ದಕ್ಷಿಣ ಕನ್ನಡದಲ್ಲಿ ಸಂತ್ರಸ್ತರಿಗೆ ತಕ್ಷಣ 10 ಸಾವಿರ ರೂಪಾಯಿ- ಯಡಿಯೂರಪ್ಪ
Recommended Video
ಮಂಗಳೂರು ಆಗಸ್ಟ್ 12: ಮಳೆ ಹಾನಿ ಪರಿಶೀಲನೆಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ನೆರೆ ಪೀಡಿತ ಕುಕ್ಕಾವು ಗ್ರಾಮಕ್ಕೆ ಭೇಟಿ ನೀಡಿದ ಅವರು ಸಂತ್ರಸ್ತರೊಂದಿಗೆ ಚರ್ಚೆ ನಡೆಸಿ ಅಹವಾಲು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, "ಬೆಳ್ತಂಗಡಿ ವ್ಯಾಪ್ತಿಯಲ್ಲಿ ನೆರೆ ಹಾವಳಿಯಿಂದ ಸಾಕಷ್ಟು ಹಾನಿಯಾಗಿದೆ. ಹಲವು ಮನೆ, ತೋಟಗಳು, ಸೇತುವೆ ನಾಶವಾಗಿವೆ. ಜನರು ಕೂಡಾ ಸಂಕಷ್ಟದಲ್ಲಿದ್ದು, ನಿರಾಶ್ರಿತರ ಕೇಂದ್ರಕ್ಕೆ ಅವರನ್ನು ರವಾನಿಸಲಾಗಿದೆ. ಸಂತ್ರಸ್ತರು ತಮ್ಮ ಬೇಡಿಕೆ ಪೂರೈಕೆಗೆ ಮನವಿ ಸಲ್ಲಿಸಿದ್ದಾರೆ" ಎಂದು ಹೇಳಿದರು.
"ಮಳೆ ನಿಂತ ಮೇಲೆ ಸಂತ್ರಸ್ತರಿಗೆ ಮನೆ ಕಟ್ಟಿಸುವ ವ್ಯವಸ್ಥೆ ಮಾಡಲಾಗುವುದು. ಎರಡು ಬೆಡ್ ರೂಂ ಮನೆಗಳನ್ನು ಕಟ್ಟುವ ತೀರ್ಮಾನ ತೆಗೆದುಕೊಳ್ಳಲಾಗುವುದು. ನಷ್ಟದ ಬಗ್ಗೆ ವರದಿ ಸಿದ್ಧ ಮಾಡುತ್ತೇವೆ. ಮನೆ ನಿರ್ಮಾಣಕ್ಕೆ ಕನಿಷ್ಠ ಆರು ತಿಂಗಳು ಬೇಕು. ಕೃಷಿ, ಬೆಳೆ ಹಾನಿಗೂ ಸೂಕ್ತ ಪರಿಹಾರ ಕೊಡುತ್ತೇವೆ. ಹೊಸ ಮನೆ ನಿರ್ಮಾಣಕ್ಕೆ ಐದು ಲಕ್ಷ ಪರಿಹಾರ, ಭಾಗಶಃ ಹಾನಿಗೆ 1 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು" ಎಂದು ತಿಳಿಸಿದರು.

ನಿರಾಶ್ರಿತರ ಶಿಬಿರದಲ್ಲಿ ಉಳಿದವರ ಜತೆ ಚರ್ಚೆ ಮಾಡಲಾಗುವುದು ಎಂದು ಹೇಳಿದ ಅವರು, ಕೇಂದ್ರ ಹಾಗೂ ರಾಜ್ಯ ಸರಕಾರ ಸಂತ್ರಸ್ತರ ಜತೆಗಿದೆ. ತಾತ್ಕಾಲಿಕವಾಗಿ ಪ್ರತಿಯೊಬ್ಬರಿಗೂ 10 ಸಾವಿರ ರೂಪಾಯಿ ನೀಡಲಾಗುವುದು ಎಂದು ಅವರು ಹೇಳಿದರು












Click it and Unblock the Notifications