ಮಂಗಳೂರು; ಗ್ರಾಮ ಪಂಚಾಯಿತಿ ಅಧ್ಯಕ್ಷೆಗೆ ಡಬಲ್ ಸಂಭ್ರಮ

ಮಂಗಳೂರು, ಫೆಬ್ರವರಿ 14; ಗರ್ಭಿಣಿ ಮಹಿಳೆಯೊಬ್ಬರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾದರು. ಅಧ್ಯಕ್ಷೆಯಾದ ಕೆಲವೇ ಗಂಟೆಗಳಲ್ಲಿ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಡಬಲ್ ಸಂಭ್ರಮದಲ್ಲಿದ್ದಾರೆ.

ಮಂಗಳೂರು ತಾಲೂಕಿನ ಅಂಬ್ಲಮೊಗರು ಗ್ರಾಮ ಪಂಚಾಯಿತಿ ಸದಸ್ಯರಾದ ಲತಾ ಪರಮೇಶ್ವರ್ ಶುಕ್ರವಾರ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಆಯ್ಕೆಯಾದರು. ಅಧ್ಯಕ್ಷೆಯಾದ ಕೆಲವೇ ಗಂಟೆಗಳಲ್ಲಿ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ.

ಅವರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಗಂಡು ಮಗುವಿಗೆ ಅವರು ಜನ್ಮ ನೀಡಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ. ಅತ್ತ ಅಧ್ಯಕ್ಷ ಪಟ್ಟ ಇತ್ತ ಮಗ ಹುಟ್ಟಿದ ಸಂತಸದಲ್ಲಿ ಅವರಿದ್ದಾರೆ.

Gram Panchayat news

ಲತಾ ಅವರನ್ನು ತಪಾಸಣೆ ಮಾಡಿದ್ದ ವೈದ್ಯರು ಫೆ. 20ಕ್ಕೆ ಹೆರಿಗೆ ದಿನಾಂಕ ನಿಗದಿ ಮಾಡಿದ್ದರು. ಆದ್ದರಿಂದ, ಲತಾ ಅವರು ನಿರಾತಂಕವಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷೀಯ ಚುನಾವಣೆಯಲ್ಲಿ ಪಾಲ್ಗೊಂಡಿದ್ದರು. ಆದರೆ, ಆಗಲೇ ಹೆರಿಗೆ ನೋವು ಕಾಣಿಸಿಕೊಂಡಿತ್ತು.

ಲತಾ ಪರಮೇಶ್ವರ್ ಅವರ ಕುಟುಂಬದಲ್ಲಿ ಡಬಲ್ ಸಂತಸ ಮನೆ ಮಾಡಿದೆ. ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ಶುಕ್ರವಾರ ನಡೆದ ಚುನಾವಣೆಯಲ್ಲಿ ಅಂಬ್ಲಮೊಗರು ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಲತಾ ಪರಮೇಶ್ವರ್ ಹಾಗೂ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಮಹಮ್ಮದ್ ಇಕ್ಬಾಲ್ ಆಯ್ಕೆಯಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+