ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಂಚಿನ ಕಂಠದ ಭಾಗವತ ಪ್ರಸಾದ್ ಬಲಪ ನಿಧನ; ನುಡಿನಮನ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಏಪ್ರಿಲ್ 11; ಯಕ್ಷಗಾನದ ಖ್ಯಾತ ಭಾಗವತ‌ ಬಲಿಪ ಪ್ರಸಾದ್ ವಿಧಿವಶರಾದರು. ಯಕ್ಷಗಾನದ ಏರು ಪದ್ಯದಲ್ಲಿ ಯಶಸ್ಸಿನ ಉತ್ತುಂಗಕ್ಕೇರಿದ್ದ ಬಲಿಪ ಪ್ರಸಾದ್ ಭಾಗವತರು ಕಳೆದ ಒಂದು ವರ್ಷಗಳಿಂದ ಗಂಟಲಿನ ಕ್ಯಾನ್ಸರ್‌ಗೆ ಒಳಗಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಕೊನೆಯುಸಿರೆಳೆದರು.

ಮೂಡಬಿದಿರೆ ತಾಲೂಕಿನ ಮಾರೂರು ನಿವಾಸಿಯಾಗಿರುವ ಬಲಿಪ ಪ್ರಸಾದ್ (46) ಕಟೀಲು ಮೇಳದ ಹಿರಿಯ ಭಾಗವತರಾಗಿದ್ದರು. ಯಕ್ಷಗಾನ ಭಾಗವತ ಪರಂಪರೆಯ ಮೇರು ಶಿಖರವಾಗಬೇಕಿದ್ದ ಪ್ರಸಾದ್ ಬಲಿಪರ ಅಗಲಿಕೆ ಇಡೀ ಯಕ್ಷ ಪ್ರೇಮಿಗಳಲ್ಲಿ ದಿಗ್ಭ್ರಮೆ ಮೂಡಿಸಿದ್ದು, ಯಕ್ಷಗಾನ ಸಂಘಟಕ ಶಾಂತರಾಮ ಕುಡ್ವ ನುಡಿ ನಮನ ಬರೆದಿದ್ದಾರೆ.

ಯಕ್ಷಗಾನ ಕಲಾವಿದ ವಾಮನ ಕುಮಾರ್ ಪರಿಚಯ ಯಕ್ಷಗಾನ ಕಲಾವಿದ ವಾಮನ ಕುಮಾರ್ ಪರಿಚಯ

ನುಡಿ ನಮನ; ಸುಪ್ರಸಿದ್ಧ ಭಾಗವತರಾದ ಬಲಿಪ ಪ್ರಸಾದ್ ಭಟ್ ನಿಧನರಾದ ಆಘಾತಕಾರಿ ವರದಿ ಅವರ ಹಾಗೂ ಯಕ್ಷಗಾನದ ಅಭಿಮಾನಿಗಳಲ್ಲಿ ಶೋಕ ತಂದಿದೆ . ಅಲ್ಪ ಕಾಲದ ಅಸೌಖ್ಯದಿಂದಾಗಿ , ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದಾಗ, ಇಂದು ಸಂಜೆ ನಿಧನರಾದ ವರದಿ, ಅವರ ಕುಟುಂಬಸ್ಥರಿಗೆ ಹಾಗೂ ಅಭಿಮಾನಿಗಳಿಗೆ ತೀವ್ರ ಶೋಕವನ್ನು ತಂದಿದೆ

Yakshagana Bhagavatha Prasad Bhat Balipa No More

1976ರಲ್ಲಿ ತೆಂಕುತಿಟ್ಟಿನ ಸುಪ್ರಸಿದ್ಧ ಭಾಗವತರಾದ ಬಲಿಪ ನಾರಾಯಣ ಭಾಗವತರು ಹಾಗೂ ಜಯಲಕ್ಷ್ಮಿ ದಂಪತಿಗಳ ನಾಲ್ಕನೇ ಸುಪುತ್ರರಾಗಿ ಜನಿಸಿದ ಪ್ರಸಾದರು, ತಮ್ಮ ತಂದೆಯವರಿಂದಲೇ ಭಾಗವತಿಕೆ ಕಲಿತರು . ತಮ್ಮ ತಂದೆಯ "ಬಲಿಪ ಶೈಲಿ" ಯನ್ನು ಕರಗತ ಮಾಡಿ, ರಾಗ, ತಾಳ ಹಾಗೂ ಲಯದ ಸೂಕ್ಷ್ಮತೆಯನ್ನು ಕರಗತ ಮಾಡಿಕೊಂಡರು.

ಯಕ್ಷಗಾನ ಕಲಿಯಲು ಉಡುಪಿಗೆ ಬಂದ ಉತ್ತರ ಭಾರತದ ವಿದ್ಯಾರ್ಥಿಗಳುಯಕ್ಷಗಾನ ಕಲಿಯಲು ಉಡುಪಿಗೆ ಬಂದ ಉತ್ತರ ಭಾರತದ ವಿದ್ಯಾರ್ಥಿಗಳು

1996 ರಲ್ಲಿ ತಮ್ಮ 20ನೇ ವಯಸ್ಸಿನಲ್ಲೇ ಕಟೀಲು ಮೇಳ ಸೇರಿ, ಮುಂದೆ ಕಟೀಲು ಎರಡನೇ ಮೇಳದ ಪ್ರಧಾನ ಭಾಗವತರಾದರು.‌ ಶ್ರೀದೇವಿ ಮಹಾತ್ಮೆ, ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ, ಲಲಿತೋಪಖ್ಯಾನ ಸಹಿತ ಹೆಚ್ಚಿನ ಎಲ್ಲಾ ಪೌರಾಣಿಕ ಪ್ರಸಂಗಗಳಲ್ಲಿ, ತಮ್ಮ ತಂದೆಯವರಂತೆಯೇ ಹಿಡಿತ ಸಾಧಿಸಿ ಕಂಠಪಾಟದಿಂದಲೇ ಭಾಗವತಿಕೆ ಮಾಡುವ ಕೌಶಲ್ಯ ಸಾಧಿಸಿದ್ದರು. ಶೃಂಗಾರ, ಕರುಣ, ವೀರ, ಶಾಂತ ರಸಗಳ ಬಳಕೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿ ಪ್ರಸಂಗಗಳ ಯಶಸ್ಸಿಗೆ ಕಾರಣರಾಗಿದ್ದರು.

Yakshagana Bhagavatha Prasad Bhat Balipa No More

ಕಂಚಿನ ಕಂಠ ಎಂದೇ ಹೇಳಬಹುದಾದ ಪ್ರಸಾದ್ ಬಲಿಪರು ಹಾಡುವ ಏರು ಸ್ವರದ ಪದ್ಯಗಳು ಶ್ರೋತೃಗಳ ಕಿವಿಗಳಲ್ಲಿ ಇನ್ನೂ ಅನುರುಣಿಸುತ್ತಿದೆ ಎಂದರೆ ಅದು ಉತ್ಪ್ರೇಕ್ಷೆಯ ಮಾತಾಗಲಾರದು. ಕಪ್ಪು ಮೂರು ಅಥವಾ ಬಿಳಿ ನಾಲ್ಕರ ಶ್ರುತಿಯಲ್ಲಿ ಹಾಡುವ ಪ್ರಸಾದರ ಭಾಗವತಿಕೆ ಆಸ್ವಾದಿಸುವುದೆಂದರೆ ಅದೊಂದು ಕರ್ಣಾನಂದಕರ.

ಪೌರಾಣಿಕ ಕಥೆ, ಪ್ರಸಂಗದ ನಡೆ, ರಂಗ ಪ್ರಯೋಗಗಳ ಬಗ್ಗೆ ಅಪಾರ ಜ್ಞಾನ ಹೊಂದಿ, ಸಹ ಕಲಾವಿದರ ಮೆಚ್ಚುಗೆಗೆ ಪಾತ್ರರಾಗಿದ್ದರು. ಸರಳ, ಸಜ್ಜನಿಕೆಯ ವ್ಯಕ್ತಿತ್ವದ ಪ್ರಸಾದರು ಅಜಾತ ಶತ್ರು ಎಂದೇ ಗುರುತಿಸಿಕೊಂಡಿದ್ದರು.

 ಕಟೀಲು ಯಕ್ಷಗಾನ ಮೇಳ ತಿರುಗಾಟ ಆರಂಭ; ಮುಂದಿನ 20 ವರ್ಷಕ್ಕೆ ಈಗಲೇ ಬುಕ್ಕಿಂಗ್ ಕಟೀಲು ಯಕ್ಷಗಾನ ಮೇಳ ತಿರುಗಾಟ ಆರಂಭ; ಮುಂದಿನ 20 ವರ್ಷಕ್ಕೆ ಈಗಲೇ ಬುಕ್ಕಿಂಗ್

ಮಳೆಗಾಲದ ಯಕ್ಷಗಾನ ಪ್ರದರ್ಶನ, ನಾಟ್ಯ ವೈಭವಗಳ ಪ್ರದರ್ಶನಗಳಿಗೆ ಅತೀ ಬೇಡಿಕೆಯ ಭಾಗವತರಾಗಿದ್ದರು. ಯಕ್ಷಗಾನದ ಹಾಡುಗಳಿಗೆ ಛಂದಸ್ಸೇ ಪ್ರಧಾನ ಎಂಬ ಮನೋಭಾವದ ಪ್ರಸಾದರು ತಮ್ಮ ತಂದೆಯಂತೆಯೇ ಪ್ರಸಂಗದ ಹಾಡುಗಳ ಪದ ಛೇದ ಮಾಡದೇ, ಛಂದೋಬದ್ಧವಾಗಿಯೇ ಹಾಡಬೇಕು ಎಂದು ಸಾಧಿಸಿ ತೋರಿಸಿದ ಅಪ್ರತಿಮ ಭಾಗವತೋತ್ತಮರು‌. ಪರಂಪರೆಯ ಭಾಗವತಿಕೆ ಎಂದರೆ ಅದೊಂದು ತಪಸ್ಸು, ಸಾಧನೆ ಎಂದು ನಿಷ್ಠವಾಗಿ ಅಳವಡಿಸಿದ ಸಾಧಕರು‌. ಯಕ್ಷಗಾನದ ಹೆಸರಿನಲ್ಲಿ ಆಧುನಿಕ ಎಂದು ಹೆಸರಿಸಬಹುದಾದ ಪ್ರಕ್ರಿಯೆಗಳಿಗೆ ಶ್ರೇಷ್ಠ ಭಾಗವತರು.

ಸುಮಾರು ಇಪ್ಪತ್ತು ವರ್ಷಗಳ ಹಿಂದೆ ಮಂಗಳೂರಿನ ಪುರಭವನದಲ್ಲಿ ಮುಂಜಾವದ ಕಾಲದಲ್ಲಿ 'ಕರ್ಣಾರ್ಜುನ ಕಾಳಗ' ಪ್ರಸಂಗದ ಪ್ರದರ್ಶನ ಇತ್ತು. ಪ್ರಸಾದ್ ಬಲಿಪರು ಭಾಗವತಿಕೆಗೆ ಕುಳಿತು
'ಇತ್ತಲಾ ಕರ್ಣಾರ್ಜುನರಿಗೆ ಹತ್ತಿತು ಕಾಳಗ'ಎಂಬ ಪದ್ಯ ಹಾಡಿದಾಗ ನನಗೆ ಪುರಭವನವೇ ಬಿರಿಯಿತೋ ಎಂಬ ಭಾಸವಾಗಿತ್ತು. ಅಂತಹ ಏರುಕಂಠ ಪ್ರಸಾದ್ ಬಲಿಪರದ್ದಾಗಿತ್ತು.

25 ವರ್ಷಗಳ ಕಾಲ ಕಟೀಲು ಮೇಳದಲ್ಲಿ ಪ್ರಧಾನ ಭಾಗವತರಾಗಿದ್ದ ಪ್ರಸಾದ್ ಬಲಿಪರು ಕಳೆದ ವರ್ಷದ ತಿರುಗಾಟದ ನಂತರ ವಿಧಿಯ ಕ್ರೂರ ದೃಷ್ಟಿಯಿಂದಾಗಿ ಅಸೌಖ್ಯಕ್ಕೆ ಒಳಗಾಗಿ, ಈ ವರ್ಷದ ತಿರುಗಾಟ ಮಾಡಿರಲಿಲ್ಲ. ಆದರೂ ಕಟೀಲಿನಲ್ಲಿ ಕಳೆದ ಅಷ್ಟಮಿಯ ಯಕ್ಷಗಾನದ ಪ್ರದರ್ಶನಕ್ಕೆ ಸ್ವಲ್ಪ ಭಾಗವತಿಕೆ ಹಾಗೂ ಮೊನ್ನೆಯ ದಸರಾ ಸಂದರ್ಭದಲ್ಲಿ ಮೂಡಬಿದಿರೆಯ ಶ್ರೀ ಮಹಾಮ್ಮಾಯೀ ದೇವಸ್ಥಾನದಲ್ಲಿ ಮೂರ್ನಾಲ್ಕು ಭಜನೆಗಳನ್ನು ಹಾಡಿ, ಚೇತರಿಸುವ ಲಕ್ಷಣ ತೋರಿದ್ದುದು ಅವರ ಅಭಿಮಾನಿಗಳ ಸಂತಸಕ್ಕೆ ಕಾರಣವಾಗಿತ್ತು. ದೇಶ ವಿದೇಶಗಳಲ್ಲೂ ತಮ್ಮ ಭಾಗವತಿಕೆಯ ಕಂಪನ್ನು ಹರಡಿಸಿದ ಪ್ರಸಾದ್ ಬಲಿಪರು ನೂರಾರು ಸನ್ಮಾನಗಳನ್ನು ಪಡೆದಿದ್ದರು.

