ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಯಡಿಯೂರಪ್ಪ, ರಾಘವೇಂದ್ರ ಲೋಕಸಭೆಗೆ ಸ್ಪರ್ಧಿಸಲ್ಲ'

By Mahesh
|
Google Oneindia Kannada News

ಮಂಗಳೂರು, ಜ.26: ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮತ್ತೊಮ್ಮೆ ಮೌನ ಮುರಿದಿದ್ದಾರೆ. ತುಮಕೂರು, ಶಿವಮೊಗ್ಗ ಅಥವ ಯಾವುದೇ ಕ್ಷೇತ್ರದಿಂದ ತಾವು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಗಣರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಸ್ಪಷ್ಟಪಡಿಸಿದ್ದಾರೆ. ಪಕ್ಷ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವಂತೆ ಮಾಡುವುದು ತಮ್ಮ ಗುರಿ ಎಂದು ಅವರು ಹೇಳಿದ್ದಾರೆ.

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಸಾಧ್ಯತೆಯನ್ನು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಭಾನುವರ ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಮಂಗಳೂರಿನ ಕದ್ರಿ ಪಾರ್ಕ್​ನಲ್ಲಿ ನಗೆ ಕ್ಲಬ್, ರೋಟರಿ ಕ್ಲಬ್ ಸದಸ್ಯರೊಂದಿಗೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, 'ನಾನಾಗಲಿ, ನನ್ನ ಪುತ್ರ ರಾಘವೇಂದ್ರನಾಗಲಿ ಮಹಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ನನ್ನ ಕುಟುಂಬದ ಯಾವ ಸದಸ್ಯರೂ ಕೂಡಾ ಈ ಬಾರಿ ಚುನಾವಣೆ ಕಣಕ್ಕಿಳಿಯುತ್ತಿಲ್ಲ ಎಂದರು.

ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂಬ ಏಕೈಕ ಉದ್ದೇಶದಿಂದ ಬಿಜೆಪಿಯನ್ನು ಬಲಪಡಿಸಲು ನಾನು ಮರಳಿ ಪಕ್ಷಕ್ಕೆ ಬಂದಿದ್ದೇನೆ. ನನ್ನ ಬೆಂಬಲಿಗರನ್ನು ಗುರುತಿಸಿ ಸೂಕ್ತ ಸ್ಥಾನಮಾನ ನೀಡಬೇಕಾದ್ದು ಪಕ್ಷಕ್ಕೆ ಬಿಟ್ಟದ್ದು ಎಂದು ಬಿಎಸ್ ಯಡಿಯೂರಪ್ಪ ಹೇಳಿದರು.ಕರ್ನಾಟಕದಲ್ಲಿ ಕನಿಷ್ಠ 20 ಸೀಟುಗಳನ್ನು ಗೆಲ್ಲಿಸುವುದು ನಮ್ಮ ಗುರಿ ಎಂದರು. ತಾವು ಚುನಾವಣೆಗೆ ಸ್ಪರ್ಧಿಸದೇ ಪಕ್ಷ ಹೆಚ್ಚಿನ ಸ್ಥಾನಗಳನ್ನು ಪಡೆಯಲು ಶ್ರಮಿಸುತ್ತೇನೆ ಎಂದರು.

Yeddyurappa rules out contesting Lok Sabha election 2014

ಯಡಿಯೂರಪ್ಪ ಅವರು ಚುನಾವಣೆಗೆ ಸ್ಪರ್ಧಿಸಿದರೆ ಶಿವಮೊಗ್ಗ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗುತ್ತಾರೆ. ಆದರೆ, ಅವರು ಬಿಜೆಪಿಗೆ ಹೆಚ್ಚು ಸ್ಥಾನ ಸಿಗಲು ರಾಜ್ಯ ಪ್ರವಾಸ ಮಾಡಲು ನಿರ್ಧರಿಸಿದ್ದಾರೆ. ಆದ್ದರಿಂದ ಚುನಾವಣೆಗೆ ಸ್ಪರ್ಧಿಸುವುದಕ್ಕೆ ಯಡಿಯೂರಪ್ಪ ಅವರು ಆಲೋಚನೆ ನಡೆಸುತ್ತಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಬಿಜೆಪಿಗೆ ಕಹಿ ಅನುಭವವಾಗಿದ್ದು, ಅದನ್ನು ಮರೆಯಲು ಲೋಕಸಭೆ ಚುನಾವಣೆಯಲ್ಲಿ ಗೆಲುವು ಅನಿವಾರ್ಯವಾಗಿದೆ. ಆದ್ದರಿಂದ ಯಡಿಯೂರಪ್ಪ ಅವರಂತಹ ಪ್ರಭಾವಿ ನಾಯಕರ ಅಗತ್ಯವಿದೆ. ಅದರಲ್ಲೂ ಯಡಿಯೂರಪ್ಪ ಬಿಜೆಪಿಗೆ ಮರಳಿದ ನಂತರ ಜಿಲ್ಲೆಯಲ್ಲಿ ಬಿಜೆಪಿ ಶಕ್ತಿ ಹೆಚ್ಚಿದೆ. ಆದ್ದರಿಂದ ಅವರನ್ನು ಕಣಕ್ಕೆ ಇಳಿಸಲು ಚಿಂತನೆ ನಡೆದಿದೆ.

ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂಬ ಏಕೈಕ ಉದ್ದೇಶದಿಂದ ಬಿಜೆಪಿಯನ್ನು ಬಲಪಡಿಸಲು ನಾನು ಮರಳಿ ಪಕ್ಷಕ್ಕೆ ಬಂದಿದ್ದೇನೆ. ನನ್ನ ಬೆಂಬಲಿಗರನ್ನು ಗುರುತಿಸಿ ಸೂಕ್ತ ಸ್ಥಾನಮಾನ ನೀಡಬೇಕಾದ್ದು ಪಕ್ಷಕ್ಕೆ ಬಿಟ್ಟದ್ದು ಎಂದು ಬಿಎಸ್ ಯಡಿಯೂರಪ್ಪ ಹೇಳಿದರು. [ಶೋಭಾ ಕರಂದ್ಲಾಜೆ ಕಥೆಯೇನು?]

ಜಿ.ಎಸ್.ಬಸವರಾಜ್ ಮತ್ತು ರಾಜ್ಯ ಬಿಜೆಪಿ ನಾಯಕರ ಮನವೊಲಿಸಿ ಅವರನ್ನು ಬಿಜೆಪಿಗೆ ಮರಳುವಂತೆ ಮಾಡುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮಂಗಳವಾರ ತುಮಕೂರಿನಲ್ಲಿ ಹೇಳಿದ್ದರು. ಅವರು ಬಸವರಾಜ್ ಮನವೊಲಿಸಿ ಬಿಜೆಪಿಗೆ ಮರಳುವಂತೆ ಮಾಡುತ್ತಾರೆಯೇ ಕಾದು ನೋಡಬೇಕು. [ಬಸವರಾಜ್ ಮನವೊಲಿಸುವೆ]

English summary
Former Chief Minister BS Yeddyurappa who recently made a come back in to BJP today said He is not contesting Lok Sabha election 2014. He also ruled out his son or immediate member of him family would enter political fray
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X