ದಕ್ಷಿಣ ಕನ್ನಡದ ಕುಕ್ಕಾವು ಗ್ರಾಮದತ್ತ ಯಡಿಯೂರಪ್ಪ...

ಮಂಗಳೂರು, ಆಗಸ್ಟ್ 12: ಭಾರೀ ಮಳೆ ಹಾಗೂ ಪ್ರವಾಹದಿಂದ ನಲುಗಿದ್ದ ಬಂಟ್ವಾಳ ಮತ್ತು ಬೆಳ್ತಂಗಡಿ ಪ್ರದೇಶಗಳಲ್ಲಿ ಪ್ರವಾಹದ ನೀರು ಇಳಿದಿದ್ದು, ಮಳೆಹಾನಿ ಪರಿಶೀಲನೆಗಾಗಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದಾರೆ.

ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಬಿ.ಎಸ್ ಯಡಿಯೂರಪ್ಪ, ನೇರವಾಗಿ ರಸ್ತೆ ಮಾರ್ಗದ ಮೂಲಕ ಬೆಳ್ತಂಗಡಿ ತಾಲೂಕಿನ ನೆರೆ ಪೀಡಿತ ಕುಕ್ಕಾವು ಗ್ರಾಮಕ್ಕೆ ತೆರಳಿದರು. ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸಂಸದ ನಳಿನ್ ಕುಮಾರ್ ಕಟೀಲ್ ಸ್ವಾಗತಿಸಿದರು.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ ಬಳಿಕ ಮಧ್ಯಾಹ್ನ 1.30ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿರುವ ಯಡಿಯೂರಪ್ಪನವರು ಮಂಜುನಾಥನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಂತರ ಧರ್ಮಸ್ಥಳದಲ್ಲಿಯೇ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂಸದ, ಶಾಸಕರೊಂದಿಗೆ ಚರ್ಚೆ ನಡೆಸಲಿದ್ದಾರೆ.

Yeddyurappa Visited Kukkavu In Dakshina Kannada

ನಂತರ ಬಂಟ್ವಾಳ ತಾಲೂಕಿನ ನೆರೆಪೀಡಿತ ಪ್ರದೇಶಕ್ಕೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಯಡಿಯೂರಪ್ಪ ಸಂಜೆ 5.15ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಮೈಸೂರಿಗೆ ತೆರಳಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+