸಿದ ದುಷ್ಕರ್ಮಿ
ಮಂಗಳೂರು, ಜುಲೈ 23: ಮನೆಯಲ್ಲಿದ್ದ ಒಂಟಿ ಮಹಿಳೆಗೆ ಚೂರಿ ಇರಿದು ಗಾಯಗೊಳಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಗೋರಿಗುಡ್ಡ ನೆಹರು ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಸಿಲ್ವೀಯಾ ಸಲ್ಡಾನ (49) ಎಂಬವರು ಗಾಯಗೊಂಡಿದ್ದಾರೆ.
ನಿನ್ನೆ ತಡ ರಾತ್ರಿ ಏಕಾಏಕಿ ಮನೆಗೆ ನುಗ್ಗಿದ ವ್ಯಕ್ತಿ ಸಿಲ್ವೀಯಾ ಸಲ್ಡಾನ ಅವರ ಮೇಲೆ ಚೂರಿ ಯಿಂದ ಹಲ್ಲೆ ನಡೆಸಿದ್ದಾನೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಸಿಲ್ವೀಯಾ ಸಲ್ಡಾನ ಚೂರಿ ಇರಿತದಿಂದ ಗಾಯಗೊಂಡಿದ್ದಾರೆ. ಸಿಲ್ವೀಯಾ ಸಹಾಯಕ್ಕಾಗಿ ಕಿರುಚಿಕೊಂಡಾಗ ಅಪರಿಚಿತ ವ್ಯಕ್ತಿ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.
ಇರಿತದಿಂದ ಗಾಯಗೊಂಡ ಸಿಲ್ವೀಯಾ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳೀಯ ಜಾಗದ ತಕರಾರು ಈ ದಾಳಿಗೆ ಕಾರಣವೆಂದು ಹೆಳಲಾಗಿದ್ದು, ಪಾಂಡೇಶ್ವ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ.

ಇತ್ತೀಚೆಗೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಒಂಟಿ ಮಹಿಳೆ ಕೊಲೆಯಾಗಿತ್ತು. ತಕ್ಷಣವೇ ಕೊಲೆ ಮಾಡಿದ ಆರೋಪಿಯನ್ನು ಕಾರ್ಕಳ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರು. ಮೊಹಮ್ಮದ್ ರಿಯಾಜ್ (35) ಬಂಧಿತ ಆರೋಪಿ.
ಕಾರ್ಕಳ ತಾಲೂಕಿನ ಕುಕ್ಕುಂದೂರಿನ ಅಯ್ಯಪ್ಪ ನಗರದಲ್ಲಿ ಫ್ಲೋರಿನ್ ಡಿಸೋಜ(54) ಎಂಬ ಮಹಿಳೆಯನ್ನು ಜುಲೈ 7ರ ರಾತ್ರಿ ಕತ್ತಿಯಿಂದ ಕುತ್ತಿಗೆಗೆ ತಿವಿದು ಕೊಲೆ ಮಾಡಲಾಗಿತ್ತು. ಮರುದಿನ ಬೆಳಗ್ಗೆ ಮನೆಗೆ ಬಂದ ಮಕ್ಕಳು ಎಷ್ಟೇ ಬಾಗಿಲು ಬಡಿದರೂ ತಾಯಿ ಬಾಗಿಲು ತೆರೆಯದ್ದರಿಂದ ಈ ಕೊಲೆ ಬೆಳಕಿಗೆ ಬಂದಿತ್ತು.
ಬಡ್ಡಿ ವ್ಯವಹಾರ ಹಾಗೂ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಮಹಿಳೆ ಬಡ್ಡಿ ವ್ಯವಹಾರಕ್ಕೆಂದು ಆರೋಪಿಯಿಂದ 13ಲಕ್ಷ ಪಡೆದಿದ್ದಳೆನ್ನಲಾಗಿದ್ದು ಅದನ್ನು ಆಕೆ ಬಡ್ಡಿಗಾಗಿ ವಿನಿಯೋಗಿಸಿದ್ದಳು ಎನ್ನಲಾಗಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications