• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Sundar Rao Death : ಖ್ಯಾತ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ್ ರಾವ್ ನಿಧನ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ನವೆಂಬರ್‌ 30: ಖ್ಯಾತ ಯಕ್ಷಗಾನ ಹಾಗೂ ತಾಳ ಮದ್ದಲೆ ಕಲಾವಿದ ಕುಂಬ್ಳೆ ಸುಂದರ್ ರಾವ್ (88) ಬುಧವಾರ ಮುಂಜಾನೆ ವಿಧಿವಶರಾಗಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕುಂಬ್ಳೆ ಸುಂದರ್ ರಾವ್ ಅವರು, ಮಂಗಳೂರಿನ ಪಂಪ್‌ವೆಲ್‌ನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಸುಂದರ್ ರಾವ್ ಅವರು ಇಬ್ಬರು ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ಅದ್ಭುತ ವಾಕ್ ಚಾತುರ್ಯದಿಂದ ಪ್ರಸಿದ್ಧವಾಗಿದ್ದ ಕುಂಬ್ಳೆ ಸುಂದರ್ ರಾವ್ ಅವರು, ಪ್ರಾಸಬದ್ಧ ಸಂಭಾಷಣೆಯಿಂದಲೆ ಹೆಸರುವಾಸಿಯಾಗಿದ್ದರು. ಯಕ್ಷಗಾನದ ತೆಂಕುತಿಟ್ಟು ಕಲಾವಿದರಾಗಿದ್ದ ಅವರು, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳದಲ್ಲಿ ಕಲಾವಿದರಾಗಿ ಸೇವೆ ಮಾಡಿದ್ದರು.

ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಕುಂಬ್ಳೆ ಸುಂದರ್ ರಾವ್ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಪಿ.ದಯಾನಂದ ಪೈ, ಪಿ. ಸತೀಶ್‌ ಪೈ ಯಕ್ಷಗಾನ ಅಧ್ಯಯನ ಕೇಂದ್ರದಿಂದ 2018-19ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಸುಮಾರು ಐವತ್ತಕ್ಕೂ ಅಧಿಕ ವರ್ಷಗಳ ಕಾಲ ಯಕ್ಷಗಾನದಲ್ಲಿ ಸೇವೆ ಸಲ್ಲಿಸಿದ ಕುಂಬ್ಳೆ ಸುಂದರ್ ರಾವ್ ಅವರ ನಿಧನಕ್ಕೆ ಮಂಗಳೂರಿನ ಯಕ್ಷ ಕಲಾರಂಗದವರು ಸಂತಾಪ ಸೂಚಿಸಿದ್ದಾರೆ.

ಇನ್ನು ಕುಂಬ್ಳೆ ಸುಂದರ್ ರಾವ್ ಅವರು, 1994ರಿಂದ 1999ರವರೆಗೆ ಸುರತ್ಕಲ್‌ ಕ್ಷೇತ್ರದಿಂದ ಹತ್ತನೇ ಕರ್ನಾಟಕ ವಿಧಾನ ಸಭೆಯ ಸದಸ್ಯರಾಗಿದ್ದರು. ಶಾಸಕರಾಗಿಯೂ ತಮ್ಮ ಕ್ಷೇತ್ರದಲ್ಲಿ ಉತ್ತಮ ಕೆಲಸಗಳನ್ನು ಮಾಡಿದ್ದ ಅವರು ಕೆಲ ಸಮಯದಿಂದ ರಾಜಕೀಯದಿಂದ ಅಂತರ ಕಾಯ್ದುಕೊಂಡಿದ್ದರು.

ಇನ್ನು ಮೃತರ ಅಂತ್ಯಸಂಸ್ಕಾರ ಗುರುವಾರ ನಡೆಯಲಿದೆ ಎಂದು ಕುಂಬ್ಳೆ ಸುಂದರ್ ರಾವ್ ಅವರ ಪುತ್ರ ತಿಳಿಸಿದ್ದು, ಮಂಗಳೂರಿನ ಪಂಪ್‌ವೆಲ್‌ನಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ.

English summary
Yakshagana artist and former MLA Kumble Sundar Rao passed away in Mangaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X