ಕೊರೋನಾದಿಂದಾಗಿ ಕಳೆದ ಎರಡು ವರ್ಷಗಳಿಂದ ನಮ್ಮ ಮೂಡುಬಿದಿರೆಯ ಯಕ್ಷಸಂಗಮದ ಸಂಮಾನ - ಕೂಟ ನಡೆದಿರಲಿಲ್ಲ. ಆದರೂ ಈ ವರ್ಷ ನಾವು ಕೂಟ ನೆರವೇರಿಸದಿದ್ದರೂ ಯಕ್ಷಸಂಗಮದ ವತಿಯಿಂದ ಬಲಿಪ ಪ್ರಸಾದ್ ಬಲಿಪರಿಗೆ ಅವರ ಸ್ವಗೃಹದಲ್ಲೇ ತಂದೆಯವರೊಂದಿಗೆಯೇ ಅವರಿಗೆ ಸಂಮಾನ ಮಾಡಿದ್ದೆವು. ಆಗ ತುಂಬಾ ಉತ್ಸಾಹದಿಂದ ನಮ್ಮನ್ನು ಸ್ವಾಗತಿಸಿ, ಆಧರಿಸಿ, ಸತ್ಕರಿಸಿದ ಪ್ರಸಾದರು, ತಾವೇ ಹಲವಾರು ಫೋಟೋಗಳನ್ನು ಕ್ಲಿಕ್ಕಿಸಿ ತಮ್ಮ ಮನೆಯಲ್ಲಿ ನೆಟ್ವರ್ಕ್ ಸಮಸ್ಯೆಯಿದ್ದ ಕಾರಣ ಮನೆಯ ಹತ್ತಿರದ ಎತ್ತರದ ಪ್ರದೇಶಕ್ಕೆ ಹೋಗಿ ಆ ಫೋಟೋಗಳನ್ನು ನನಗೆ ವಾಟ್ಸಾಪ್ ಮೂಲಕ ಕೂಡಲೇ ಹಂಚಿ ಸಂಭ್ರಮಿಸಿದ ಆ ಕ್ಷಣಗಳು ಈಗಲೂ ನನ್ನ ಮನಸ್ಸಿನಿಂದ ಮರೆಯಾಗಿಲ್ಲ.

Recommended Video

David Warner ಹಂಚಿಕೊಂಡ ಹೊಸ ವಿಡಿಯೋ ವೈರಲ್ | Oneindia Kannada

ಆ ಸಂದರ್ಭ ಈಗಲೂ ನನ್ನ ಸ್ಮೃತಿಪಟಲದಲ್ಲಿ ಸ್ಥಾಯಿಯಾಗಿದೆ. ಸರಳ ವ್ಯಕ್ತಿತ್ವದ ಪ್ರಸಾದರು ನಮ್ಮನ್ನು ಅಗಲಿದ್ದಾರೆ ಎಂಬುದನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಲೂ ಇಲ್ಲ. ತಮ್ಮ ತಂದೆ 85 ವರ್ಷದ ಯಕ್ಷರಂಗದ ದಂತಕಥೆ, ಯಕ್ಷರಂಗದ. ಅಪೂರ್ವ ಸಂಪನ್ಮೂಲ ವ್ಯಕ್ತಿ ಎನಿಸಿದ ಬಲಿಪ ನಾರಾಯಣ ಭಾಗವತರು, ತಮ್ಮ ಧರ್ಮಪತ್ನಿ, ಮೂವರು ಹೆಣ್ಣು ಮಕ್ಕಳು, ಮಾಧವ ಬಲಿಪ, ಶಿವಶಂಕರ ಬಲಿಪ ( ಇವರೂ ಭಾಗವತರು), ಶಶಿಧರ ಬಲಿಪ ಮೂವರು ಸಹೋದರರು ಸಹಿತ ಬಂಧು ಬಳಗ ಹಾಗೂ ಸಾವಿರಾರು ಅಭಿಮಾನಿಗಳನ್ನು ಅಗಲಿರುವ ಪ್ರಸಾದ್ ಬಲಿಪರಿಗೆ ದಿವ್ಯ ಸಾಯುಜ್ಯ ದೊರಕಲಿ ಹಾಗೂ ಅವರ ಕುಟುಂಬಸ್ಥರಿಗೆ ಹಾಗೂ ಅಭಿಮಾನಿಗಳಿಗೆ ಈ ವಿಷಾದದ ಸುದ್ದಿಯ ಶೋಕವನ್ನು ಭರಿಸುವ ಶಕ್ತಿ ನೀಡಲಿ ಎಂದು ಯಕ್ಷಸಂಗಮ ಮೂಡುಬಿದಿರೆ ಹಾಗೂ ಸರ್ವ ಕಲಾಭಿಮಾನಿಗಳ ಪರವಾಗಿ ಕಲಾಮಾತೆ ಹಾಗೂ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.

English summary
Yakshagana bhagavatha Prasad Bhat Balipa (46) passed away at a hospital in Mangaluru on Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X