ಮಂಗಳೂರು ಅಪಘಾತ: ದುರಂತದಲ್ಲೂ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಮೃತ ಮಹಿಳೆ
ಮಂಗಳೂರು, ಏಪ್ರಿಲ್ 23: ಮಂಗಳೂರು ನಗರವನ್ನು ಬೆಚ್ಚಿ ಬೀಳಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಮಾಯಕ ಮಹಿಳೆ ಹದಿಮೂರು ದಿನಗಳ ಜೀವನ್ಮರಣ ಹೋರಾಟದಲ್ಲಿ ದುರಂತ ಅಂತ್ಯ ಕಂಡಿದ್ದಾರೆ.
ಏಪ್ರಿಲ್ 19ರಂದು ಮಂಗಳೂರಿನ ಬಳ್ಳಾಲ್ ಭಾಗ್‌ನಲ್ಲಿ ಮದ್ಯದ ಅಮಲಿನಲ್ಲಿ ವೇಗವಾಗಿ ಬಿಎಂಡಬ್ಲೂ ಕಾರು ಚಲಾಯಿಸಿಕೊಂಡು ಬಂದು ಡಿವೈಡರ್ ಮೇಲೆ ಕಾರು ಹಾರಿಸಿ, ಇನ್ನೊಂದು ರಸ್ತೆಯಲ್ಲಿ ದ್ವಿಚಕ್ರ ವಾಹನ ಚಲಾಯಿಸಿಕೊಂಡು ಬರುತ್ತಿದ್ದ ಮಹಿಳೆಯ ಮೇಲೆ ಹಾಯಿಸಿದ್ದ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಪ್ರೀತಿ ಮನೋಜ್ ಹದಿಮೂರು ದಿನಗಳ ಕಾಲ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿ ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಜೀವನ್ಮರಣ ಸ್ಥಿತಿಯಲ್ಲಿ ಹೋರಾಡುತ್ತಿದ್ದ ಮಹಿಳೆ ಪ್ರೀತಿ ಮನೋಜ್ ಮಿದುಳು ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ಆಕೆಯ ಕುಟುಂಬಸ್ಥರು ಅಂಗಾಂಗಗಳನ್ನು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಲಿವರ್ ಅನ್ನು ಬೆಂಗಳೂರಿನ ಆ್ಯಸ್ಟರ್ ಸಿಎಂಐ ಆಸ್ಪತ್ರೆಗೆ ಹಾಗೂ ಕಿಡ್ನಿಯನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ರವಾನಿಸಲಾಗುವ ಬಗ್ಗೆ ಮಾತುಕತೆ ನಡೆಸಲಾಗುತ್ತಿದೆ. ಆಸ್ಪತ್ರೆಯ ಜೀವ ಸಾರ್ಥಕತೆಯ ವಿಭಾಗವು ಅಂಗಾಂಗಗಳನ್ನು ರವಾನಿಸುವ ವ್ಯವಸ್ಥೆ ಮಾಡಿದೆ. ಅಂಗಾಂಗಳು ಝೀರೋ ಟ್ರಾಫಿಕ್ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿ ಅಲ್ಲಿಂದ ವಿಮಾನದ ಮೂಲಕ ಬೆಂಗಳೂರಿನ ಆಸ್ಪತ್ರೆಗೆ ರವಾನೆಯಾಯಿತು.
ಏ.9ರಂದು ಶ್ರವಣ್ ಕುಮಾರ್ ಎಂಬಾತ ಬಳ್ಳಾಲ್ ಭಾಗ್‌ನಲ್ಲಿ ಅಜಾಗರೂಕತೆಯಿಂದ ಕಾರು ಚಲಾಯಿಸಿಕೊಂಡು ಬಂದು ಡಿವೈಡರ್ ದಾಟಿ ಪ್ರೀತಿ ಮನೋಜ್ ಸಂಚರಿಸುತ್ತಿದ್ದ ದ್ವಿಚಕ್ರ ವಾಹನ ಸಹಿತ ನಾಲ್ಕು ವಾಹನಗಳಿಗೆ ಡಿಕ್ಕಿ ಹೊಡೆದಿದ್ದ. ಪರಿಣಾಮ ಪ್ರೀತಿ ಮನೋಜ್ ಹಾಗೂ ಮತ್ತೋರ್ವ ಬಾಲಕ ಗಾಯಗೊಂಡಿದ್ದರು.

ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪ್ರೀತಿ ಮನೋಜ್ ಜೀವನ್ಮರಣ ಸ್ಥಿತಿಯಲ್ಲಿ 13 ದಿನಗಳ ಹೋರಾಟ ನಡೆಸುತ್ತಿದ್ದರು. ಶುಕ್ರವಾರ ಅವರ ಮಿದುಳು ನಿಷ್ಕ್ರಿಯಗೊಂಡಿರುವ ಬಗ್ಗೆ ವೈದ್ಯರು ಘೋಷಣೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅವರ ಅಂಗಾಂಗ ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಈ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ಪ್ರೀತಿ ಮನೋಜ್ ಮೂವರು ವ್ಯಕ್ತಿಗಳಿಗೆ ಮರು ಜೀವನ ನೀಡಿದ್ದಾರೆ. ಬೆಂಗಳೂರು, ಮಂಗಳೂರಿನ ಮೂರು ಆಸ್ಪತ್ರೆಗೆ ಅಂಗಾಗ ರವಾನೆ ಮಾಡಲಾಗಿದ್ದು, ಸಾವಿನಲ್ಲೂ ಪ್ರೀತಿ ಸಾರ್ಥಕತೆ ಮೆರೆದಿದ್ದಾರೆ.












Click it and Unblock the Notifications